ರಾಜ್ಯದ 195 ತಾಲೂಕುಗಳನ್ನು ಬರಪೀಡಿತ ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ; ಸಚಿವ ಪ್ರಿಯಾಂಕ್ ಖರ್ಗೆ

0
22

ಕಲಬುರಗಿ; ರಾಜ್ಯ ಸರ್ಕಾರದ ಸಂಪುಟ ಉಪಸಮಿತಿಯು 195 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಲು ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಿದೆ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಮತ್ತು ಐಟಿಬಿಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಈ ಬಗ್ಗೆ ಸಾಮಾಜಿಕ‌ ಜಾಲತಾಣ ಫೇಸ್ ಬುಕ್ ನಲ್ಲಿ ಬರೆದುಕೊಂಡಿರುವ ಅವರು ಈ ಬರಪೀಡಿತ ತಾಲೂಕುಗಳ ನಿರ್ವಹಣೆಗಾಗಿ ವಿಶೇಷ ಕಾರ್ಯಪಡೆಯನ್ನು ರಚಿಸಲಾಗಿದೆ.

Contact Your\'s Advertisement; 9902492681

ಕುಡಿಯುವ ನೀರಿನ ಪೂರೈಕೆ ಮಾಡುವುದು ನಮ್ಮ ಮೊದಲ ಆದ್ಯತೆಯಾಗಿದ್ದು, ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು SDRF ಅನುದಾನವನ್ನೂ ಬಳಸಿಕೊಳ್ಳಲಾಗುವುದು.

ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವುದಕ್ಕಾಗಿ, ಈಗಾಗಲೇ ಸರ್ಕಾರವು ಎಲ್ಲಾ ಜಿಲ್ಲಾಧಿಕಾರಿಗಳಿಗೆ ₹492 ಕೋಟಿ ಅನುದಾನ ಒದಗಿಸಲಾಗಿದೆ. ಅಲ್ಲದೆ ಹೆಚ್ಚುವರಿಯಾಗಿ ₹400 ಕೋಟಿ ಹಣವನ್ನು ಮೀಸಲಿಡಲಾಗಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಡಿಯಲ್ಲಿ ರಾಜ್ಯದ ಪ್ರತಿ ಜಿಲ್ಲೆಯ ಸಿಇಒ ಗಳಿಗೆ ಈಗಾಗಲೇ ₹1 ಕೋಟಿ ಅನುದಾನ ನೀಡಿದ್ದು, ಹೆಚ್ಚುವರಿಯಾಗಿ ಕಂಟೆಂಜೆನ್ಸಿ ಯೋಜನೆ ಅಡಿಯಲ್ಲಿ ₹7 ಕೋಟಿ ನೀಡಲಾಗಿದೆ.

ಜಾನುವಾರುಗಳಿಗೆ ಮೇವು ಖರೀದಿಗಾಗಿ ಈಗಾಗಲೇ ₹20 ಕೋಟಿ ಅನುದಾನ ಬಿಡುಗಡೆ ಮಾಡಿದ್ದು, ಮೇವು ಬೆಳೆಯುವುದಕ್ಕಾಗಿ ರೈತರಿಗೆ ಉಚಿತ ಬಿತ್ತನೆ ಬೀಜವನ್ನು ಪೂರೈಸಲು ಕ್ರಮ ಕೈಗೊಳ್ಳಲಾಗಿದೆ.

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಭತ್ತ ಮತ್ತು ಮೆಕ್ಕೆಜೋಳದ ಬೆಳೆಗಳನ್ನು ಖರೀದಿ ಮಾಡಿ ದಾಸ್ತಾನು ಮಾಡಲು ಕ್ರಮ ವಹಿಸಲಾಗಿದೆ.

ಬರಪೀಡಿತ ತಾಲೂಕುಗಳಲ್ಲಿ ನರೇಗಾ ಯೋಜನೆ ಅಡಿಯಲ್ಲಿ ಕಡ್ಡಾಯವಾಗಿ ಕೆಲಸದ ದಿನಗಳನ್ನು 100 ರಿಂದ 150 ದಿನಗಳಿಗೆ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ.

ಬರ ಪರಿಸ್ಥಿತಿಯಿಂದ ರಾಜ್ಯದ ಜನರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನಮ್ಮ ಸರ್ಕಾರವು ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ವಹಿಸಲಾಗಿದೆ ಎಂದು ವಿವರಿಸಿದ್ದಾರೆ.

ರಾಜ್ಯವು ಈ ವರ್ಷ ಅತ್ಯಂತ ಭೀಕರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರಾಜ್ಯ ಸರ್ಕಾರವು ಯಾವುದೇ ಸಂದರ್ಭವನ್ನು ಎದುರಿಸಲು ಸರ್ವ ರೀತಿಯಲ್ಲಿಯೂ ಸನ್ನದ್ಧವಾಗಿದೆ ಎಂದು ಕೂಡಾ ಖರ್ಗೆ ಹೇಳಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here