ಕಲಬುರಗಿ: ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವದ ಪ್ರಯುಕ್ತ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ನವ ಕಲ್ಯಾಣ ಕರ್ನಾಟಕ ಫೋಟೋಗ್ರಾಫರ್ಸ್ ಅಸೋಸಿಯೇಶನ್ ವತಿಯಿಂದ ಸೆ. 17 ರಂದು ಬೆಳಗ್ಗೆ 10.30 ಕ್ಕೆ ನಗರದ ಕನ್ನಡ ಭವನದ ಪರಿಸರದಲ್ಲಿ ಒಂದು ದಿನದ ಐತಿಹಾಸಿಕ ಪರಂಪರೆಯುಳ್ಳ ಛಾಯಾಚಿತ್ರಗಳ ಪ್ರದರ್ಶನವನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಹಾಗೂ ಅಸೋಸಿಯೇಶನ್ ಅಧ್ಯಕ್ಷರು , ಕಾರ್ಯದರ್ಶಿ ತಿಳಿಸಿದ್ದಾರೆ.
ಇಂದಿನ ಹೊಸ ಪೀಳಿಗೆಗೆ ಕಲ್ಯಾಣ ನಾಡಿನ ನೆಲದ ಇತಿಹಾಸ ಮತ್ತು ಪರಂಪರೆಯನ್ನು ಹಿಡಿದಿಟ್ಟಿರುವ ಭಾವಚಿತ್ರಗಳ ಪ್ರದರ್ಶನದ ಮೂಲಕ ಹೊಸ ಮಾಹಿತಿಯನ್ನು ಕೊಡುವ ಪ್ರಯತ್ನ ಈ ಕಾರ್ಯಕ್ರಮದ್ದಾಗಿದೆ. ಜತೆಗೆ ಈ ಭಾಗದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ಇತಿಹಾಸವನ್ನೂ ತಿಳಿಸಿಕೊಡುವ ಕಾರ್ಯ ಇದೇ ಸಂದರ್ಭದಲ್ಲಿ ನಡೆಯಲಿದೆ.
ಈ ಭಾಗದ ಐತಿಹಾಸಿಕವಾದ ಕೋಟೆ ಕೊತ್ತಲುಗಳು, ಪ್ರಾಚೀನ ದೇವಾಯಲಯಗಳು ಮತ್ತು ಕಲ್ಯಾಣ ನಾಡಿನ ಪರಂಪರೆಯ ತಾಣಗಳು ಪ್ರದರ್ಶನದ ವಿಷಯವಾಗಲಿವೆ. ಈ ಶುಭ ಸಂದರ್ಭದಲ್ಲಿ ನಮ್ಮ ಭಾಗದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನಗೈದ ಮಹನೀಯರನ್ನು ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಅವರು ವಿವರಿಸಿದರು.
ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮೂಡ, ಕ್ರೆಡಲ್ ನ ಮಾಜಿ ಅಧ್ಯಕ್ಷ ಚಂದು ಬಿ.ಜಿ.ಪಾಟೀಲ ಅವರು ಪ್ರದರ್ಶನಕ್ಕೆ ಚಾಲನೆ ನೀಡಲಿದ್ದಾರೆ. ಫೋಟೋಗ್ರಾಫಿ ಕ್ಷೇತ್ರಕ್ಕೆ ವಿಶೇಷ ಕೊಡುಗೆ ನೀಡಿದ ಅನೇಕ ಗಣ್ಯರನ್ನೂ ಸಹ ಇದೇ ಸಂದರ್ಭದಲ್ಲಿ ಸತ್ಕರಿಸಲಾಗುವುದು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…