ಶಹಾಬಾದ: ನಗರದ ಸರಕಾರಿ ಬಾಲಕರ ಪ್ರೌಢಶಾಲೆಯ ಆವರಣದಲ್ಲಿ ಸೆಪ್ಟೆಂಬರ್ 17 ರಂದು ಕಲ್ಯಾಣ ಕರ್ನಾಟಕ ಉತ್ಸವವನ್ನು ತಾಲೂಕಾಡಳಿತ ವತಿಯಿಂದ ಆಚರಿಸಲಾಗುತ್ತಿದೆ ಎಂದು ತಹಸೀಲ್ದಾರ ಗುರುರಾಜ ಸಂಗಾವಿ ತಿಳಿಸಿದ್ದಾರೆ.
ಎಲ್ಲಾ ಶಾಲಾ-ಕಾಲೇಜುಗಳು ಹಾಗೂ ಸರಕಾರಿ ಕಚೇರಿಗಳಲ್ಲಿ ಕಲ್ಯಾಣ ಕರ್ನಾಟಕ ಉತ್ಸವವನ್ನು ಆಚರಿಸಿದ ನಂತರ ಬೆಳಿಗ್ಗೆ 8:20 ಗಂಟೆಗೆ ಸರಕಾರಿ ಬಾಲಕರ ಪ್ರೌಢಶಾಲೆಯ ಆವರಣದಲ್ಲಿ ಸರ್ವ ಸಂಘಗಳ ಅಧ್ಯಕ್ಷರು ,ಪದಾಧಿಕಾರಿಗಳು, ಸಂಘಟನೆಯ ಮುಖ್ಯಸ್ಥರು, ವಿವಿವಿಧ ಇಲಾಖೆಯ ಅಧಿಕಾರಿ-ಸಿಬ್ಬಂದಿ ವರ್ಗದವರು, ಜನಪ್ರತಿನಿಧಿಗಳು, ನಗರದ ಮುಖಂಡರು ಗಣ್ಯರು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕೋರಿದ್ದಾರೆ.