ಆಳಂದ: ನನ್ನ ಮಣ್ಣು ನನ್ನ ದೇಶ ಅಭಿಯಾನ

0
30

ಆಳಂದ: ನನ್ನ ಮಣ್ಣು ನನ್ನ ದೇಶ ಅಭಿಯಾನಕ್ಕೆ ರಾಷ್ಟ್ರಮಟ್ಟದಲ್ಲಿ ಪ್ರಧಾನಿ ನರೇಂದ್ರಮೋದಿ, ಬಿಜೆಪಿ ರಾಷ್ಟ್ರಿಯ ಅಧ್ಯಕ್ಷ ಜೆ.ಪಿ.ನಡ್ಡಾ ನೇತೃತ್ವದಲ್ಲಿ ಚಾಲನೆ ದೊರೆತಿದೆ. ದೇಶಕ್ಕಾಗಿ ಪ್ರಾಣತೆತ್ತ ಹುತಾತ್ಮ ಸೈನಿಕರ ಸ್ಮರಣಾರ್ಥ ದೆಹಲಿಯ ಅಮೃತವಾಟಿಕಾ ಎಂಬ ಸ್ಥಳದಲ್ಲಿ ಉದ್ಯಾನ ನಿರ್ಮಿಸಲು ಈ ಮಣ್ಣನ್ನು ಸಂಗ್ರಹ ಮಾಡಲಾಗುತ್ತಿದೆ. ಪ್ರತಿಗ್ರಾಮಗಳಲ್ಲೂ ಮಣ್ಣನ್ನು ಸಂಗ್ರಹಿಸಿ ದೆಹಲಿಗೆ ರವಾನೆ ಮಾಡಲಾಗುತ್ತದೆ ಎಂದು ಮಾಜಿ ಶಾಸಕ ಸುಭಾಷ್ ಆರ್ ಗುತ್ತೇದಾರ ಹೇಳಿದರು.

ಇತ್ತೀಚಿಗೆ ಆಳಂದ ಪಟ್ಟಣದ ಆರ್ಯ ಸಮಾಜ ಕಲ್ಯಾಣ ಮಂಟಪದಲ್ಲಿ ಆಳಂದ ಮಂಡಲ ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ನನ್ನ ಮಣ್ಣು ನನ್ನ ದೇಶ ಅಭಿಯಾನದಲ್ಲಿ ಪಾಲ್ಗೊಂಡು ಮಾತನಾಡಿದರು.

Contact Your\'s Advertisement; 9902492681

ವಿಭಾಗೀಯ ಸಂಘಟನಾ ಸಹ ಪ್ರಭಾರಿ ಈಶ್ವರಸಿಂಗ್ ಠಾಕೂರ ಮಾತನಾಡಿ, ನಾವೆಲ್ಲ ಒಂದೇ ಎಂಬ ಐಕ್ಯತಾ ಭಾವನೆ ಮೂಡಿಸುವ ಮೂಲಕ ಒಗ್ಗಟ್ಟು ಪ್ರದರ್ಶನ ಮಾಡುವುದು ನನ್ನ ಮಣ್ಣು ನನ್ನ ದೇಶ ಅಭಿಯಾನದ ಉದ್ದೇಶವಾಗಿದೆ. ಈ ಅಭಿಯಾನ ಪ್ರತಿ ಮಂಡಲ, ಮಹಾಶಕ್ತಿ, ಶಕ್ತಿ ಕೇಂದ್ರ, ಬೂತ್ ಮಟ್ಟದಲ್ಲಿ ಮಣ್ಣು ಸಂಗ್ರಹ ಮಾಡಿ, ದೆಹಲಿಗೆ ಕಳುಹಿಸಿ ಕೊಡಲಾಗುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರಾದ ಅಶೋಕ ಬಗಲಿ, ಹಣಮಂತರಾವ ಮಾಲಾಜಿ, ಆನಂದರಾವ ಪಾಟೀಲ ಕೋರಳ್ಳಿ, ಬಸವರಾಜ ಬಿರಾದಾರ, ಸಂಜಯ ಮಿಸ್ಕಿನ್, ಸಿದ್ದು ಪೂಜಾರಿ, ಶರಣು ಕುಮಸಿ, ಸುನೀತಾ ಪೂಜಾರಿ, ಸುಜ್ಞಾನಿ ಪೊದ್ದಾರ ಸೇರಿದಂತೆ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here