ಭಾರತ ಭಾಷಾ ಶ್ರೀಮಂತ ರಾಷ್ಟ್ರ: ಪ್ರೊ ಬಾಲಾಜಿ

ಕಲಬುರಗಿ: ಭಾರತ ವಿವಿಧತೆಯಲ್ಲಿ ಏಕತೆಯನ್ನು ಹೊಂದಿದ ಏಕೈಕ ದೇಶ. ವಿವಿಧ ಸಂಸ್ಕೃತಿ, ಭಾಷೆ, ವೇಷ ಭೂಷನದಿಂದಾಗಿ ಭಾರತ ವಿಶ್ವದಲ್ಲೇ ವಿಶಿಷ್ಟ ದೇಶ ಎಂದು ಶ್ರೀ ಕೃಷ್ಣ ಮಹಾವಿದ್ಯಾಲಯದ ಹಿಂದಿ ವಿಭಾಗದ ಮುಖ್ಯಸ್ಥರಾದ ಪ್ರೊ. ಬಾಲಾಜಿ ಏಕನಾಥರಾವ ಕೋಣಳೆ ಹೇಳಿದರು. ಅವರು ಶನಿವಾರ ನಗರದ ಖಾಜಾ ಬಂದಾನವಾಜ ವಿಶ್ವವಿದ್ಯಾಲಯದಲ್ಲಿ ಹಿಂದಿ ವಿಭಾಗದಿಂದ ಏರ್ಪಡಿಸಲಾದ ರಾಜಭಾಷಾ ಹಿಂದಿ ದಿವಸದ ಆಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.

ಅವರು ಹಿಂದಿ ಭಾಷೆಯ ಬೆಳವಣಿಗೆಯಲ್ಲಿ ದಕ್ಷಿಣ ಭಾರತದ ಸಾಹಿತಿಗಳ, ಶಿಕ್ಷಣ ಸಂಸ್ಥೆಗಳ ಮತ್ತು ವಿಶ್ವವಿದ್ಯಾಲಯಗಳ ಪಾತ್ರ ಕುರಿತು ಮಾತನಾಡುತ್ತ, ಭಾರತದಲ್ಲಿ 120 ಕ್ಕೂ ಹೆಚ್ಚು ಭಾಷೆಗಳಿದ್ದು 500 ಕ್ಕೂ ಹೆಚ್ಚು ಉಪಭಾಷೆಗಳಿವೆ. ಹಿಂದಿ ಭಾಷೆ ಪುರಾತನ ಭಾಷೆಯಾಗಿದ್ದು ಸ್ವತಂತ್ರ ಸಂಗ್ರಾಮದಲ್ಲೂ ಈ ಭಾಷೆಯನ್ನು ವ್ಯಾಪಕವಾಗಿ ಬಳಸಲಾಗಿದೆ. ಉತ್ತರ ಭಾರತದಲ್ಲಿ ಹಿಂದಿ ಭಾಷೆಯೇ ಪ್ರಧಾನವಾಗಿದೆ ಎಂದರು.

ದಕ್ಷಿಣ ಭಾರತದ ರಾಜ್ಯಗಳಲ್ಲಿ ಹಿಂದಿ ಬಳಕೆ ಕಡಿಮಯಿದ್ದರೂ ಸೀತಾರಾಮ, ನಾಗೇಂದ್ರ ಪುರುಷೋತ್ತಮ, ನಾಗೇಶ್ವರರಾವ, ಬಾಲಕೃಷ್ಣರಾವ, ಸುಮಿತ್ರಾ ನಂದನಪಂತ, ಡಾ ರೆಡ್ಡಿ, ರಾಮನಾಯ್ಡು, ಡಾ ಭೀಮಸೇನ್, ನರಸಿಂಹರಾವ ಮುಂತಾದ ಸಾಹಿತಿಗಳು ಹಿಂದಿ ಭಾಷೆಗೆ ಅನನ್ಯ ಕೊಡುಗೆ ನೀಡಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷರಾದ ಭಾಷಾ, ಕಲಾ, ಮಾನವೀಕತೆ, ಸಮಾಜ ವಿಜ್ಞಾನ ಮತ್ತು ವಿಜ್ಞಾನ ನಿಕಾಯದ ಡೀನ್ ಡಾ ನಿಶಾತ ಆರೀಫ್ ಹುಸೇನಿ, ಇವರು ಭಾಷೆಗಳ ಮಹತ್ವ ಕುರಿತು ಮಾತನಾಡಿದರು. ಭಾಷೆಗಳಿಲ್ಲದೆ ಮನುಷ್ಯನ ಪ್ರಗತಿ ಇಲ್ಲ. ಭಾಷೆಯಿಂದಾನೆ ಮನುಷ್ಯನ ಅಸ್ತಿತ್ವ ಇದೆ. ಹಿಂದಿ ವಿಭಾಗದ ಚಟುವಟಿಕೆಗಳನ್ನು ಶ್ಲಾಘಿಸಿದರು. ಹಿಂದಿ ದಿವಸದ ಅಂಗವಾಗಿ ಏರ್ಪಡಿಸಿದ ಸ್ಪರ್ಧೆಗಳಲ್ಲಿ ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಅಭಿನಂದಿಸಿ ಅವರ ಉಜ್ವಲ ಭವಿಷ್ಯಕ್ಕೆ ಹಾರೈಸಿದರು.

ಕಾರ್ಯಕ್ರಮದಲ್ಲಿ ಭಾಷಣ, ನಿಬಂಧ್ ಮತ್ತು ಚರ್ಚೆ ಸ್ಪರ್ಧೆಗಳ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಶಿಕ್ಷಕರಿಗೂ ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು ವಿಶೇಷವಾಗಿತ್ತು.

ವಿದ್ಯಾರ್ಥಿ ಫಯಾಜ್ ಪ್ರಾರ್ಥಿಸಿದರೆ, ವಿದ್ಯಾರ್ಥಿನಿ ಬರೀರಾ ಸ್ವಾಗತಿಸಿದರು. ಡಾ. ಆಫಷನ್ ದೇಶಮುಖ ಪ್ರಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿಗಳಾದ ಉಮರ್, ಜೋಯಾ, ಇವರು ಹಿಂದಿ ಭಾಷೆಯ ಮಹತ್ವ ಕುರಿತು ಭಾಷಣ ಮಾಡಿದರು. ಅಫಿಯಾ ಕವಿತಾ ಕವನ ವಾಚಿಸಿದರು.

ಜೈವಿಕ ತಂತ್ರಜ್ಞಾನ ವಿಭಾಗದ ಸಹಾಯಕ ಪ್ರಧ್ಯಾಪಕ ಡಾ ಮುಜೀಬ ಬಹುಮಾನ ವಿತರಣಾ ಸಮಾರಂಭ ನಡೆಸಿಕೊಟ್ಟರು. ಡಾ ಮಿಲನ್ ಬಿಷನೋಯ್ ವಂದಿಸಿದರು. ವಿದ್ಯಾರ್ಥಿನಿಯರಾದ ತಯ್ಯಬಾ ಮತ್ತು ಸುಮಯ್ಯ ನಿರೂಪಿಸಿದರು.

ಈ ಕಾರ್ಯಕ್ರಮದಲ್ಲಿ ಕೆಬಿಎನ್ ವಿವಿಯ ಬಿ ಎ, ಬಿ ಕಾಮ್, ಬಿ ಎಎಸ್ಎಸ್ಸಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಹಾಜರಿದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

5 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

7 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

7 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

7 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

7 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

7 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420