ಕಲಬುರಗಿ: ಹುಚ್ಚು ನಾಯಿಯೊಂದು ದಾಳಿ ಮಾಡಿ ಹತ್ತಕ್ಕೂ ಹೆಚ್ಚು ಜನರಿಗೆ ಕಚ್ಚಿ ಗಾಯಗೊಳಿಸಿದ ಘಟನೆ ಚಿಂಚೋಳಿ ತಾಲೂಕಿನ ಐನ್ನೊಳ್ಳಿ ಗ್ರಾಮದಲ್ಲಿ ನಿನ್ನೆ ಸಾಯಂಕಾಲ ನಡೆದಿದೆ. ಭಾನುವಾರ ಕಲಬುರಗಿ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳಿಂದ ವರದಿ ಬೆಳಕಿಗೆ ಬಂದಿದೆ.
ಐನ್ನೊಳಿ ಗ್ರಾಮದ ಹೊಲದಲ್ಲಿ ಕೆಲಸ ಮಾಡುತ್ತಿದ ರೈತರ ಮೇಲೆ ಏಕಾಏಕಿಯಾಗಿ ಮೈ ಮೇಲೆ ಎರಗಿ ಕೈ, ಕಾಲು, ತೊಡೆಯ ಭಾಗಕ್ಕೆ ಕಚ್ಚಿ ಗಾಯಗೊಳಿಸಿದೆ. ಹಾಗೂ ಜಾನುವಾರುಗಳ ಮೇಲೇಯೂವ ದಾಳಿ ಮಾಡಿದೆ ಎಂದು ತಿಳಿದು ಬಂದಿದೆ.
ಇನ್ನು ಜನರು ರೊಚ್ಚಿಗೆದ್ದು ಬಡಿಗೆಯಿಂದ ಹೊಡೆದು ಹುಚ್ಚು ನಾಯಿಯನ್ನು ಓಡಿಸಲಾಗಿದ್ದು ಗ್ರಾಮದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಗಾಯಗೊಂಡವರನ್ನು ಚಿಂಚೋಳಿ ತಾಲ್ಲೂಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿ ಜಿಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಗ್ರಾಮದಲ್ಲಿ ಬೀದಿ ನಾಯಿಗಳ ಕಾಟ ಹೆಚ್ಚಾಗಿದ್ದು ಇವುಗಳ ನಿಯಂತ್ರಣಕ್ಕೆ ಸ್ಥಳೀಯ ಆಡಳಿತ ಕ್ರಮ ವಹಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.