ಬಿಸಿ ಬಿಸಿ ಸುದ್ದಿ

ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷರಾಗಿ ಲಚ್ಚಪ್ಪ ಜಮಾದಾರಗೆ ಆಯ್ಕೆಮಾಡಿ

ಫರತಾಬಾದ: ಕಲ್ಯಾಣ ಕರ್ನಾಟಕದ ಕೋಲಿ ಸಮಾಜದ ನಾಯಕರಾದ ಲಚ್ಚಪ್ಪ ಜಮಾದಾರ ಅವರಿಗೆ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಆಯ್ಕೆ ಮಾಡಬೇಕು. ಎಂದು ಕೋಲಿ ಸಮಾಜದ ಮುಂಖಡರಾದ ಹೊನ್ನಕಿರಣಗಿ ಗ್ರಾಮ ಪಂಚಾಯತಿ ಸದಸ್ಯರಾದ ಶ್ರೀ ಬಾಬು ದಸರಾಗೊಳ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರಿಗೆ ಪತ್ರಿಕೆ ಮುಂಖಾತರ ಮನವಿ ಮಾಡಿದ್ದಾರೆ.

ಕೋಲಿ ಸಮಾಜದ ಏಳಿಗೆಗಾಗಿ ಮತ್ತು ಕೋಲಿ ಸಮಾಜವನ್ನು ಜಾಗೃತಿ ಮೂಡಿಸುವಲ್ಲಿ ಹಲವಾರು ವರ್ಷಗಳ ಕಾಲ ಸಮಾಜಕ್ಕಾಗಿ ಹಗಲು ರಾತ್ರಿ ಲೆಕ್ಕಿಸದೆ, ಸಮಾಜವನ್ನು ಕಟ್ಟುವಲ್ಲಿ ಲಚ್ಚಪ್ಪ ಜಮಾದಾರ ಅವರ ಕಾರ್ಯ ನಮ್ಮ ಸಮಾಜಕ್ಕೆ ಬಹಳ ಅವಶ್ಯಕತೆ ಇದೆ. ಈ ಬಾರಿ ನಡೆದ 2023ರ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ 7ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಶಾಸಕರು ಆಗಿದ್ದಾರೆ. ಲಚ್ಚಪ್ಪ ಜಮಾದಾರ ಅವರ ಕೂಗಿಗೆ ಅಫಜಲಪೂರ, ಜೇವರ್ಗಿ, ಚಿತ್ತಾಪುರ,ಸೇಡಂ,ಕಲಬುರಗಿ ಉತ್ತರ ಕೇತ್ರ ಸೇರಿ ಇತರೆ ಕೇತ್ರದಲ್ಲಿ ಕೋಲಿ ಸಮಾಜದ ಮತಬಾಂಧವರು ಕಾಂಗ್ರೆಸ್ ಪಕ್ಷ ಬೆಂಬಲಿಸುವಲ್ಲಿ ಬಹುಮುಖ್ಯ ಪಾತ್ರ ವಹಿಸಿದ್ದಾರೆ.

ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದಾರೆ. ಮುಂದಿನ ಲೋಕಸಭೆ ಚುನಾವಣೆ, ಜಿಪಂ, ತಾಪಂ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ತರುವಲ್ಲಿ ಪಕ್ಷಪರ ಮತ್ತು ಅಭ್ಯರ್ಥಿಗಳ ಪರ ಕಾರ್ಯ ನಿರ್ವಹಿಸುತ್ತಾರೆ. ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಸೂಕ್ತವಾಗಿ ಪರಿಗಣಿಸಿ, ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷರಾಗಿ ನೇಮಕ ಮಾಡುವ ಮೂಲಕ ಹಿಂದುಳಿದ ಕೋಲಿ ಸಮಾಜಕ್ಕೆ ನ್ಯಾಯ ನೀಡಬೇಕು ಎಂದು ಹೊನ್ನಕಿರಣಗಿ ಗ್ರಾಮ ಪಂಚಾಯತಿ ಸದಸ್ಯರಾದ ಶ್ರೀಮತಿ ಕೃಷ್ಣಾಬಾಯಿ ಗಂಡ ಶರಣಪ್ಪ ತತ್ತಿ, ವಿಶ್ವರಾಧ್ಯ ಬೆಳಗುಂಪಿ ಅವರು ಆಗ್ರಹಿಸಿದ್ದಾರೆ.

emedialine

Recent Posts

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

8 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

8 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

9 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

20 hours ago

ಬಡವರಿಗೆ ಹಣ್ಣು-ಹಂಪಲು ವಿತರಣೆ

ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ  ಜೈ ಕನ್ನಡಿಗರ…

20 hours ago