ಆಳಂದ: ಕನ್ನಡದ ಖ್ಯಾತ ಮನೋವಿಜ್ಞಾನಿ ಹಾಗೂ ಆಪ್ತ ಸಮಾಲೋಚಕ ಡಾ. ಸಿ ಆರ್ ಚಂದ್ರಶೇಖರ ಅವರ ಉಪನ್ಯಾಸ ಹಾಗೂ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ಆಳಂದ ಪಟ್ಟಣದಲ್ಲಿ ಶುಕ್ರವಾರ ಜರುಗಲಿದೆ.
ಆಳಂದನ ವಿಕಾಸ ಅಕಾಡೆಮಿ, ಎಸ್‍ಆರ್‍ಜಿ ಫೌಂಡೇಶನ್ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಹೊರವಲಯದಲ್ಲಿರುವ ತೋಂಟದಾರ್ಯ ಅನುಭವ ಮಂಟಪದಲ್ಲಿ ಬೆಳಿಗ್ಗೆ 11 ಗಂಟೆಗೆ ಉಪನ್ಯಾಸ ಜರುಗಲಿದೆ.
ಕನ್ನಡದಲ್ಲಿ 280ಕ್ಕೂ ಹೆಚ್ಚು ಹಾಗೂ ಇಂಗ್ಲೀಷ್ನಲ್ಲಿ 45 ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪುಸ್ತಕಗಳನ್ನು ಬರೆದಿದ್ದಾರೆ. ಮನೋರೋಗಿಗಳಿಗೆ ಸಲಹೆ, ಚಿಕಿತ್ಸೆ, ವಿದ್ಯಾರ್ಥಿಗಳಿಗೆ ಬೋಧನೆ ಮತ್ತು ಶಿಕ್ಷಣ, ವೈದ್ಯರುಗಳಿಗೆ ಹಾಗೂ ಇತರೆ ವೃತ್ತಿಯವರಿಗೆ ತರಬೇತಿ ನೀಡುವ ಮೂಲಕ ಚಿರಪರಿಚಿತರಾಗಿರುವ ಡಾ. ಸಿ ಆರ್ ಚಂದ್ರಶೇಖರ ಅವರು ಈಗಾಗಲೇ ಸಾವಿರಾರು ಉಪನ್ಯಾಸಗಳನ್ನು ನಾಡಿನಾದ್ಯಂತ ನೀಡಿ ಹೆಸರುವಾಸಿಯಾಗಿದ್ದಾರೆ.
ತಾಲೂಕಿನ ಮತ್ತು ಪಟ್ಟಣದ ಪದವಿ ಕಾಲೇಜು ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಈ ಉಪನ್ಯಾಸದ ಪ್ರಯೋಜನ ಪಡೆಯಬೇಕು. ಶಿಕ್ಷಕರು, ಸಮಾನ ಮನಸ್ಕರು, ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡವರು ಈ ಉಪನ್ಯಾಸದ ಲಾಭವನ್ನು ಪಡೆಯಬೇಕು ಎಂದು ಆಳಂದ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಹಣಮಂತ ಶೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…