ಕಲಬುರಗಿ: ಭಾರತ ಸರಕಾರದ ರಕ್ಷಣಾ ಮಂತ್ರಾಲಯದಿಂದ ಹೈದ್ರಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬೀದರನ “ನ್ಯಾಷನಲ್ ಇಂಗ್ಲೀಷ ಮೀಡಿಯಮ್ ಪಬ್ಲಿಕ್ ಶಾಲೆಗೆ” ಸೈನಿಕ್ ಶಾಲೆ ಮಂಜೂರಾಗಿದ್ದು ರಕ್ಷಣಾ ಮಂತ್ರಾಲಯವು ಬಿಡುಗಡೆಗೊಳಿಸಿದ ಪಟ್ಟಿಯಲ್ಲಿ ಭಾರತದಾದ್ಯಂತ ವಿವಿಧ ರಾಜ್ಯಗಳಿಗೆ ಒಟ್ಟು 23 ಸೈನಿಕ ಶಾಲೆಗಳು ಮಂಜೂರಾಗಿದ್ದು ಕರ್ನಾಟಕದಲ್ಲಿ ಹೆಚ್.ಕೆ.ಇ. ಶಿಕ್ಷಣ ಸಂಸ್ಥೆಗೆ ಮಾತ್ರ ಮಂಜೂರಾತಿ ದೊರೆತಿರುವುದು ವಿಶೇಷ ಎಂದು ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ, ಭೀಮಾಶಂಕರ ಸಿ. ಬಿಲಗುಂದಿ ಅವರು ತಮ್ಮ ಸಂತಸ ವ್ಯಕ್ತಪಡಿಸಿದರು.
ಭಾರತ ಸರಕಾರದ ರಕ್ಷಣಾ ಮಂತ್ರಾಲಯದ ಸಹಯೋದೊಂದಿಗೆ ಕಾರ್ಯನಿರ್ವಹಿಸುವ ಈ ಸದರಿ ಶಾಲೆಯ ರೂಪರೇಷೆ ಹಾಗೂ ನಿಯಮಾವಳಿಗಳು ಸರಕಾರದಿಂದ ಬಂದ ನಂತರ ಮುಂದಿನ ಶೈಕ್ಷಣಿಕ ವರುಷದಿಂದ ಪ್ರವೇಶ ಕಾರ್ಯ ಪ್ರಾರಂಭಿಸಲಾಗುವುದು ಎಂದು ತಿಳಿಸಿದ ಅವರು ಈ ಸಂದರ್ಭದಲ್ಲಿ ಭಾರತ ಸರಕಾರದ ಪ್ರಧಾನಮಂತ್ರಿಗಳಾದ ನರೇಂದ್ರ ಮೂದಿಯವರಿಗೂ ಹಾಗೂ ಕೇಂದ್ರ ಸರಕಾರದ ರಕ್ಷಣಾ ಮಂತ್ರಿಗಳಾದ ರಾಜನಿತ ಸಿಂಗ ಅವರಿಗೆ ತಮ್ಮ ಅಭಿನಂದನೆಗಳನ್ನು ಸಲ್ಲಿಸಿ ಈ ಶಾಲೆ ರಾಷ್ಟ್ರೀಯ ರಕ್ಷಣಾ ಅಕಾಡೆಮಿ, ಭಾರತೀಯ ನೌಕಾ ಅಕಾಡೆಮಿಗೆ ಸೇರಿರುವವರಿಗೆ ನೆರವಾಗಲಿದೆ ಎಂದು ತಿಳಿಸಿದರು.
ಕೇಂದ್ರ ರಸಾಯನಿಕ, ರಸಗೊಬ್ಬರ ಮತ್ತು ನವೀಕರಿಸಬಹುದಾದ ಇಂಧನ ಖಾತೆಯ ರಾಜ್ಯ ಸಚಿವರಾದ ಭಗವಂತ ಖೂಬಾ ಅವರ ಪ್ರಯತ್ನ ಹಾಗೂ ಪರಿಶ್ರಮದಿಂದ ಹೆಚ್.ಕೆ.ಇ. ಶಿಕ್ಷಣ ಸಂಸ್ಥೆಯ ಬೀದರ ಶಾಲೆಗೆ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಸೈನಿಕ ಶಾಲೆ ಮಂಜೂರಾಗಿದೆ ಅದಕ್ಕಾಗಿ ತಾವು ಭಗವಂತ ಖೂಬಾ ಅವರಿಗೆ ವ್ಯಯಕ್ತಿಕವಾಗಿ, ಹೆಚ್.ಕೆ.ಇ. ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಪರವಾಗಿ ಅಲ್ಲದೆ ಕಲ್ಯಾಣ ಕರ್ನಾಟಕದ ಜನತೆಯ ಪರವಾಗಿ ವಿಶೇಷ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ತಿಳಿಸಿದರು, ಅಲ್ಲದೆ ಬೀದರನ ಸೈನಿಕ ಶಾಲೆ ಮಾದರಿ ಶಾಲೆಯನ್ನಾಗಿ ಮಾಡಲು ತಾವು ಕಂಕಣಬದ್ದರಾಗಿದ್ದೇವೆ ಎಂದು ತಿಳಿಸಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…