ಬಿಸಿ ಬಿಸಿ ಸುದ್ದಿ

ಕಾನೂನು ಮಾಪನಶಾಸ್ತ್ರ ಇಲಾಖೆಗೆ ಸಿಬ್ಬಂದಿಗಳ ಶೀಘ್ರ ನೇಮಕ: ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು; ಕಾನೂನು ಮಾಪನ ಶಾಸ್ತ್ರ ಇಲಾಖೆಯಲ್ಲಿ ಸಿಬ್ಬಂದಿ ಕೊರತೆಯನ್ನು ಸರಿದೂಗಿಸುವ ನಿಟ್ಟಿನಲ್ಲಿ ಖಾಲಿಯಿರುವ ಹುದ್ದೆಗಳ ನೇಮಕಕ್ಕೆ ಶೀಘ್ರವೇ ಕ್ರಮಕೈಗೊಳ್ಳಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಗ್ರಾಹಕರ ವ್ಯವಹಾರಗಳು ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆ ಸಚಿವರಾದ ಕೆ.ಎಚ್.ಮುನಿಯಪ್ಪ ಅವರು ಹೇಳಿದರು.

ವಿಕಾಸಸೌಧದಲ್ಲಿ ಕಾನೂನು ಮಾಪನಶಾಸ್ತ್ರ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ನಂತರ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಕಾನೂನು ಮಾಪನ ಶಾಸ್ತ್ರ ಇಲಾಖೆಯಲ್ಲಿ ಒಟ್ಟು 500 ಹುದ್ದೆಗಳಲ್ಲಿ 200 ಜನರು ಮಾತ್ರ ಕರ್ತವ್ಯ ನಿರ್ವಹಿಸುತ್ತಿದ್ದು; ಇನ್ನೂ 300 ಹುದ್ದೆಗಳು ಖಾಲಿ ಇವೆ. ಖಾಲಿ ಇರುವ ಹುದ್ದೆಗಳನ್ನು ಕರ್ನಾಟಕ ಲೋಕಸೇವಾ ಆಯೋಗ ಅಥವಾ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ತಿಂಗಳೊಳಗೆ ನೇಮಕ ಮಾಡಿಕೊಳ್ಳಲಾಗುವುದು. ಇಲಾಖೆಯಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ನಿಯಮಾನುಸಾರ ಬಡ್ತಿ ನೀಡಲಾಗುವುದು ಎಂದು ತಿಳಿಸಿದರು.

ದೈನಂದಿನ ವ್ಯವಹಾರದಲ್ಲಿನ ತೂಕ ಮತ್ತು ಅಳತೆಯಲ್ಲಿ ನಿಖರತೆಯನ್ನು ಕಾಪಾಡುವ ಮೂಲಕ ಗ್ರಾಹಕರ ಹಿತರಕ್ಷಣೆ ಮಾಡುತ್ತಿರುವ ಕಾನೂನು ಮಾಪನಶಾಸ್ತ್ರ ಇಲಾಖೆಯ ಸದೃಢಗೊಳಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ಹೇಳಿದ ಸಚಿವ ಮುನಿಯಪ್ಪ ಅವರು ಇಲಾಖೆಗೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಕಲ್ಪಿಸುವುದರ ಮೂಲಕ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಇನ್ನಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಿ ಸಾರ್ವಜನಿಕರಿಗೆ ನ್ಯಾಯ ಒದಗಿಸಲಾಗುವುದು ಎಂದು ಹೇಳಿದರು.

*500 ಕೋಟಿ ರಾಜಸ್ವ ಸಂಗ್ರಹ ಗುರಿ*: ಕಾನೂನು ಮಾಪನ ಶಾಸ್ತ್ರ ಇಲಾಖೆಯ ಮೂಲಕ 100 ಕೋಟಿ ರಾಜಸ್ವ ಸಂಗ್ರಹಿಸಲಾಗುತ್ತಿದೆ. ಪ್ರಸಕ್ತ ವರ್ಷ 500 ಕೋಟಿ ರಾಜಸ್ವ ಸಂಗ್ರಹ ಗುರಿ ಹೊಂದಲಾಗಿದೆ ಎಂದು ಸಚಿವ ಮುನಿಯಪ್ಪ ಅವರು ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ವ್ಯಾಪಾರ ವಹಿವಾಟು ಮತ್ತು ಕೈಗಾರಿಕೆಗಳು, ಪೆಟ್ರೋಲ್ ಬಂಕ್‍ಗಳು, ವೇ ಬ್ರಿಡ್ಜ್, ತಾರಾ ಹೋಟೆಲ್‍ಗಳು, ಟರ್ಮಿನಲ್‍ಗಳು, ಎಫ್‍ಸಿಐ, ಕೆಎಫ್‍ಸಿಎಸ್‍ಸಿ, ಸಿಡಬ್ಲ್ಯೂಸಿ, ಎಸ್‍ಡಬ್ಲ್ಯೂಸಿ, ವಿಮಾನನಿಲ್ದಾಣಗಳು, ಎಪಿಎಂಸಿ, ಆಭರಣದ ಅಂಗಡಿಗಳು ಸೇರಿದಂತೆ ಇನ್ನಿತರ ದೈನಂದಿನ ವ್ಯವಹಾರದಲ್ಲಿ ಉಪಯೋಗಿಸುತ್ತಿರುವ ತೂಕ ಮತ್ತು ನಿಖರತೆಯನ್ನು ಕಾಪಾಡುವ ಮೂಲಕ ಗ್ರಾಹಕರ ಹಿತರಕ್ಷಣೆಯನ್ನು ಕಾಯ್ದುಕೊಳ್ಳಲು ಹಾಗೂ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವ ಮೂಲಕ ಸರಿಸುಮಾರು ಸಾವಿರ ಕೋಟಿ ರಾಜಸ್ವವನ್ನು ಸಂಗ್ರಹಿಸಲು ಸಭೆಯಲ್ಲಿ ಸೂಚಿಸಿದ್ದೇನೆ ಎಂದರು.

ಅತೀ ಹೆಚ್ಚು ಗ್ರಾಹಕ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಜನಜಾಗೃತಿ ಮೂಡಿಸಲು ಇಲಾಖೆಯ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ವಿವರಿಸಿದ ಸಚಿವರು ಕಾನೂನು ಮಾಪನಶಾಸ್ತ್ರ ಇಲಾಖೆಯು ಈ ಮೊದಲು 137 ಖಾಸಗಿ ಕಟ್ಟಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ 92 ಸ್ವಂತ ಕಛೇರಿಗಳನ್ನು ಹೊಂದಲಾಗಿದೆ. ಇನ್ನುಳಿದ 45 ಕಛೇರಿಗಳಿಗೂ ಸ್ವಂತ ಕಟ್ಟಡ ಹೊಂದುವ ನಿಟ್ಟಿನಲ್ಲಿ ಅಗತ್ಯ ಕ್ರಮ ವಹಿಸಲು ಸೂಚಿಸಲಾಗಿದೆ ಎಂದರು.

*ಇ-ಮಾಪನ್ ತಂತ್ರಾಂಶ ಮೇಲ್ದರ್ಜೇಗೇರಿಸಲು ಕ್ರಮ*: ಇಲಾಖೆಯು ಇ-ಮಾಪನ್ ತಂತ್ರಾಂಶವನ್ನು ಅಭಿವೃದ್ಧಿ ಪಡಿಸುವಲ್ಲಿ ಕರ್ನಾಟಕ ರಾಜ್ಯವು ದೇಶದಲ್ಲಿ ಪ್ರಪ್ರಥಮವಾಗಿರುತ್ತದೆ. ಇ-ಮಾಪನ್ ತಂತ್ರಾಂಶವನ್ನು ಮತ್ತಷ್ಟು ಮೇಲ್ದರ್ಜೇಗೇರಿಸಲು ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

ಇಲಾಖೆಯು ಸುಗಮವಾಗಿ ಕೆಲಸ ಕಾರ್ಯನಿರ್ವಹಿಸಲು ಅಗತ್ಯವಿರುವ ಲ್ಯಾಪ್ ಟಾಪ್‍ಗಳನ್ನು ಹಾಗೂ ಸರ್ಕಾರಿ ವಾಹನಗಳನ್ನು ತಿಂಗಳೊಳಗೆ ಒದಗಿಸಲಾಗುವುದು ಎಂದರು.

ಇಲಾಖೆಯನ್ನು ಪುನರ್ ರಚಿಸಲು ಕ್ರಮಕೈಗೊಳ್ಳಲಾಗುತ್ತಿದ್ದು, ವೃಂದ ಮತ್ತು ನೇಮಕಾತಿಯನ್ನು ಮಾಡುವ ಮೂಲಕ ಇಲಾಖೆಯನ್ನು ಬಲವರ್ಧನೆಗೊಳಿಸಲು ಉದ್ದೇಶಿಸಲಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳು ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಕಾರ್ಯದರ್ಶಿ ಪ್ರಕಾಶ, ಕಾನೂನು ಮಾಪನ ಶಾಸ್ತ್ರ ಇಲಾಖೆಯ ಕಂಟ್ರೋಲರ್ ಅನಿತಾಲಕ್ಷ್ಮೀ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಇದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

19 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago