ಕಲಬುರಗಿ; ನಗರದ ಕಲ್ಯಾಣ ಕರ್ನಾಟಕ ಕೃಷಿ ಮತ್ತು ಶಿಕ್ಷಣ ಹಾಗೂ ಸಾಂಸ್ಕøತಿಕ ಸಂಘ ಅರಿವಿನ ಮನೆಯಲ್ಲಿ ಉಪನಿರ್ದೇಶಕರ ಕಾರ್ಯಾಲಯ ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ರಾಜ್ಯ ಪ್ರೌಢಶಾಲಾ ಹಿಂದಿ ಶಿಕ್ಷಕರ ಸಂಘ ಜಿಲ್ಲಾ ಘಟಕ ಹಾಗೂ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ರಿ ಜಿಲ್ಲಾ ಘಟಕ ಇವರ ಸಂಯುಕ್ತಾಶ್ರಯದಲ್ಲಿ “ಹಿಂದಿ ದಿವಸ” ಪ್ರಯುಕ್ತ ಪ್ರೌಢಶಾಲಾ ಹಿಂದಿ ಶಿಕ್ಷಕರಿಗೆ ಏರ್ಪಡಿಸಿದ “ಹಿಂದಿ ಶಿಕ್ಷಕರಿಗೆ ಒಂದು ದಿನದ ಶೈಕ್ಷಣಿಕ ಕಾರ್ಯಗಾರ” ಈ ಕಾರ್ಯಕ್ರಮವನ್ನು ಶಶಿಲ್ ಜಿ. ನಮೋಶಿ ವಿಧಾನ ಪರಿಷತ್ ಸದಸ್ಯರು ಇವರು ಸಸಿಗೆ ನೀರು ಹಾಕುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು.
ದಕ್ಷಿಣ ಮತಕ್ಷೇತ್ರ ಶಾಸಕ ಅಲ್ಲಂಪ್ರಭು ಪಾಟೀಲ್ ಇವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಹಿಂದಿ ದಿವಸದ ಬಗ್ಗೆ ಶಿಕ್ಷಕರನ್ನು ಉದ್ದೇಶಿಸಿ ಮಾತನಾಡಿ ದೇಶಪ್ರೇಮ ಹೆಚ್ಚಿಸುವ ಕಾರ್ಯ ಮಾಡಬೇಕೆಂದು ತಿಳಿಸಿದರು.
ಕರ್ನಾಟಕ ರಾಜ್ಯ ಪ್ರೌಢಶಾಲಾ ಹಿಂದಿ ಶಿಕ್ಷಕರ ಸಂಘ ಜಿಲ್ಲಾಧ್ಯಕ್ಷ ಚನ್ನಬಸಪ್ಪ ಬಿರಾದರ್ ಇವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಸುರೇಶ ಸಜ್ಜನ್ ಸಿಂಡಿಕೇಟ್ ಸದಸ್ಯರು ಕೃಷ್ಣದೇವರಾಯ ವಿಶ್ವವಿದ್ಯಾಲಯ ಬಳ್ಳಾರಿ ಹಿಂದಿ ಶಿಕ್ಷಕರಿಗೆ ಶುಭಾಷಯ ಕೋರಿದರು. ಡಿ ಎಂ ರಾಠೋಡ್ ರಾಜ್ಯಾದ್ಯಕ್ಷರು ಕರ್ನಾಟಕ ಪ್ರೌಢಶಾಲಾ ಹಿಂದಿ ಶಿಕ್ಷಕರ ಸಂಘ ಇವರು ರಾಜ್ಯಮಟ್ಟದ ಹಿಂದೆ ಶೈಕ್ಷಣಿಕ ಕಾರ್ಯಾಗಾರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕೋರಿದರು.
ಮಂಜುನಾಥ ಎಂ ಪ್ರಧಾನ ಕಾರ್ಯದರ್ಶಿಗಳು ಕರ್ನಾಟಕ ರಾಜ್ಯ ಪ್ರೌಢಶಾಲಾ ಹಿಂದಿ ಶಿಕ್ಷಕರ ಸಂಘ ಬೆಂಗಳೂರು, ಇವರು ಹಿಂದಿ ಸಂಘಟನೆ ನಡೆದು ಬಂದ ದಾರಿಯನ್ನು ತಿಳಿಸಿದರು.
ಮಹೇಶ್ ಹೂಗಾರ್ ಅಧ್ಯಕ್ಷರು ಕರ್ನಾಟಕ ರಾಜ್ಯ ಪ್ರೌಢಶಾಲಾ ಶಿಕ್ಷಕರ ಸಂಘ ಜಿಲ್ಲಾ ಘಟಕ ಕಲಬುರಗಿ ಇವರು ಹಿಂದಿ ವಿಷಯ ಪರಿವೀಕ್ಷಕರ ಹಾಗೂ ಃಖP, ಅಖP ಹುದ್ದೆಗಳ ಸೃಷ್ಠಿಗೆ ಒತ್ತಾಯಿಸಿದರು. ವಿಶೇಷ ಉಪನ್ಯಾಸಕರಾಗಿ ಆಗಮಿಸಿದ ಡಾ.ಸಂದೀಪ ರಣಬೀರಕರ ಸಹ ಪ್ರಾಧ್ಯಾಪಕರು ಕೇಂದ್ರೀಯ ವಿ.ವಿ ಇವರು ಭಾಷೆಗಳ ಉಗಮ ಮತ್ತು ಆವಿಷ್ಕಾರಗಳ ಬಗ್ಗೆ ಸವಿವರವಾಗಿ ಉಪನ್ಯಾಸ ನೀಡಿದರು.
ಅಶೋಕ್ ಗುರೂಜಿ ಕಾರ್ಯದರ್ಶಿ ಕರ್ನಾಟಕ ಹಿಂದಿ ಪ್ರಚಾರ ಸಭಾ ಕಲಬುರಗಿ ಇವರು ಉಪಸ್ಥಿತರಿದ್ದರು. ವಿಜಯಕುಮಾರ್ ಸಾಲುಂಕೆ ಪ್ರಾಧ್ಯಾಪಕರು ಸರ್ಕಾರಿ ಪ್ರಥಮ ದರ್ಜೆ ಕಾಲೇಜ ಸೇಡಂ ಮಾತನಾಡಿ ಭಾಷೆಗಳ ಮಹತ್ವವನ್ನು ಕುರಿತು ವಿವರಿಸಿದರು. ಇದೇ ಸಂದರ್ಭದಲ್ಲಿ ತಾಲೂಕಾ ಮಟ್ಟದಲ್ಲಿ ಏರ್ಪಡಿಸಿದ್ದ ಭಾಷಣ ಮತ್ತು ನಿಬಂಧ ಸ್ಪರ್ಧೆಯಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ನೀಡಿ ಸನ್ಮಾನಿಸಲಾಯಿತು.
ಈ ಕಾರ್ಯಕ್ರಮದ ಸ್ವಾಗತ ರವಿ ಚವ್ಹಾಣ ನಡೆಸಿಕೊಟ್ಟರು ಮತ್ತು ನಿರೂಪಣೆ ಅರ್ಚನ ಜೈನ ಮತ್ತು ಅಬ್ದುಲ್ ರಜಾಕ್ ರವರು ನಡೆಸಿಕೊಟ್ಟರು. ಪ್ರಶಸ್ತಿ ವಿತರಣಾ ಕಾರ್ಯಕ್ರಮ ಸಾಯಿಬಣ್ಣ ಲಂಗೋಟಿ ಮತ್ತು ಶ್ರೀಮತಿ ವಿಜಯಲಕ್ಷ್ಮಿ ಸುತಾ ಇವರು ನಡೆಸಿಕೊಟ್ಟರು. ಸುರೇಖ ರವರು ವಂದಿಸಿದರು.
ಈ ಸಂದರ್ಭದಲ್ಲಿ ಜಿಲ್ಲೆಯ ಪದಾಧಿಕಾರಿಗಳಾದ ಮಲ್ಲಿಕಾರ್ಜುನ ಸಲಗರ ಉಪಾಧ್ಯಕ್ಷರು ನಿತ್ಯಾನಂದ ಸಹ ಕಾರ್ಯದರ್ಶಿಗಳು ಸತೀಶ ಜಾಮಗೊಂಡ ಕೋಶಾಧ್ಯಕ್ಷರು ಸಾಯಬಣ್ಣ ಲಂಗೋಟಿ ಸಂಘಟನಾ ಕಾರ್ಯದರ್ಶಿ ಲಾಡಲೆ ಪಟೇಲ ಮಾಧ್ಯಮ ಕಾರ್ಯದರ್ಶಿ ಸತೀಶ ಮುಜಗೊಂಡ ನಿರ್ದೇಶಕರು ಸಲಹಾ ನಿರ್ದೇಶಕರು ಸುರೇಖಾ ಲಕ್ಷ್ಮೀ ಪುತ್ರ ಅಬ್ದುಲ್ ರಸೂಲ್ ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…