ಕಲಬುರಗಿ: ಖಾಜಾ ಬಂದಾನವಾಜ ವಿಶ್ವವಿದ್ಯಾಲಯದ ಕಲಾ, ಭಾಷಾ, ಮಾನವೀಕತೆ, ಸಮಾಜ ವಿಜ್ಞಾನ ಹಾಗೂ ವಿಜ್ಞಾನ ನಿಕಾಯದಲ್ಲಿ ಶುಕ್ರವಾರ ‘ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ’ವನ್ನು ಆಚರಿಸಲಾಯಿತು.
ಪ್ರಾಣಿಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಪಕಿ ಆಫಶಾನ್ ಅಂಜುಮ್ ಭಾರತ ಸಂವಿಧಾನದ ಪೀಠಿಕೆ ಬೋಧಿಸಿದರು.
ಉರ್ದು ವಿಭಾಗದ ಸಹ ಪ್ರಾಧ್ಯಾಪಕ ಡಾ ಹಮೀದ ಅಕ್ಬರ್, ಪ್ರಾಣಿ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ ಹೀನಾ, ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ ಜಾವೆದ್ ಅಖ್ತರ, ಕಾನೂನು ನಿಕಾಯದ ಸಹಾಯಕ ಪ್ರಧ್ಯಪಕರಾದ ಲುಬ್ನಾ ತನವೀರ್, ಮತ್ತು ಸಂಪಿರೀತ್ ಚಬ್ರ, ಇವರು ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮಹತ್ವ ಕುರಿತು ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಕೆಬಿಎನ್ ವಿವಿಯ ಎಲ್ಲ ವಿಭಾಗದ ಸಹಾಯಕ ಪ್ರಾಧ್ಯಪಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.