ಬಿಸಿ ಬಿಸಿ ಸುದ್ದಿ

ಅಫಜಲಪುರ; ಪ್ರೌಢಶಾಲಾ, ಕಾಲೇಜುಗಳ ಪ್ರಾಂಶುಪಾಲರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ: ನಗರದ ಎನ್.ವಿ ಬಾಲಕರ ಪ್ರೌಢಶಾಲೆಯಲ್ಲಿ ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಹಾಗೂ ಕಿರಿಯ ಕಾಲೇಜುಗಳ ಪ್ರಾಂಶುಪಾಲರ ಸಂಘದ ಜಿಲ್ಲಾಧ್ಯಕ್ಷ ಮರೆಪ್ಪ ಬಸವಪಟ್ಟಣ ಹಾಗೂ ಕಾರ್ಯದರ್ಶಿ ಮಹೇಶ ಹಿರೇಮಠ ಇವರ ನೇತೃತ್ವದಲ್ಲಿ ಅಫಜಲಪುರ ತಾಲೂಕಿನ ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಹಾಗೂ ಕಿರಿಯ ಕಾಲೇಜುಗಳ ಪ್ರಾಂಶುಪಾಲರ ಸಂಘದ ನೂತನ ಪದಾಧಿಕಾರಿಗಳ ಸರ್ವಾನುಮತ ದಿಂದ ಆಯ್ಕೆ ಮಾಡಲಾಯಿತು.

(ದೇವಲ ಗಾಣಗಾಪುರದ ಟಿ ಕೆ ಹೇರೂರ ಅನುದಾನಿತ ಪ್ರೌಢಶಾಲೆಯ ಮುಖ್ಯ ಗುರು ರಾಜಶೇಖರ ತಲಾರಿ ಅಧ್ಯಕ್ಷ), (ಬಿದನೂರನ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಗುರು ಸುಧಾ ಕುಲಕರ್ಣಿ ಉಮದಿ ಉಪಾಧ್ಯಕ್ಷೆ), (ಸಾಗನೂರನ ಸರಕಾರಿ ಪ್ರೌಢಶಾಲೆಯ ಮುಖ್ಯಗುರು ಮಲಕಣ್ಣ ಹಚಡದ ಪ್ರಧಾನ ಕಾರ್ಯದರ್ಶಿ), (ದೇವಲ ಗಾಣಗಾಪುರನ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಗುರು ಇಸ್ಮಾಯಿಲ್ ಸವಾರ್ ಸಹ ಕಾರ್ಯದರ್ಶಿ), (ಜೇವರ್ಗಿಯ ಶ್ರೀ ಶಾಂತಲಿಂಗೇಶ್ವರ ಅನುದಾನಿತ ಪ್ರೌಢಶಾಲೆಯ ಮುಖ್ಯ ಗುರು ಅನುಪಮಾ ಅಪಗೊಂಡ ಖಜಾಂಚಿ) ಇವರನ್ನು ಸರ್ವಾನುಮತ ದಿಂದ ಆಯ್ಕೆ ಮಾಡಲಾಯಿತು.

ಸಂಘದ ಜಿಲ್ಲಾಧ್ಯಕ್ಷ ಮರೆಪ್ಪ ಬಸವಪಟ್ಟಣ ಮಾತನಾಡುತ್ತಾ ಮುಖ್ಯೋಪಾಧ್ಯಾಯರುಗಳ ಅನೇಕ ಜ್ವಲಂತ ಸಮಸ್ಯೆಗಳನ್ನ ಬಗೆಹರಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು, ಅಲ್ಲದೆ ಈ ವರ್ಷದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಫಲಿತಾಂಶ ಉತ್ತಮ ಪಡಿಸಲು ಜಿಲ್ಲೆಯ ಪ್ರತಿ ತಾಲೂಕಿನಲ್ಲಿ ರಾಜ್ಯ ಸಂಪನ್ಮೂಲ ವ್ಯಕ್ತಿಗಳನ್ನ ಕರೆಸಿ, ವಿಶೇಷ ಕಾರ್ಯಗಾರ ಗಳನ್ನು ಏರ್ಪಡಿಸಲಾಗುವುದು ಜೊತೆಗೆ ಸಂಘದ ವತಿಯಿಂದ ಶಿಕ್ಷಕರಿಗೆ ವಿಶೇಷ ತರಬೇತಿ ನೀಡಲಾಗುವುದು ಎಂದರು.

ಈ ಸಭೆಯಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ರಾಜ್ಯಾಧ್ಯಕ್ಷ ಗಿರೀಶ್ ಕಡಲೇವಾಡ, ಉತ್ತರÀ ಅಧ್ಯಕ್ಷ ವಿಜಯಕುಮಾರ್ ಪಾಟೀಲ್, ಚಾನ್ ಸಾಬ್, ರಾಜು ಹಂಚಾಟೆ, ಪ್ರಭು ಕುಂಬಾರ್, ರಾಜೇಂದ್ರ ರಾಠೋಡ, ಇಬ್ರಾಹಿಂ ಎಸ್, ಶಿವಾನಂದ ಗುಡ್ಡಡಗಿ, ಎಮ್ ಎಚ್ ಬಗಲಿ, ಸಂತೋಷ್ ಡಿ, ಸೋಮು ಇಂಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

emedialine

Recent Posts

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

8 mins ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

10 mins ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

15 mins ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

19 mins ago

ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಬೇಡಿ

ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…

20 mins ago

ಸೇಡಂ: `ಅಮ್ಮ ಪ್ರಶಸ್ತಿ’ ಪ್ರದಾನ ಸಮಾರಂಭ ನಾಳೆ

ಸೇಡಂ (ಕಲಬುರಗಿ);  ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…

42 mins ago