ಸುರಪುರ: ಬೈರಿಮರಡಿ ಗ್ರಾಮದ ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯನ್ನು ಅಕ್ರಮವಾಗಿ ಗೌರವಧನ ಸೇವೆಯಿಂದ ಬಿಡುಗಡೆಗೊಳಿಸಿರುವ ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆ ಯೋಜನಾಧಿಕಾರಿ ಅನಿಲ್ ಕಾಂಬ್ಳೆ ವಿರುದ್ಧ ಇದೇ 12ನೇ ತಾರಿಖು ಪ್ರತಿಭಟನೆ ನಡೆಸುವುದಾಗಿ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ವೆಂಕಟೇಶ ನಾಯಕ ಬೈರಿಮರಡಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು,ಬೈರಿಮರಡಿ ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಒಬ್ಬ ವಿಧವೆ ಮಹಿಳೆಯಾಗಿದ್ದು,ಆ ಮಹಿಳೆಯ ವಿರುದ್ಧ ದುರುದ್ದೇಶ ದಿಂದ ಕೆಲವರು ಪೊಲೀಸ್ ದೂರು ನೀಡಿದ್ದಾರೆ.ಆದರೆ ಆ ಮಹಿಳೆಯ ಮೇಲೆ ಯಾವುದೇ ಅಪರಾಧ ಸಾಬೀತಾಗಿಲ್ಲ,ಆದರೂ ಸಿಡಿಪಿಓ ನಿಯಮ ಮೀರಿ ಅವರನ್ನು ಗೌರವಧನ ಸೇವೆಯಿಂದ ಬಿಡುಗಡೆಗೊಳಿಸಿ,ಒಂದುವರೆ ತಿಂಗಳಿನಿಂದ ಕೆಲಸಕ್ಕೆ ಹಾಜರುಪಡಿಸಿಕೊಳ್ಳದೆ ಸತಾಯಿಸುತ್ತಿದ್ದಾರೆ.
ಸಿಡಿಪಿಓ ಅವರ ಈ ನಿಯಮಬಾಹಿರ ನಡೆಯನ್ನು ಖಂಡಿಸಿ ಇದೇ ಮಂಗಳವಾರ 12ನೇ ತಾರಿಖು ಸಿಡಿಪಿಓ ಕಚೇರಿ ಮುಂದೆ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ ನಡೆಸಲಿದೆ ಎಂದು ಅವರು ಪತ್ರಿಕಾ ಹೇಳಿಕೆ ಮೂಲಕ ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…