ಕಲಬುರಗಿ; 2019-20 ನೇ ಸಾಲಿನಿಂದ ಸರ್ಕಾರಿ ತರಬೇತಿ ಸಂಸ್ಥೆ ಹಾಗೂ ಹೊಸದುರ್ಗಗಳಲ್ಲಿ ಆಂಗ್ಲ ಮಾಧ್ಯಮದಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣದಲ್ಲಿ ಡಿಪ್ಲೋಮೋ DPSE ಕೋರ್ಸನ್ನು ಆರಂಭಿಸಿರುವುದು ಸರಿಯೇಷ್ಟೇ. ಕಳೆದ 03 ಶೈಕ್ಷಣಿಕ ವರ್ಷಗಳಿಂದ ಸದರಿ ಸಂಸ್ಥೆಗಳಿಂದ 250 ಕ್ಕೂ ಹೆಚ್ಚು ವಿದ್ಯಾರ್ಥಿಗಳು ತೇರ್ಗಡೆಯಾಗಿ ನಿರುದ್ದಯೋಗಿಗಳಾಗಿರುವ ಅತಂತ್ರಕ್ಕೆ ಸಿಲುಕಿರುವ ವಿದ್ಯಾರ್ಥಿಗಳನ್ನು ನೇಮಕ ಮಾಡಿಕೊಳ್ಳಬೇಕೆಂದು ಸಂಘದ ಕಲಬುರಗಿ ಜಿಲ್ಲಾ ಅಧ್ಯಕ್ಷರಾದ ಎಂ.ಡಿ. ಗೌಸ ವಿಖಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿ ಆಗ್ರಹಿಸಿದ್ದಾರೆ.
ಭಾನುವಾರ ಕಲ್ಯಾಣ ಕರ್ನಾಟಕ ವಿಮೋಚನದಿನಾಚರಣೆ ನಿಮಿತ್ತ ಕಲಬುರಗಿಗೆ ಆಗಮಿಸಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಅವರು 2018-2019 ನೇ ಸಾಲಿನ ಆಯ ವ್ಯಯ ಘೋಷಣೆಯಂತೆ ಪ್ರಸ್ತುತ ರಾಜ್ಯವ್ಯಾಪಿ 1500ಕ್ಕೂ ಅಧಿಕ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮದಲ್ಲಿ ತರಗತಿಗಳು ನಡೆಯುತ್ತಿದೆ ಹಾಗೂ 276 ಕರ್ನಾಟಕ ಪಬ್ಲಿಕ್ ಶಾಲೆಗಳು (ಏPS) ಕಾರ್ಯ ನಿರ್ವಹಿಸುತ್ತಿದ್ದು, ಸದರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮದಲ್ಲಿ 1 ಮತ್ತು 2ನೇ ತರಗತಿಗಳನ್ನು ಪ್ರಾರಂಭಿಸಲಾಗಿದೆ. ಮುಂದುವರೆದು, ಸದರಿ ಶಾಲೆಗಳಲ್ಲಿ ಆ ತರಗತಿಗಳಿಗೆ ಬೋಧಿಸಲು ನಿಗದಿತ ವಿದ್ಯಾರ್ಹತೆ ಹೊಂದಿದ ಹಾಗೂ ತರಬೇತಿ ಪಡೆದ ಶಿಕ್ಷಕರು ಲಭ್ಯವಿರುವುದಿಲ್ಲ. ಇದರಿಂದಾಗಿ ಮಕ್ಕಳ ಕಲಿಕೆಯ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುತ್ತಿದೆ ಎಂದು ತಿಳಿಸಿದ್ದಾರೆ.
ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಪರಿಣಾಮಕಾರಿ ಅನುಷ್ಟಾನ ಮಾಡುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿಯೇ ಮುಂಚೂಣಿಯಲ್ಲಿರುವುದು ಶ್ಲಾಘನೀಯ ವಿಚಾರವಾಗಿದೆ. ಬದಲಾದ ಶೈಕ್ಷಣಿಕ ವ್ಯವಸ್ಥೆಯಲ್ಲಿ 5 ವರ್ಷಗಳ (3-8 ವರ್ಷ) ಬುನಾದಿ ಹಂತದ ಕಲಿಕೆ ಹೆಚ್ಚಿನ ಒತ್ತು ನೀಡಿದ್ದು, ಸದರಿ ವಯಸ್ಸಿನ ಮಕ್ಕಳಿಗೆ ಬೋಧಿಸುವ ಕೌಶಲ್ಯವನ್ನು ಆPSಇ ಕೋರ್ಸ ಪೂರೈಸಿದ ವಿದ್ಯಾರ್ಥಿಗಳು ಹೊಂದಿದ್ದು, ಸದರಿ ವಿದ್ಯಾರ್ಥಿಗಳನ್ನು ಶಿಕ್ಷಕ/ಶಿಕ್ಷಕಿಯಾಗಿ ನೇಮಕ ಮಾಡಿಕೊಂಡರೆ 3 ರಿಂದ 8 ವರ್ಷ ವಯೋಮಾನದ ವಿದ್ಯಾರ್ಥಿಗಳಿಗೆ ಕಲಿಕೆ/ಅನುಭವದ ಭದ್ರ ಬುನಾದಿ ಹಾಕುವುದರಲ್ಲಿ ಯಾವುದೇ ಸಂಶಯವಿರುವುದಿಲ್ಲ ಹಾಗೂ ತಾಂತ್ರಿಕವಾಗಿಯೂ ಸರಿಯೆನಿಸುತ್ತದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಮಂತ್ರಾಲಯ ರಾಷ್ಟ್ರ ಮಟ್ಟದಲ್ಲಿ ಮೂಲಕ ಪೂರ್ವ ಪ್ರಾಥಮಿಕ ಹಂತದ ಪಠ್ಯಕ್ರಮ ಆರಂಭಿಸಲು ಹಸಿರು ನಿಶಾಲೆ ತೋರಿಸಲಾಗಿದೆ.
ಕೋರ್ಸ ತೇರ್ಗಡೆಯಾದ ಅಭ್ಯರ್ಥಿಗಳನ್ನು ಆಂಗ್ಲ ಮಾಧ್ಯಮದ ಸರ್ಕಾರಿ ಪ್ರಾಥಮಿಕ ಶಾಲೆ ಹಾಗೂ ಕೆ ಪಿ ಎಸ್ ಶಾಲೆಗಳಲ್ಲಿ ನೇಮಕ ಮಾಡಿಕೊಳ್ಳಲು ಅಗತ್ಯವಿರುವ ವೃಂದ ಮತ್ತು ನೇಮಕಾತಿ ನಿಯಮ (ಅ&ಖ) ಗಳನ್ನು ರಚನೆ ಮಾಡಿ ನೇಮಕಾತಿ ಮಾಡಿಕೊಳ್ಳಲು ಸೂಕ್ತ ನಿರ್ದೇಶನ ನೀಡುವಂತೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…