ಬಿಸಿ ಬಿಸಿ ಸುದ್ದಿ

ಸಂವಿಧಾನ ಪೀಠಿಕೆ ವಾಚನ; ರಾಜ್ಯ-ದೇಶ-ವಿದೇಶ ಸೇರಿ 2.27 ಕೋಟಿ ಜನರು ನೋಂದಣಿ

ಬೆಂಗಳೂರು; ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ನಮ್ಮ ಭಾರತವಾಗಿದ್ದು, 140 ಕೋಟಿ ಜನರಿಗೆ ಸಮಾನತೆಯ ಜೀವನ ಮಾಡಲು ಅವಕಾಶ ಮಾಡಿಕೊಟ್ಟಿರುವ ನಮ್ಮ ಸಂವಿಧಾನವನ್ನು ಗೌರವಿಸುವ ದೃಷ್ಟಿಯಿಂದ ಯುವಜನರಲ್ಲಿ ಸಂವಿಧಾನ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಸೆಪ್ಟೆಂಬರ್ 15 ರಂದು ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಬೃಹತ್ ಮಟ್ಟದಲ್ಲಿ ಸಂವಿಧಾನ ವಾಚನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಹೆಚ್.ಸಿ. ಮಹದೇವಪ್ಪ ಅವರು ತಿಳಿಸಿದರು.

ಅವರು ಇಂದು ವಿಧಾನಸೌಧದಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಪ್ರಜಾಪ್ರಭುತ್ವ ದಿನಾಚರಣೆಯನ್ನು ಜಗತ್ತಿನಾದ್ಯಾಂತ ಆಚರಿಸಲಾಗುತ್ತಿದೆ. ಜಗತ್ತಿನ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ದೇಶವಾಗಿರುವ ನಮ್ಮ ಭಾರತದ ಸಂವಿಧಾನ ಮಾದರಿ ಸಂವಿಧಾನವಾಗಿದೆ. ಸಂವಿಧಾನದ ಪೀಠಿಕೆ ವಾಚನ ಪ್ರಸ್ತುತ ದಿನಮಾನಗಳಲ್ಲಿ ಆಚರಿಸುವ ಮೂಲಕ ಇದೊಂದು ದೇಶಾದ್ಯಂತ ಮಹತ್ವದ ಚಳುವಳಿಯಾಗಬೇಕು ಎಂದರು.

ಪ್ರಜಾಪ್ರಭುತ್ವದ ವ್ಯವಸ್ಥೆ ಬಲವರ್ಧನೆ ಆಗಬೇಕಾದರೆ ಸಂವಿಧಾನದ ಪೀಠಿಕೆಯನ್ನು ಅರ್ಥೈಸಿಕೊಳ್ಳಬೇಕು. ಸಂವಿಧಾನದ ಪೀಠಿಕೆಯಲ್ಲಿಯೇ ಸಂವಿಧಾನದ ವಿಷಯಗಳು ಅಡಕವಾಗಿವೆ, ಅದನ್ನು ಮಕ್ಕಳಿಗೆ ಬಾಲ್ಯದಿಂದಲೇ ಅರ್ಥಮಾಡಿಸಬೇಕಲ್ಲದೇ ಇಂದಿನ ಯುವಪೀಳಿಗೆಗೆ ಸಂವಿಧಾನದ ಮೂಲ ಉದ್ದೇಶಗಳನ್ನು ತಿಳಿಸಿಕೊಡಬೇಕಾಗಿದೆ.

ಭಾರತ ದೇಶ ವಿವಿಧತೆಯಲ್ಲಿ ಏಕತೆಯನ್ನು ಸಾರುವ ದೇಶವಾಗಿದೆ, ಇದೆಲ್ಲ ಸಾಧ್ಯವಾಗಿರುವುದು ನಮ್ಮ ಸಂವಿಧಾನದಿಂದ, ಯಾವುದೇ ಸಮುದಾಯ ಅಥವಾ ಧರ್ಮ ಪರಸ್ಪರ ದ್ವೇಷ ಅಸೂಯೆಗಳಿಗೆ ಅವಕಾಶ ಕೊಡದೆ ಸಂವಿಧಾನವನ್ನು ರಕ್ಷಣೆ ಮಾಡುವಲ್ಲಿ ಸಫಲವಾಗಬೇಕು. ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸಂವಿಧಾನ ಪೀಠಿಕೆ ಓದುವುದು ಒಂದು ಆಂದೋಲನವಾಗಬೇಕು ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಶಾಲಾ ಕಾಲೇಜುಗಳಲ್ಲಿ, ಸರ್ಕಾರಿ ಕಚೇರಿಗಳಲ್ಲಿ ಸಂವಿಧಾನ ಪೀಠಿಕೆಯನ್ನು ಕಡ್ಡಾಯವಾಗಿ ಓದಿಸಲು ಸರ್ಕಾರ ತೀರ್ಮಾನಿಸಿದ್ದು, ಈಗಾಗಲೇ ಆದೇಶ ಹೊರಡಿಲಾಗಿದೆ. ಮಾನ್ಯ ಮುಖ್ಯಮಂತ್ರಿಗಳು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಕುರಿತು ಸಂಪುಟಸಭೆಯಲ್ಲಿ ಒಪ್ಪಿಗೆ ಪಡೆದಿದ್ದು, ಇದೇ ಸೆಪ್ಟೆಂಬರ್ 15 ರಂದು ಮಾನ್ಯ ಮುಖ್ಯಮಂತ್ರಿಗಳು ಬೆಳಿಗ್ಗೆ 10-00 ಗಂಟೆಗೆ ವಿಧಾನ ಸೌಧ ಮುಂಭಾಗದಲ್ಲಿನ ಭವ್ಯ ಮೆಟ್ಟಿಲುಗಳ ಮೇಲೆ ಹಮ್ಮಿಕೊಳ್ಳಲಾಗಿರುವ ಸಂವಿಧಾನ ಪೀಠಿಕೆ ವಾಚನ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ನಮ್ಮ ಇಲಾಖೆವತಿಯಿಂದ ಹಮ್ಮಿಕೊಳ್ಳಲಾಗಿರುವ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಗೆ ಈಗಾಗಲೇ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆಗಳು ಬಂದಿದ್ದು, ಶಾಲಾ-ಕಾಲೇಜು ಮಕ್ಕಳು, ಹಲವಾರು ಖಾಸಗಿ ಉದ್ಯಮ ಸಂಸ್ಥೆಗಳು, ಸರ್ಕಾರಿ ಇಲಾಖೆಗಳು, ಬ್ಯಾಂಕ್ ಗಳು ಹಾಗೂ ಸಾರ್ವಜನಿಕರು ಸೇರಿದಂತೆ ಇವರೆಗೆ 2ಕೋಟಿ 27 ಲಕ್ಷ 89 ಸಾವಿರಕ್ಕಿಂತಲೂ ಹೆಚ್ಚಿನ ಜನರು ಆನ್‍ಲೈನ್‍ನಲ್ಲಿ ಸಂವಿಧಾನ ದಿನಾಚರಣೆಯ ಸಂವಿಧಾನ ಪೀಠಿಕೆ ವಾಚನಕ್ಕಾಗಿ ಒಪ್ಪಿ ನೊಂದಾಯಿಸಿಕೊಂಡಿದ್ದಾರೆ. ನಾಳೆ ಸೆಪ್ಟೆಂಬರ್ 14 ರ ಸಂಜೆ 6 ಗಂಟೆಯವರೆಗೆ ನೋದಾಯಿಸಿಕೊಳ್ಳಲು ಅವಕಾಶವಿದ್ದು ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ನೊಂದಾಯಿಸಿಕೊಳ್ಳುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಕ್ಯಾಪ್ಟನ್ ಮಣಿವಣ್ಣನ್ ಅವರು ಉಪಸ್ಥಿತರಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

16 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago