ಬಿಸಿ ಬಿಸಿ ಸುದ್ದಿ

ರಾಜ್ಯದಾದ್ಯಂತ 40 ಕೋಟಿ ವೆಚ್ಚದಲ್ಲಿ 4,000 “ಕೂಸಿನ ಮನೆ” ಸ್ಥಾಪನೆ: ಕಲಬುರಗಿಯಲ್ಲಿ ಲೋಗೊ ಬಿಡುಗಡೆ ಮಾಡಿದ ಸಿಎಂ

ಕಲಬುರಗಿ: ರಾಜ್ಯದಾದ್ಯಂತ 40 ಕೋಟಿ ರೂ. ವೆಚ್ಚದಲ್ಲಿ 4,000 ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮೀಣ ಭಾಗದ ಕೂಲಿ ಕಾರ್ಮಿಕರ ಮಕ್ಕಳ ಪಾಲನೆಗೆ ತೆರೆಯಲಾಗುತ್ತಿರುವ “ಕೂಸಿನ ಮನೆ’ ಶಿಶುಪಾಲನಾ ಕೇಂದ್ರಗಳ ಲೋಗೋವನ್ನು ರವಿವಾರ ಕಲಬುರಗಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆಗೊಳಿಸಿದರು.

ಕಲಬುರಗಿ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ನಡೆದ‌ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಧ್ವಜಾರೋಹಣ ನಂತರ ಯೋಜನೆಯ ಲೋಗೋವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಸಚಿವ ಪ್ರಿಯಾಂಕ್ ಖರ್ಗೆ‌ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಸೇರಿ ಸಿ.ಎಂ. ಅವರು ಅನಾವರಣಗೊಳಿಸಿದರು.

ರಾಜ್ಯ ಸರ್ಕಾರ “ಕೂಸಿನ‌ ಮನೆ” ತೆರೆಯಲು 40 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದಾದರು, ಶಿಶುಪಾಲನಾ ಕೇಂದ್ರ ನಡೆಸಲು ಅಗತ್ಯವಿರುವ ಕಟ್ಟಡ, ಇತರ ಮೂಲ ಸೌಲಭ್ಯಗಳನ್ನು ಹಾಗೂ ಅನುದಾನವನ್ನು ಗ್ರಾಮ ಪಂಚಾಯಿತಿಗಳು ತಮ್ಮ‌ ಸಂಪನ್ಮೂಲದಲ್ಲಿಯೇ ಹೊಂದಿಸಬೇಕಾಗುತ್ತದೆ.

ಪ್ರಸಕ್ತ 2023-24ರ ಅಯವ್ಯಯ ಭಾಷಣದಲ್ಲಿನ ಘೋಷಣೆಯಂತೆ ಗ್ರಾಮೀಣ ಪ್ರದೇಶದಲ್ಲಿ ನರೇಗಾ ಯೋಜನೆಯಡಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗದಲ್ಲಿ ಪಾಲ್ಗೊಳ್ಳಲು ಅನುಕೂಲವಾಗುವಂತೆ ಕೂಲಿ ಕಾರ್ಮಿಕರ 3 ವರ್ಷದೊಳಗಿನ ಮಕ್ಕಳನ್ನು ನೋಡಿಕೊಳ್ಳಲು “ಕೂಸಿನ ಮನೆ” ಶಿಶುವಾಲನಾ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. “ಕೂಸಿನ ಮನೆ’ ಕೆಂದ್ರಗಳು ಸ್ಥಳೀಯ ಕಾರ್ಮಿಕರ ಅನುಕೂಲಕ್ಕೆ ತಕ್ಕಂತೆ ದಿನದಲ್ಲಿ 6 ಗಂಟೆ 30 ನಿಮಿಷಗಳ ಕಾಲ ಕಾರ್ಯನಿರ್ವಹಿಸುತ್ತವೆ. ಗ್ರಾಮ ಪಂಚಾಯಿತಿಗಳೇ ಕೇಂದ್ರದ ಕಾರ್ಯನಿರ್ವಹಿಸುವ ಸಮಯವನ್ನು ನಿರ್ಧರಿಸಲಿದೆ.

*ಪ್ರತಿ ಕೇಂದ್ರದಲ್ಲಿ ‌10 ಜನ ಕೇರ್ ಟೇಕರ್ಸ್:*

4000 ಶಿಶು ಪಾಲನಾ ಕೇಂದ್ರಗಳಿಗೆ ಪ್ರತಿ ಕೇಂದ್ರಕ್ಕೆ ನರೇಗಾ ಕ್ರಿಯಾಶೀಲ ಉದ್ಯೋಗ ಕಾರ್ಡ್ ಹೊಂದಿರುವ 10 ಜನ ಕೇರ್ ಟೇಕರ್ಸ್‌ಗಳನ್ನು (ಮಕ್ಕಳ ಆರೈಕೆದಾರರು) ಇರಲಿದ್ದಾರೆ. ಇವರಿಗೆ ಮೊಬೈಲ್ ಕ್ರಶ್ ದೆಹಲಿ ಸಂಸ್ಥೆಯ ಸಹಕಾರದಿಂದ ತರಬೇತಿ ನೀಡಲಾಗುವುದು. ಇದರಿಂದ 40,000 ನರೇಗಾ ಕ್ರಿಯಾಶೀಲ ಉದ್ಯೋಗ ಕಾರ್ಡ್ ಹೊಂದಿರುವ ಮಹಿಳೆಯರಿಗೆ ಮಕ್ಕಳ ಆರೈಕೆಯ ಕೆಲಸ ನಿರ್ವಹಿಸಲು ಅವಕಾಶ ಕಲ್ಪಿಸಲಾಗುತ್ತಿದೆ.

*ಪ್ರತಿ ಕೇಂದ್ರದಲ್ಲಿ 25 ಜನ‌ ಮಕ್ಕಳಿಗೆ ಅವಕಾಶ:*

ಪ್ರತಿ ‘ಕೂಸಿನ ಮನೆ’ ಕೇಂದ್ರದಲ್ಲಿ ನರೇಗಾ ಕ್ರಿಯಾಶೀಲ ಉದ್ಯೋಗ ಹಾರ್ಡ್ ಹೊಂದಿರುವ ಕುಟುಂಬದ 3 ವರ್ಷದೊಳಗಿನ ಗರಿಷ್ಠ 25 ಮಕ್ಕಳನ್ನು ದಾಖಲೆ ಮಾಡಿಕೊಳ್ಳಲು ಅವಕಾಶ ಇರಲಿದೆ.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಕೆ.ಕೆ.ಆರ್.ಡಿ.ಬಿ. ಅಧ್ಯಕ್ಷ ಡಾ.ಅಜಯ್ ಸಿಂಗ್, ಶಾಸಕರಾದ ಬಿ.ಆರ್.ಪಾಟೀಲ, ಎಂ.ವೈ.ಪಾಟೀಲ, ಅಲ್ಲಮಪ್ರಭು ಪಾಟೀಲ, ಕನೀಜ್ ಫಾತಿಮಾ, ಎಂ.ಎಲ್.ಸಿ ತಿಪ್ಪಣಪ್ಪ ಕಮಕನೂರ, ಕಲಬುರಗಿ ಮೇಯರ್ ವಿಶಾಲ ಧರ್ಗಿ, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹಾದೇವನ್, ಪಂಚಾಯತ್ ರಾಜ್ ಆಯುಕ್ತೆ ಪ್ರಿಯಾಂಕಾ ಮೇರಿ ಫ್ರಾಂಸಿಸ್, ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜಪೇಯಿ, ಕೆ.ಕೆ.ಆರ್.ಡಿ.ಬಿ. ಕಾರ್ಯದರ್ಶಿ ಅನಿರುದ್ಧ ಶ್ರವಣ ಪಿ., ಐ.ಜಿ.ಪಿ. ಅಜಯ್ ಹಿಲೋರಿ, ಡಿ.ಸಿ. ಬಿ.ಫೌಜಿಯಾ ತರನ್ನುಮ್, ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ‌ ಇದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

3 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

3 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

3 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

20 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

22 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago