ಕಲಬುರಗಿ: ತವರು ಮನೆಯಿಂದ ವರದಕ್ಷಿಣೆ ತರುವಂತೆ ಮಹಿಳೆಗೆ ಕಿರುಕುಳ ನೀಡಿ ಹೊಡೆದು ಹತ್ಯೆ ಮಾಡಿ ನಂತರ ಆತ್ಮಹತ್ಯೆ ಎಂದು ಬಿಂಬಿಸುವಂತೆ ನೇಣು ಬಿಗಿದ ಕೊಲೆ ಮಾಡಿದ ಘಟನೆ ಕಲಬುರಗಿ ತಾಲೂಕಿನ ಸೀತನೂರ ಗ್ರಾಮದಲ್ಲಿ ನಡೆದಿದೆ
ಗವಾರ ಗ್ರಾಮದ ಮಗಳಾದ ಸಾಯಿದಾ ಬೇಗಂ (21) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ. ಮೂರು ವರ್ಷದ ಹಿಂದೆ ಸೀತನೂರು ಗ್ರಾಮದ ಖಾಜಾ ಹುಸೇನ್ ಎಂಬ ವ್ಯಕ್ತಿಯ ಜೊತೆಗೆ ಸಯಿದಾ ಬೇಗಂ ಎರಡನೇಯ ಮದುವೆ ಮಾಡಿ ಕೊಡಲಾಗಿತ್ತು.
ಕೃಷಿ ಮಾಡುತ್ತಿದ್ದ ಖಾಜಾ ಹುಸೇನ್ ಈ ಹಿಂದೆಯು ವರದಕ್ಷಿಣೆ ವಿಚಾರವಾಗಿ ಸಾಯಿದಾ ಬೇಗಂಗೆ ಹೊದೆಡು ತವರು ಮನೆಗೆ ಕಳುಹಿಸಿದ, ಗ್ರಾಮದ ಜನರ ಹಿರಿಯರು ಕೂಡಿ ರಾಜಿ ಪಂಚಾಯತಿ ಮಾಡಿ ಸಯಿದಾ ಬೇಗಂಗೆ ಮತ್ತೆ ಗಂಡನ ಮನೆಗೆ ಕಳುಹಿಸಲಾಗಿತ್ತು.
ರಾಜಿ ಪಂಚಾಯತಿಯಿಂದ ಅಸಮಾಧಾನವಾಗದ ಖಜಾ ಹುಸೇನ್ ಪದೇ ಪದೇ ಬಂಗಾರ ತರುವಂತೆ ಮತ್ತೆ ಕಿರುಕುಳ ನೀಡಲು ಪ್ರಾರಂಭಿಸಿದ. ನಿನ್ನೆ ಮಧ್ಯಾನ್ಹ ಸಾಯಿದಾ ಬೇಗಂಗೆ ಹೊಡೆದು ಆಕೆ ಸಾವನಪ್ಪಿದ ಬಳಿಕ ದೇಹವನ್ನು ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿ ಫರತಬಾದ ಪೊಲೀಸ್ ಠಾಣೆಗೆ ದೂರು ನೀಡಲು ತೆರಳಿದ್ದಾನೆ ಎಂದು ತಿಳಿದುಬಂದಿದೆ.
ಕಲಬುರಗಿ ಜಿಲ್ಲಾ ಆಸ್ಪತ್ರೆಯಲ್ಲಿ ಮರಣೋತರ ಪರೀಕ್ಷೆಗೆ ಮೃತದೆಹ ರವಾನಿಸಿದ ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂಧನ ಮುಗಿಲು ಮುಟ್ಟಿದ್ದು ಇದು ಆತ್ಮಹತ್ಯೆ ಅಲ್ಲ ಕೊಲೆಯಂದು ಆರೋಪಿಸಿದ್ದಾರೆ.
ಈ ಕುರಿತು ಫರಹತಬಾದ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…