ಕಲಬುರಗಿ: ಇತ್ತಿಚಿನ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳಲ್ಲಿ ವಿಶೇಷವಾದ ಪ್ರತಿಭೆಗಳಿದ್ದು ಅವುಗಳನ್ನು ಹೊರಹಾಕಲು ವೇದಿಕೆ ಮತ್ತು ಪ್ರೋತ್ಸಾಹ ಅತ್ಯಂತ ಅವಶ್ಯಕವಾಗಿದೆ ಎಂದು ಶಹಾಪೂರ ತಾಲೂಕಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಲಿಂಗಣ್ಣ ಪಡಶೆಟ್ಟಿ ಹೇಳಿದರು.
ತಾಲೂಕಿನ ಕನ್ನೆಳ್ಳಿ ಗ್ರಾಮದ ಬಸವಪ್ರಭು ಶಾಲಾ ಆವರಣದಲ್ಲಿ ಇಂದು ಮಕ್ಕಳ ಕಲರವ ಫೌಂಡೇಶನ್ ವತಿಯಿಂದ ಆಯೋಜಿಸಿದ್ದ ಮಕ್ಕಳ ಕಲರವ ೨೦೧೯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಮಕ್ಕಳಲ್ಲಿ ವಿಶೇಷವಾದ ಕಲೆ, ಕಲಾಶಕ್ತಿ ಹಾಗೂ ವಿಶಿಷ್ಟಪೂರ್ಣವಾದ ಕಲೆಗಳು ಅಡಕವಾಗಿದ್ದು ಅಂತಹ ಮಕ್ಕಳಿಗೆ ಪ್ರೋತ್ಸಾಹ ನೀಡುವುದರ ಮೂಲಕ ಪ್ರತಿಭೆ ಅನಾವರಣಮಾಡಲು ಎಲ್ಲರು ಸಹಕರಿಸಬೇಕು ತೀರ ಇತ್ತಿಚಿನ ಮಾದ್ಯಮಗಳು ಮಕ್ಕಳಿಗಾಗಿ ವಿಶೆಷವಾದ ಸಂಗೀತ ಮತ್ತು ನೃತ್ಯ ಸ್ಪರ್ದೆಗಳನ್ನು ಏರ್ಪಡಿಸುತ್ತಿದ್ದು ಆ ಮೂಲಕ ಗ್ರಾಮೀಣ ಪ್ರದೇಶದ ಅನೇಕ ಪ್ರತಿಭೆಗಳು ಮುಖ್ಯವಾಹಿನಿಗೆ ಬರುತ್ತಿವೆ ಆ ನಿಟ್ಟಿನಲ್ಲಿ ಸಂಘ ಸಂಸ್ಥೆಗಳು ಕೂಡ ಮಕ್ಕಳ ಪರವಗಿ ವಿಶೇಷವಾದ ಕಾರ್ಯಕ್ರಮಗಳನ್ನು ರೂಪಿಸಿ ಬಾಲ್ಯದಲ್ಲಿಯೇ ಅವರಿಗೆ ಸಂಸ್ಕಾರ, ಸಂಸ್ಕೃತಿ, ಪ್ರೀತಿ, ವಿಶ್ವಾಸ ಮೂಡಿಸುವುದು ಅತ್ಯಂತ ಅವಶ್ಯವಾಗಿದೆ ಇಂದಿನ ಪಾಲಕರು ಮಕ್ಕಳ ಆಸೆಗಳಿಗೆ ತದ್ವಿವೃದ್ದವಾಗಿ ತಮ್ಮ ಆಸಕ್ತಿಗನುಗುಣವಾಗಿ ಮಕ್ಕಳ ಅಬ್ಯಾಸಮಾಡಲಿ ಎಂದು ಬಯಸುತ್ತಾರೆ , ಇದು ಆತಂಕಕಾರಿ ಬೆಳವಣಿಗೆ ಮಕ್ಕಳಿಗೆ ಸಂಪೂರ್ಣ ಸ್ವಾತಂತ್ಯ್ರ ನೀಡುವ ಮೂಲಕ ಅವರನ್ನು ಸರ್ವತೊಮ್ಮುಖವಾಗಿ ಶಸಕ್ತರನ್ನಾಗಿ ಮಾಡಬೇಕು ಎಂದು ಹೇಳಿದರು.
ಸಮಾರಂಭದ ಸಾನಿದ್ಯವಹಿಸಿದ್ದ ಲಕ್ಷ್ಮೀಫುರ ಮರಡಿ ಮಲ್ಲಿಕಾರ್ಜುನ ದೇವಸ್ಥಾನದ ಪೂಜ್ಯ ಶ್ರೀ. ಬಸವಲಿಂಗಯ್ಯ ಸ್ವಾಮಿಗಳು ಮಾತನಾಡಿ ನಾಲ್ಕುಗೋಡೆಗಳ ಮಧ್ಯ ಮಕ್ಕಳ ಭವಿಷ್ಯ ರೂಪವಾಗುತ್ತಿದ್ದು ಮಕ್ಕಳ ಬೆಳವಣಿಗೆಯಲ್ಲಿ ಪಾಲಕರು ಮತ್ತು ಶಿಕ್ಷಕರ ಪಾತ್ರ ಅತ್ಯಂತ ಮಹತ್ವದಾಗಿದೆ, ಬಾಲ್ಯದಲ್ಲಿಯೇ ಮಕ್ಕಳಿಗೆ ಸಾಹಿತ್ಯ ಸಂಗೀತದ ಬಗ್ಗೆ ಆಸಕ್ತಿ ಬೆಳಸಿದ್ದಲ್ಲಿ ಭವಿಷ್ಯದ ದಿನಗಳಲ್ಲಿ ಮಕ್ಕಳು ಅತ್ಯಂತ ಲವಲವಿಕೆ, ಕ್ರಿಯಾಶೀಲದಿಂದ ಬದುಕುತ್ತವೆ ಎಂದರು. ಮುಖ್ಯ ಅತಿಥಿಗಳಾಗಿ ಶಹಾಪೂರ ಸಮೃದ್ಧಿ ಸಹಕಾರಿ ಬ್ಯಾಂಕಿನ ಉಪಾಧ್ಯಕ್ಷ ಸಿದ್ರಾಮಪ್ಪ ಪಾಟೀಲ್, ಹಿರಿಯ ಸಾಹಿತಿ ಶಾಂತಪ್ಪ ಬೂದಿಹಾಳ, ಟ್ರಸ್ಟ್‌ನ ಕಾರ್ಯದರ್ಶಿ ಶಿವಶರಣಪ್ಪ ಹೆಡಿಗಿನಾಳ, ಸುದೀಪ ಸಂಸ್ಥೆಯ ಅಧ್ಯಕ್ಷ ಸಾಯಬಣ್ಣ ಪುರ್ಲೆ, ಶಿವರಾಜ ಕಲಿಕೇರಿ ಸೇರಿದಂತೆ ಇತರರಿದ್ದರು.
ಇದೆ ಸಂದರ್ಭದಲ್ಲಿ ಮಕ್ಕಳ ಸಾಹಿತಿ ಶ್ರೀನಿವಾಸ ಚಿತ್ರಗಾರ ಕೊಪ್ಪಳ ಅವರಿಗೆ ಗೌರವ ಪ್ರಶಸ್ತಿಯನ್ನು ಹಾಗೂ ಬಾಲ ಪ್ರತಿಭೆಗಳಾದ ವೀರೆಶ ಹೊಗರಿ ಕಕ್ಕೆರಿ, ಶ್ರೀ ಪಲ್ಲವಿ ಕೆಂಭಾವಿ, ಅಭೀಶೆಕ ಹುಣಸಗಿ, ಅರುಣಾದೇವಿ ಸಗರ, ಶ್ರೇಯಾ ಖಂಡಾರೆ ಗಳಿಗೆ ವಾರ್ಷಿಕ ಪ್ರಶಸ್ತಿಯನ್ನು ಕಾರ್ಯಕ್ರಮದಲ್ಲಿ ನೀಡಿ ಗೌರವಿಸಲಾಯಿತು. ಅಧ್ಯಕ್ಷತೆ ವಹಿಸಿದ್ದ ಟ್ರಸ್ಟ್‌ನ ಅಧ್ಯಕ್ಷ ಪ್ರಕಾಶ ಅಂಗಡಿ ಕನ್ನೆಳ್ಳಿ ಮಾತನಾಡಿ ಸಂಸ್ಥೆಯು ಮಕ್ಕಳ ಸರ್ವತೊಮ್ಮುಖ ಪ್ರಗತಿಗೆ ಪೂರಕವಾಗಿ ಕಾರ್ಯಾನಿರ್ವಹಿಸುತ್ತಿದ್ದು ಮುಂದಿನ ದಿನಗಳಲ್ಲಿ ಮಕ್ಕಳಿಗಾಗಿ ರಚನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.
ಕಕ್ಕೆರಾದ ಸೊಮನಾಥೆಶ್ವರ ಸಂಗೀತ ಪಾಠಶಾಲೆಯ ಮಕ್ಕಳು ಸಂಗೀತೊತ್ಸವ ಕಾರ್ಯಕ್ರಮ ನಡೆಸಿಕೊಟ್ಟರು. ಕಾರ್ಯಕ್ರಮವನ್ನು ಬಿರೇಶ ಕುಮಾರ ದೇವತ್ಕಲ್ ನಿರೂಪಿಸಿದರು, ಕುಮಾರಿ ಭಾಗ್ಯಾಶ್ರೀ ಸಂಗಡಿಗರು ಪ್ರಾರ್ಥಿಸಿದರು, ಮಹೇಶ ಬಿಶೆಟ್ಟಿ ಸ್ವಾಗತಿಸಿದರು, ಬಸವರಾಜ ಚನ್ನಪಟ್ಟಣ ವಂದಿಸಿದರು. ವಿವಿಧ ಸ್ಪರ್ದೆಗಳಲ್ಲಿ ವಿಜೇತರಾದ ವಿಧ್ಯಾರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು ಹಾಗೂ ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ಸಸಿ ನಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…