ಬಿಸಿ ಬಿಸಿ ಸುದ್ದಿ

ಭಾರತ ಸಶಕ್ತ ಪ್ರಜಾಪ್ರಭುತ್ವ ದೇಶ : ಪ್ರೊ. ದಯಾನಂದ ಅಗಸರ್

ಕಲಬುರಗಿ: ಭಾರತ ಸಶಕ್ತ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೊಂದಿರುವ ದೇಶವಾಗಿದೆ. ಡಾ. ಬಿ. ಆರ್. ಅಂಬೇಡ್ಕರ್ ಅವರು ರಚಿಸಿರುವ ಶ್ರೇಷ್ಠ ಸಂವಿಧಾನದ ಆಶಯದಂತೆ ದೇಶ ಸಮೃದ್ಧವಾಗಿ ಬೆಳೆದಿದೆ. ಜೊತೆಗೆ ಅತ್ಯತ್ತಮ ಪ್ರಜಾಪ್ರಭುತ್ವ ರಾಷ್ಟ್ರ ವಾಗಿ ಭಾರತ ಗುರುತಿಸಿಕೊಂಡಿದೆ ಎಂದು ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ದಯಾನಂದ ಅಗಸರ ಅಭಿಪ್ರಾಯಪಟ್ಟರು.

ಗುಲಬರ್ಗಾ ವಿಶ್ವವಿದ್ಯಾಲಯದ ಮಹಾತ್ಮ ಗಾಂಧಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ ‘ಅಂತರ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನ’ ಆಚರಣೆ ಕಾರ್ಯಕ್ರಮದಲ್ಲಿ ಭಾರತ ಸಂವಿಧಾನ ಪೀಠಿಕೆ ಬೋಧಿಸಿ ಅವರು ಮಾತನಾಡಿದರು.

ಭಾರತ ದೇಶದಲ್ಲಿ ಉತ್ತಮ ಮೌಲ್ಯಗಳನ್ನು ಒಳಗೊಂಡ ಪ್ರಜಾಪ್ರಭುತ್ವ ವ್ಯವಸ್ಥೆಯಿದೆ. ಇದು ಭಾರತೀಯರಾದ ನಮಗೆ ಹೆಮ್ಮೆಯ ಸಂಗತಿ. ಈ ನೆಲದ ವಿಚಾರ ಸಂಸ್ಕೃತಿ, ಪರಂಪರೆ ಮತ್ತು ಪ್ರಕೃತಿ ಸಂಪದ್ಭರಿತವಾಗಿವೆ. ಮಾನವ ಸಂಪನ್ಮೂಲ ಸೇರಿದಂತೆ ಸಾಂಸ್ಕೃತಿಕ, ಆರ್ಥಿಕ, ಶೈಕ್ಷಣಿಕ ಮತ್ತು ಸಂಶೋಧನಾ ಕ್ಷೇತ್ರಗಳು ಸಾಧನೆಯಡೆಗೆ ಸಾಗುತ್ತಿವೆ. ಸರ್ವರ ಅಭಿವೃದ್ಧಿಗೆ ಒತ್ತು ನೀಡಿರುವ ಹಿನ್ನೆಲೆಯಲ್ಲಿ ಎಲ್ಲಾ ಕ್ಷೇತ್ರಗಳು ಸಮೃದ್ಧವಾಗಿ ಬೆಳೆಯುತ್ತಿವೆ ಎಂದ ಅವರು ಪ್ರತಿಯೊಬ್ಬ ಪ್ರಜೆ ಭಾರತ ಸಂವಿಧಾನದ ಪೀಠಿಕೆ ಭಾಗದಲ್ಲಿನ ಮುಖ್ಯ ಅಂಶಗಳನ್ನು ಗೌರವಿಸಿ ಅರ್ಥೈಸಿಕೊಂಡು ಸಮೃದ್ಧ ರಾಷ್ಟ್ರ ನಿರ್ಮಿಸುವ ಕಾರ್ಯದಲ್ಲಿ ಪಾಲ್ಗೊಳ್ಳಬೇಕಿದೆ ಎಂದು ಹೇಳಿದರು.

ಕುಲಸಚಿವ ಡಾ. ಬಿ. ಶರಣಪ್ಪ ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮೌಲ್ಯಮಾಪನ ಕುಲಸಚಿವ ಪ್ರೊ. ಜ್ಯೋತಿ ಧಮ್ಮ ಪ್ರಕಾಶ್, ವಿಜ್ಞಾನ ಮತ್ತು ತಂತ್ರಜ್ಞಾನ ನಿಕಾಯದ ಡೀನ್ ಹಾಗೂ ವಿದ್ಯಾರ್ಥಿ ಕಲ್ಯಾಣಾಧಿಕಾರಿ ಪ್ರೊ. ಕೆ. ಲಿಂಗಪ್ಪ, ಶಿಕ್ಷಣ ನಿಕಾಯದ ಡೀನ್ ಪ್ರೊ. ಹೂವಿನಬಾವಿ ಬಾಬಣ್ಣ, ವಾಣಿಜ್ಯ ಮತ್ತು ನಿರ್ವಹಣಾ ನಿಕಾಯದ ಡೀನ್ ಪ್ರೊ. ವಿಜಯಾ, ಕಾನೂನು ನಿಕಾಯದ ಡೀನ್ ಪ್ರೊ. ದೇವಿದಾಸ ಮಾಲೆ, ಆಡಳಿತ ವಿಭಾಗದ ವಿಶೇಷಾಧಿಕಾರಿ ಪ್ರೊ. ಚಂದ್ರಕಾಂತ್ ಕೆಳಮನಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸ್ನಾತಕೋತ್ತರ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿ, ಆಡಳಿತ ವರ್ಗ, ಅತಿಥಿ ಉಪನ್ಯಾಸಕರು, ಗುಲಬರ್ಗಾ ವಿಶ್ವವಿದ್ಯಾಲಯ ಪ್ರಾರ್ಥಮಿಕ ಮತ್ತು ಪ್ರೌಢಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಾಗೂ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

9 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

9 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

9 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago