ಬಿಸಿ ಬಿಸಿ ಸುದ್ದಿ

ವಿದೇಶಿ ರಾಯಭಾರಿಗಳೊಂದಿಗೆ ಉದ್ಯಮ ತಂತ್ರಜ್ಞಾನ ಬಗ್ಗೆ ಚರ್ಚೆ; ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ; ಇತ್ತೀಚೆಗೆ ದೆಹಲಿಯಲ್ಲಿ ಫಿನ್ಲ್ಯಾಂಡ್, ಆಸ್ಟ್ರೇಲಿಯಾ, ಜರ್ಮನಿ, ಡೆನ್ಮಾರ್ಕ್ ರಾಯಭಾರಿಗಳನ್ನು ಭೇಟಿ ಮಾಡಿ ಕರ್ನಾಟಕ ಮತ್ತು ಆ ದೇಶಗಳ ನಡುವಿನ ಶಿಕ್ಷಣ ಉದ್ಯಮ ತಂತ್ರಜ್ಞಾನ ಮುಂತಾದ ಹಲವಾರು ವಿಚಾರಗಳ ಕುರಿತು ಚರ್ಚೆ ನಡೆಸಿದ್ದು ಈ ಭೇಟಿಯು ಅತ್ಯಂತ ಫಲಪ್ರದವಾಗಿತ್ತು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಐಟಿ/ಬಿಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಈ ಕುರಿತು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಕರ್ನಾಟಕ – ಫಿನ್‌ಲ್ಯಾಂಡ್ ಇನ್ನೋವೇಶನ್ ಕಾರಿಡಾರ್ ಅನ್ನು ಬಲಪಡಿಸಿವುದರ ಜೊತೆಗೆ ಶಿಕ್ಷಣ ಮತ್ತು ಸಂಶೋಧನಾ ಕ್ಷೇತ್ರಗಳಲ್ಲಿನ ಸಹಯೋಗದ ಕುರಿತು ಫಿನ್ನಿಷ್ ರಾಯಭಾರಿಗಳಾದ ಕಿಮ್ಮೋ ಲಹ್ದೇವಿರ್ತಾ ಅವರೊಂದಿಗೆ ಚರ್ಚಿಸಲಾಯಿತು.

ಗ್ಲೋಬಲ್ ಇನ್ನೋವೇಶನ್ ಅಲೈಯನ್ಸ್‌ನಲ್ಲಿ ಆಸ್ಟ್ರೇಲಿಯಾ ಮೌಲ್ಯಯುತ ಪಾಲುದಾರವಾಗಿದೆ. ಕರ್ನಾಟಕ ಸರ್ಕಾರವು ವಿಕ್ಟೋರಿಯಾ ಇಂಡಿಯಾ ಗವರ್ನಮೆಂಟ್ ಎಕ್ಸ್‌ಚೇಂಜ್ ಪ್ರೋಗ್ರಾಂನಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಇದು ಎರಡೂ ರಾಜ್ಯ ಸರ್ಕಾರಗಳಲ್ಲಿನ ಅಧಿಕಾರವರ್ಗ ಮತ್ತು ಸರ್ಕಾರಿ ವ್ಯವಸ್ಥೆಗಳಲ್ಲಿ ನಾವೀನ್ಯತೆಯನ್ನು ಉತ್ತೇಜಿಸುತ್ತದೆ. ಆಸ್ಟ್ರೇಲಿಯಾ ಹೈ ಕಮಿಷನರ್ ಆಗಿರುವ ಫಿಲಿಪ್ ಗ್ರೀನ್ ಅವರೊಂದಿಗಿನ ಭೇಟಿಯ ವೇಳೆ ಸಾಗರ ಜೈವಿಕ ತಂತ್ರಜ್ಞಾನ ಇನ್ನಿತರೆ ವಿಚಾರಗಳ ಕುರಿತು ಚರ್ಚಿಸಲಾಯಿತು.

ಜರ್ಮನಿ ರಾಯಭಾರಿಗಳಾದ ಡಾ. ಫಿಲಿಪ್ ಅಕರ್‌ಮನ್ ಅವರನ್ನು ಭೇಟಿ ಮಾಡಿ ಗ್ಲೋಬಲ್ ಇನ್ನೋವೇಶನ್ ಅಲೈಯನ್ಸ್‌ನ ಭಾಗವಾಗಿ, ಜ್ಞಾನ ವಿನಿಮಯ ಮತ್ತು ಮಾರುಕಟ್ಟೆ ಪ್ರವೇಶಕ್ಕಾಗಿ ಕರ್ನಾಟಕ ಸರ್ಕಾರವು ಬರ್ಲಿನ್ ಮತ್ತು ಡಸೆಲ್ಡಾರ್ಫ್ ನಗರದೊಂದಿಗಿನ ಪ್ರಾದೇಶಿಕ ಪಾಲುದಾರಿಕೆಯ ಕುರಿತು ಚರ್ಚಿಸಲಾಯಿತು.

ಕರ್ನಾಟಕ ಮತ್ತು ಡೆನ್ಮಾರ್ಕ್ ನಡುವೆ ಗ್ರೀನ್ ಟೆಕ್ ವಲಯದಲ್ಲಿನ ಸಹಕಾರಕ್ಕಾಗಿ ಪರ್ಯಾಯ ಮಾರ್ಗಗಳನ್ನು ಅನ್ವೇಶಿಸುವ ಕುರಿತು ಡೆನ್ಮಾರ್ಕ್ ರಾಯಭಾರಿಗಳಾದ ಫ್ರೆಡ್ಡಿ ಸ್ವೇನ್ ಅವರೊಂದಿಗೆ ಚರ್ಚಿಸಲಾಯಿತು.

ನಮ್ಮ ಸರ್ಕಾರ ರಾಜ್ಯದ ಸಮಗ್ರ ಅಭಿವೃದ್ದಿಗಾಗಿ ಸಾಧ್ಯವಿರುವ ಎಲ್ಲಾ ವಿದೇಶಿ ಪಾಲುದಾರರೊಂದಿಗೆ ಶಿಕ್ಷಣ, ಉದ್ಯಮ, ವಿಜ್ಞಾನ ತಂತ್ರಜ್ಞಾನ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ಸಹಕಾರ ಮತ್ತು ಪಾಲುದಾರಿಕೆಗೆ ನಿರಂತರವಾಗಿ ಶ್ರಮಿಸಲಿದೆ ಎಂದು‌ ಖರ್ಗೆ ಹೇಳಿದ್ದಾರೆ.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

12 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

22 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

22 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

22 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago