ಕಲಬುರಗಿ: ನಗರದ ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ, ಎಮ್.ಎಸ್. ಇರಾಣಿ ಪದವಿ ಮಹಾವಿದ್ಯಾಲಯದಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುವ ಸಮಾರಂಭವನ್ನು ಕರ್ನಾಟಕ ಕೇಂದ್ರಿಯ ವಿಶ್ವವಿದ್ಯಾಲಯ ಕುಲಸಚಿವರಾದ ಪ್ರೊ. ಆರ್.ಆರ್. ಬಿರಾದಾರ ಅವರು ಉದ್ಘಾಟಿಸಿ ಮಾತನಾಡುತ್ತಾ ಇಂದಿನ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವುದರ ಜೊತೆಗೆ ಜೀವನದಲ್ಲಿ ಶಿಸ್ತನ್ನು ಅಳವಡಿಸಿಕೊಂಡು ಸಮಾಜ ಮತ್ತು ದೇಶವನ್ನು ಕಟ್ಟುವಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ತಂದೆ ತಾಯಿ, ಗುರುಗಳು ಹಾಗೂ ಮಹಾವಿದ್ಯಾಲಯಕ್ಕೆ ಕೀರ್ತಿಯನ್ನು ತಂದು ಕೊಡುವಂತರಾಗಬೇಕೆಂದು ಹೇಳಿದರು.
ಈ ಸಮಾರಂಭದಲ್ಲಿ ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರಾದ ಡಾ. ಶರಣಬಸಪ್ಪ ಹರವಾಳ ಮಾತನಾಡಿ ವಿದ್ಯಾರ್ಥಿಗಳಿಗೆ ಉತ್ತಮವಾದ ಭವಿಷ್ಯವನ್ನು ಕಟ್ಟಿಕೊಂಡು ಸಂಸ್ಥೆ ಮತ್ತು ಮಹಾವಿದ್ಯಾಲಯದ ಕೀರ್ತಿಯನ್ನು ಹೆಚ್ಚಿಸಲು ಸಲಹೆ ನೀಡಿದರು. ಸಾಂಸ್ಕ್ರತಿಕ ಮತ್ತು ಕ್ರೀಡೆಗಳಲ್ಲಿ ಭಾಗವಹಿಸಿ ಬಹುಮಾನಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಮುಖ್ಯ ಅತಿಥಿಗಳಿಂದ ಪ್ರಮಾಣ ಪತ್ರಗಳನ್ನು ನೀಡಿ ಶುಭ ಹಾರೈಸಿದರು.
ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಸಂಚಾಲಕರು ಹಾಗೂ ಆಡಳಿತ ಮಂಡಳಿ ಸದಸ್ಯರಾದ ಸೋಮನಾಥ ಸಿ. ನಿಗ್ಗುಡಗಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು, ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ರಾಜಶೇಖರ ವಿ. ಬೀರನಳ್ಳಿ ಮತ್ತು ಸಾಂಸ್ಕ್ರತಿಕ ಸಲಹೆಗಾರರಾದ ಡಾ. ಮೈತ್ರಾದೇವಿ ಎಸ್. ಹಳೆಮನಿ ಸೇರಿದಂತೆ ಮಹಾವಿದ್ಯಾಲಯದ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದರು. ಕಾರ್ಯಕ್ರಮದ ನಿರೂಪಣೆ ನಾಗರತ್ನ ನೆರವೇರಿಸಿದರು. ಪ್ರಾರ್ಥನಾ ಗೀತೆಯನ್ನು ಕು. ಯಶೋಧಾ ಹಾಡಿದರು. ಸ್ವಾಗತವನ್ನು ಕು. ಪ್ರಸಾದ ಮಾಡಿದರು. ವಂದನಾರ್ಪಣೆಯನ್ನು ಕುಮಾರ. ಪ್ರವೀಣ ನೆರವೇರಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…