ಪಾಲಿಕೆ ಸಭೆಯಲ್ಲಿ ಗೈರು ಹಾಜರಾದ ಅಧಿಕಾರಿ/ಸಿಬ್ಬಂದಿಗೆ ನೋಟಿಸ್ ನೀಡಲು ಆದೇಶ

0
25

ಕಲಬುರಗಿ: ನಗರದ ಪಾಲಿಕೆಯ ಕೇಂದ್ರ ಕಛೇರಿಯ ಸಭಾಭವನದಲ್ಲಿ ಲೆಕ್ಕಸ್ಥಾಯಿ ಸಮಿತಿ ಅಧ್ಯಕ್ಷ ಸಾಜಿದ ಕಲ್ಯಾಣಿ ಅವರ ಅಧ್ಯಕ್ಷತೆಯಲ್ಲಿ ಸಭೆಯಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಗೈರು ಹಾಜರಾಗಿರುವುದರಿಂದ ಮಹಾಪೌರರಾದ ವಿಶಾಲ್ ದರ್ಗಿ ನೋಟಿಸ್ ನೀಡುವಂತೆ ಸೂಚನೆ ನೀಡಿದ್ದಾರೆ.

ಸಭೆಗೆ ಸುಮಾರು 10 ದಿನಗಳ ಹಿಂದೆ ಪಾಲಿಕೆಯ ಸಭಾಶಾಖೆಯಿಂದ ಸಂಬಂಧಪಟ್ಟ ಶಾಖೆಗಳಿಗೆ ಸಭಾ ಕಾರ್ಯಸೂಚಿಯನ್ನು ನೀಡಿ, ವಿಷಯಕ್ಕೆ ಸಂಬಂಧಪಟ್ಟಂತೆ ಪೂರಕ ಟಿಪ್ಪಣಿಯನ್ನು ಸಲ್ಲಿಸುವಂತೆ ಸೂಚಿಸಲಾಗಿತ್ತು. ಸಂಬಂಧಪಟ್ಟ ಶಾಖೆಗಳಿಂದ ಮುಂಚಿತವಾಗಿ ಸ್ಥಾಯಿ ಸಮಿತಿಯ ಯಾವ ಸದಸ್ಯರಿಗೂ ಟಿಪ್ಪಣಿ ನೀಡಿರುವುದಿಲ್ಲ ಮತ್ತು ಸಂಬಂಧಪಟ್ಟ ಕೆಲವು ಶಾಖೆಯ ಅಧಿಕಾರಿಗಳು ಸಭೆಗೆ ಗೈರು ಹಾಜರಿದ್ದರಿಂದ ಮಹಾಪೌರರಾದ ವಿಶಾಲ್ ದರ್ಗಿ ಅವರು ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ನೋಟಿಸ್ ನೀಡಲು ಆದೇಶ ನೀಡಿದ್ದಾರೆ.

Contact Your\'s Advertisement; 9902492681

ಈ ವಿಷಯವಾಗಿ ಸ್ಥಾಯಿ ಸಮಿತಿಯ ಅಧ್ಯಕ್ಷರು, ಪೂಜ್ಯ ಮಹಾಪೌರರು, ಉಪ ಮಹಾಪೌರರು ಹಾಗೂ ಲೆಕ್ಕ ಸ್ಥಾಯಿ ಸಮಿತಿಯ ಸರ್ವ ಸದಸ್ಯರು ಅಸಮಧಾನ ವ್ಯಕ್ತಪಡಿಸುತ್ತಾ ಸಭೆಯನ್ನು ಅನಿರ್ದಿಷ್ಟವಧಿಗಾಗಿ ಮುಂದೂಡಲಾಯಿತು.

ಸುಮಾರು 20 ವರ್ಷವಾದರೂ ಪಾಲಿಕೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸುಧಾರಿಸುವುದಿಲ್ಲವೇಂದು ಪೂಜ್ಯ ಮಹಾಪೌರರು ಅಸಮಾಧಾನ ವ್ಯಕ್ತಪಡಿಸಿದರು. ಹಾಗೂ ಗೈರು ಹಾಜರಾದ ಅಧಿಕಾರಿ/ಸಿಬ್ಬಂದಿ ರವರಿಗೆ ನೋಟಿಸ್ ನೀಡುವಂತೆ ಆದೇಶಿಸಿದರು.

ಸಭೆಯಲ್ಲಿ ಸ್ಥಾಯಿ ಸಮಿತಿಯ ಅಧ್ಯಕ್ಷರು, ಮಹಾಪೌರರು, ಉಪ ಮಹಾಪೌರರು ಹಾಗೂ ಲೆಕ್ಕ ಸ್ಥಾಯಿ ಸಮಿತಿಯ ಸರ್ವ ಸದಸ್ಯರು ಹಾಜರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here