ಕಲಬುರಗಿ: ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ವತಿಯಿಂದ ನಗರದ ಆರಾಧನಾ ಪಿಯು ಕಾಲೇಜಿನ ಸಭಾಂಗಣದಲ್ಲಿಂದು ‘ವಚನ ಸಾಹಿತ್ಯ ಮತ್ತು ಮಾನವ ಹಕ್ಕುಗಳು’ ಕುರಿತ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಹಿರಿಯ ಸಾಹಿತಿ ಡಾ.ಪ್ರಭು ಖಾನಾಪುರೆ, ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಬಸವಾದಿ ಶರಣರು ವರ್ಗ-ಜಾತಿ ರಹಿತ ಸಮಾಜವನ್ನು ನಿರ್ಮಾಣಕ್ಕೆ ಮುಂದಾದರು. ಶರಣರ ತತ್ವಗಳನ್ನು ಇಂದು ನಾವೆಲ್ಲರೂ ಪಾಲಿಸಬೇಕು. ಅಂದಾಗ ಮಾತ್ರ ಈ ಸಮಾಜದಲ್ಲಿ ಶಾಂತಿಯನ್ನು ನೆಲೆಸಲಿಕ್ಕೆ ಸಾಧ್ಯವಾಗುತ್ತದೆ ಎಂದರು.
ಕಾಲೇಜಿನ ಪ್ರಾಚಾರ್ಯ ಚೇತನಕುಮಾರ ಗಾಂಗಜೀ ಅಧ್ಯಕ್ಷತೆ ವಹಿಸಿದ್ದರು. ಪರಿಷತ್ತಿನ ಜಿಲ್ಲಾಧ್ಯಕ್ಷ ಪ್ರೊ.ಕುಪೇಂದ್ರ ಪಾಟೀಲ, ಪರಿಷತ್ತಿನ ಪ್ರಮುಖರಾದ ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ಡಾ.ಶರಣಬಸಪ್ಪ ವಡ್ಡನಕೇರಿ, ಬಸವರಾಜ ಜನಕಟ್ಟಿ, ಶಿವಾನಂದ ಮಠಪತಿ, ಡಾ.ಮಲ್ಲಿಕಾರ್ಜುನ ವಡ್ಡನಕೇರಿ, ಪ್ರಾಧ್ಯಾಪಕ ಕಾಶಿನಾಥ ವೇದಿಕೆ ಮೇಲಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…