ಕಲಬುರಗಿ: ನಗರದ ಗೋದೂತಾಯಿ ದೊಡ್ಡಪ್ಪ ಅಪ್ಪ ಮಹಿಳಾ ಪದವಿ ಮಹಾವಿದ್ಯಾಲಯದಲ್ಲಿ ಪದ್ಮಶ್ರೀ ತುಳಸಿಗೌಡ ಅವರಿಗೆ ಅವ್ವ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರ್ ಪರ್ಸನ್ ಮಾತೋಶ್ರೀ ಡಾ. ದಾಕ್ಷಾಯಣಿ ಎಸ್ ಅಪ್ಪ, ಪ್ರಾಂಶುಪಾಲರಾದ ಜಾನಕಿ ಹೊಸೂರ ಮತ್ತು ಕಾಲೇಜಿನ ಅಧ್ಯಾಪಕ ವರ್ಗದವರು,ಕಲಾವಾಣಿ ವಿದ್ಯಾರ್ಥಿ ಸಂಘಟನೆಯ ಪದಾಧಿಕಾರಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.