ಬೆಂಗಳೂರು; ಸಂವಿಧಾನವನ್ನು ಎಲ್ಲರೂ ಅರ್ಥಮಾಡಿಕೊಂಡಾಗ ಸಮಾನ-ಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮುಂಭಾಗ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಭಾರತದ ಸಂವಿಧಾನ ಪೀಠಿಕೆಯ ಜಾಗತಿಕ ವಾಚನ ಕಾರ್ಯಕ್ರಮವನ್ನು ಗಿಡಕ್ಕೆ ನೀರುಣಿಸುವ ಮೂಲಕ ಮಹನೀಯರುಗಳಾದ ಡಾ: ಬಿ.ಆರ್.ಅಂಬೇಡ್ಕರ್, ಬಾಬು ಜಗಜೀವನರಾಂ. ಮಹರ್ಷಿ ವಾಲ್ಮೀಕಿ ಭಾವಚಿತ್ರಗಳಿಗೆ ಪುμÁ್ಪರ್ಚನೆ ಅರ್ಪಿಸುವ ಮೂಲಕ ಉದ್ಘಾಟಿಸಿ, ಭಾರತದ ಸಂವಿಧಾನ ಪೀಠಿಕೆಯನ್ನು ಬೋಧಿಸಿ ಮಾತನಾಡಿದರು.
ಸಂವಿಧಾನ ರಕ್ಷಣೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ಡಾ:ಬಿ.ಆರ್.ಅಂಬೇಡ್ಕರ್ ರವರು ಸಂವಿಧಾನವನ್ನು ಈ ದೇಶಕ್ಕೆ ಉಲ್ಲೇಖ ಮಾಡಿದ್ದರು. ಅದರಂತೆ ನಮ್ಮ ಸರ್ಕಾರ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದು, ಅವಕಾಶ ವಂಚಿತರಿಗೆ ಆರ್ಥಿಕ ಸ್ವಾತಂತ್ರ್ಯ ಕಲ್ಪಿಸಿಕೊಡಲು ಪ್ರಾಮಾಣಿಕ ಕೆಲಸ ಮಾಡಲಾಗುತ್ತಿದೆ.
ಸರ್ಕಾರವು 5 ಗ್ಯಾರಂಟಿ ಯೋಜನೆಗಳನ್ನು ನೀಡಿದ್ದು, ಅದರಲ್ಲಿ ಈಗಾಗಲೇ 4 ಭರವಸೆಗಳನ್ನು ಈಡೇರಿಸಿದ್ದು, ಸಂವಿಧಾನದ ದ್ಯೇಯೋದ್ದೇಶಗಳನ್ನು ಜಾರಿಗೆ ತರುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ. ಸಂವಿಧಾನ ಜಾರಿಗೆ ಬಂದ ಮೇಲೆ ಪ್ರಜಾಪ್ರಭುತ್ವ ಜಾರಿಗೆ ಬಂದಿದ್ದು, ಪ್ರಜಾಪ್ರಭುತ್ವ ಉಳಿದರೆ ನಾವು ಉಳಿಯುತ್ತೇವೆ. ವಿಶ್ವದಾದ್ಯಂತ ಅನೇಕ ರಾಷ್ಟ್ರಗಳು ಸಂವಿಧಾನವನ್ನು ತಮ್ಮ ಆಡಳಿತ ವ್ಯವಸ್ಥೆಯಲ್ಲಿ ಅನುಸರಿಸುತ್ತಿದ್ದು, ಪ್ರಜಾಪ್ರಭುತ್ವ ದಿನವನ್ನು ಆಚರಿಸುತ್ತಿದ್ದಾರೆ.
ಸಂವಿಧಾನವನ್ನು ಶಾಲಾ ಮಕ್ಕಳಿಗೆ ಮನವರಿಕೆ ಮಾಡಿಕೊಡುವ ಪ್ರಯತ್ನವನ್ನು ನಮ್ಮ ಸರ್ಕಾರ ಮಾಡುತ್ತಿದೆ. ಕೆಲವರು ಸಂವಿಧಾನವನ್ನು ವಿರೋಧಿಸುತ್ತಿದ್ದು, ಅವರಲ್ಲಿ ಜಾಗೃತಿ ಮೂಡಿಸಿ ಸಂವಿಧಾನವನ್ನು ಉಳಿಸಿಕೊಳ್ಳುವುದು ನಮ್ಮೆಲ್ಲರ ಗುರಿಯಾಗಬೇಕು ಎಂದರು.
ಡಾ:ಬಿ.ಆರ್.ಅಂಬೇಡ್ಕರ್ ರವರು 1949ರಲ್ಲಿ ಸಂವಿಧಾನ ಸಭೆಯಲ್ಲಿ ಐತಿಹಾಸಿಕ ಭಾಷಣ ಮಾಡಿ, ಸಂವಿಧಾನದ ಬಗ್ಗೆ ಸಂಪೂರ್ಣವಾಗಿ ಸಂವಿದಾನ ಎಂದರೆ ಏನು, ಸಂವಿಧಾನದ ಪೀಠಿಕೆ, ಉದ್ದೇಶ, ಎಂತಹ ರಾಷ್ಟ್ರ, ಸಮಾಜ ನಿರ್ಮಾಣವಾಗಬೇಕು, ಜನರು ಯಾವ ರೀತಿ ಸಮಾಜದಲ್ಲಿ ಬದುಕಬೇಕು ಎಂಬುದರ ಬಗ್ಗೆ ಸ್ಪಷ್ಟವಾಗಿ ತಿಳಿಸಿದ್ದಾರೆ.
“We ಣhe ಠಿeoಠಿಟe oಜಿ Iಟಿಜiಚಿ” ಎನ್ನುವ ಮೂಲಕವೇ ನಮ್ಮ ಸಂವಿಧಾನ ತೆರೆದುಕೊಳ್ಳುತ್ತದೆ. ಸಂವಿಧಾನದ ಆಶಯಗಳನ್ನು ಪರಿಣಾಮಕಾರಿಯಾಗಿ ಅರ್ಥೈಸಿಕೊಂಡು ಪಾಲಿಸದಿದ್ದರೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಎಂದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ ಇದೊಂದು ಪವಿತ್ರವಾದ ಕಾರ್ಯಕ್ರಮವಾಗಿದ್ದು, ವಿಶ್ವದ 1.50ಕೋಟಿ ಈ ಕಾರ್ಯಕ್ರಮವನ್ನು ವೀಕ್ಷಣೆ ಮಾಡಿದ್ದಾರೆ. ವಿಶ್ವದಾದ್ಯಂತ ಪ್ರಜಾಪ್ರಭುತ್ವ ದಿನಾಚರಣೆ ಆಚರಿಸಲಾಗುತ್ತಿದೆ. ಅಂತಾರಾಷ್ಟ್ರೀಯ ದಿನಾಚರಣೆಯ ನಮ್ಮ ಗುರಿ ಯುವಜನತೆ ಸಂವಿಧಾನ ಸಬಲೀಕರಣಗೊಳಿಸಲು ಶಿಕ್ಷಣದ ಮೂಲಕ ಅರಿವು ಮೂಡಿಸಿ ಸಂವಿಧಾನವನ್ನು ಬಲಪಡಿಸಬೇಕು.
ಭಗವದ್ಗೀತೆ, ಬೈಬಲ್, ಕುರಾನ್ ಗ್ರಂಥಗಳಂತೆ ಸಂವಿಧಾನವನ್ನು ಸಹ ರಕ್ಷಣೆಯಾಗಿಟ್ಟುಕೊಳ್ಳಬೇಕು. ಡಾ.ಬಿ.ಆರ್. ಅಂಬೇಡ್ಕರ್ ರವರು ಕೊಟ್ಟ ಕೊಡುಗೆಯನ್ನು ಸ್ಮರಿಸಬೇಕು. ಅವರು ಹಾಕಿಕೊಟ್ಟ ಹಾದಿಯನ್ನು ಪ್ರತಿದಿನ ಬದುಕಿನಲ್ಲಿ ಅಳವಡಿಸಿಕೊಂಡು ರಕ್ಷಿಸಿಕೊಳ್ಳಬೇಕು. ಸಂವಿಧಾನ ಕೇವಲ ವಕೀಲರ ದಾಖಲೆಯ ಯಂತ್ರವಲ್ಲ, ಜೀವನದ ಸ್ಪೂರ್ತಿ. ಸರ್ವರಿಗೂ ಸಮಪಾಲು ಪ್ರಜಾಪ್ರಭುತ್ವದ ದೊಡ್ಡ ಯಶಸ್ಸು ಎಂದರು.
ವಿಧಾನ ಪರಿಷತ್ತಿನ ಸಭಾಪತಿಗಳಾದ ಬಸವರಾಜ ಹೊರಟ್ಟಿ ಮಾತನಾಡಿ, ಸಂವಿಧಾನವನ್ನು ನಮ್ಮ ದೇಶಕ್ಕೆ ಮಹಾನ್ ಕೊಡುಗೆಯಾಗಿ ನೀಡಿದ ಡಾ: ಬಿ.ಆರ್. ಅಂಬೇಡ್ಕರ್ ಸಂವಿಧಾನ ರಚಿಸಿ ಇಡೀ ಜಗತ್ತಿಗೆ ಮಾದರಿಯಾಗಿದ್ದಾರೆ, ಈ ಮಹಾನ್ ಪುರಷ ನಮ್ಮ ದೇಶದಲ್ಲಿ ಹುಟ್ಟಿರುವುದು ನಮ್ಮೆಲ್ಲರ ಭಾಗ್ಯ ಎಂದರು.
ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಹೆಚ್.ಸಿ.ಮಹಾದೇವಪ್ಪನವರು ಮಾತನಾಡಿ ಸಮೃದ್ಧ ಭಾರತದ ಅಡಿಪಾಯವಾದ ಸಂವಿಧಾನದ ಪೀಠಿಕೆಯನ್ನು ಮಕ್ಕಳಿಗೆ ಅರಿವು ಮೂಡಿಸಲು ಇನ್ನು ಮುಂದೆ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆಯನ್ನು ಕಡ್ಡಾಯವಾಗಿ ಓದಿಸಲಾಗುವುದು ಎಂದರು.
ಇಡೀ ಪ್ರಪಂಚಕ್ಕೆ ಮೂಲ ತಳಹದಿಯಾಗಿರುವ ಸಂವಿಧಾನದ ಆಶಯಗಳನ್ನು ಪೂರೈಸಲು ಸಾಮಾಜಿಕ , ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬಲಪಡಿಸಲು ಇದರ ಮುಖಾಂತರ ಪರಸ್ಪರ ವ್ಯಕ್ತಿ ಗೌರವ, ಘನತೆ, ಸ್ತ್ರೀ ಸ್ವಾತಂತ್ರ್ಯ, ಪತ್ರಿಕಾ ಸ್ವಾತಂತ್ರ್ಯ, ಮಾನವ ಹಕ್ಕುಗಳ ಉಲ್ಲಂಘನೆಯಾಗದಂತೆ ರಾಜ್ಯ ಮತ್ತು ದೇಶಾದ್ಯಂತ ಸಂವಿದಾನದ ಪೀಠಿಕೆಯ ಜವಾಬ್ದಾರಿಯನ್ನು ಯುವಪೀಳಿಗೆಯು ಪ್ರಪಂಚಕ್ಕೆ ಭಿತ್ತರಿಸುವ ಮುಖಾಂತರ ಸಂವಿಧಾನದ ಧ್ಯೇಯೋದ್ಧೇಶಗಳನ್ನು ಮತ್ತು ಆಶಯಗಳನ್ನು ಸರ್ಕಾರ ಜಾರಿ ಮಾಡಲಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಸಂವಿಧಾನದ ಪೀಠಿಕೆಯನ್ನು ಮುಖ್ಯಮಂತ್ರಿಗಳಿಗೆ ಹಸ್ತಾಂತರ ಮಾಡಿ ಸಚಿವ ಸಂಪುಟ ಕೊಠಡಿಯಲ್ಲಿ ಸ್ಥಾಪಿಸಲಾಗುವುದು. ಮಕ್ಕಳಿಗೆ ಸಂವಿಧಾನದ ಬಗ್ಗೆ ಅರಿವು ಮೂಡಿಸಲು ಸಮಾಜ ಕಲ್ಯಾಣ ಇಲಾಖೆಯ ಎಲ್ಲಾ ವಸತಿ ಶಾಲೆಗಳಲ್ಲಿ “ಮಕ್ಕಳ ಸಂವಿಧಾನ ಕ್ಲಬ್” ಸ್ಥಾಪಿಸಲಾಗುವುದು ಎಂದರು.
ಗ್ರಾಮೀಣ ಜನತೆಯ ಸಬಲೀಕರಣಕ್ಕಾಗಿ “ಸಮಾನತೆ” ಎಂಬ ತಂತ್ರಾಂಶವನ್ನು ಲೋಕಾರ್ಪಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಗೃಹಸಚಿವರಾದ ಡಾ: ಜಿ.ಪರಮೇಶ್ವರ್, ಗ್ರಾಮೀಣಾಭಿವೃದ್ದಿ ಸಚಿವgರಾದ ಪ್ರಿಯಾಂಕ ಖರ್ಗೆ, ಆಹಾರ ಮತ್ತು ನಾಗರೀಕ ಪೂರೈಕೆ ಸಚಿವರಾದ ಕೆ.ಹೆಚ್. ಮುನಿಯಪ್ಪ, ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ, ಕನ್ನಡ ಮತ್ತು ಸಂಸ್ಕøತಿ ಸಚಿವರಾದ ಶಿವರಾಜ್ ತಂಗಡಗಿ, ಇಂಧನ ಸಚಿವರಾದ ಕೆ.ಜೆ. ಜಾರ್ಜ್, ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಅರಣ್ಯ ಸಚಿವರಾದ ಈಶ್ವರ ಖಂಡ್ರೆ, ಶಾಸಕರುಗಳು, ವಿಧಾನ ಪರಿಷತ್ತಿನ ಸದಸ್ಯರುಗಳು, ಸರ್ಕಾರದ ಮುಖ್ಯ ಕಾರ್ಯದರ್ಶಿ ಶ್ರೀಮತಿ ವಂದಿತಾ ಶರ್ಮಾ, ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಕ್ಯಾಪ್ಟನ್ ಮಣಿವಣ್ಣನ್, ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಯೋಜನಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಾದ ಡಾ: ಶಾಲಿನಿ ರಜನೀಶ್ ಹಾಗೂ ಇತರ ಗಣ್ಯರು, ಶಾಲಾ ಮಕ್ಕಳು ಉಪಸ್ಥಿತರಿದ್ದರು .
ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಚಿವರಾದ ಬಿ. ನಾಗೇಂದ್ರ ಅವರು ಸ್ವಾಗತಿಸಿದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…