ಕಲಬುರಗಿ: ಗೃಹ ರಕ್ಷಕ ದಳದ ( ಹೋಂಗಾಡ್೯) ಕಲಬುರಗಿ ಜಿಲ್ಲಾ ಸಮಾದೇಷ್ಠರಾದ ಸಂತೋಷಕುಮಾರ ಪಾಟೀಲ್ ಅವರಿಗೆ ಶುಕ್ರವಾರ 2022ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕ ಪ್ರದಾನ ಮಾಡಲಾಯಿತು.
ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರು ಪಾಟೀಲ ಅವರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ ಪ್ರದಾನ ಮಾಡಿದರು.
ಗೃಹ ರಕ್ಷಕ ಮತ್ತು ಸಂರಕ್ಷಣಾ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸೇರಿ ಒಟ್ಟಾರೆ 17 ಅಧಿಕಾರಿ-ಸಿಬ್ಬಂದಿಯವರಿಗೆ ಚಿನ್ನದ ಪದಕ ಗೌರವಕ್ಕೆ ಪಾತ್ರರಾಗಿದ್ದು, ಅವರಲ್ಲಿ ಸಂತೋಷಕುಮಾರ ಪಾಟೀಲ ಅವರು ಒಬ್ಬರಾಗಿದ್ದಾರೆ. ದೇಶದ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಚಿನ್ನದ ಪದಕ ಪ್ರಕಟಿಸಲಾಗಿತ್ತು.
ಕಳೆದ ಐದು ವರ್ಷಗಳಿಂದ ಗೃಹ ರಕ್ಷಕ ದಳದ ಕಲಬುರಗಿ ಜಿಲ್ಲಾ ಸಮಾದೇಷ್ಟ (ಹೋಂಗಾಡ್೯ ಕಮಾಂಡೆಂಟ್) ರಾಗಿ ಸೇವೆ ಸಲ್ಲಿಸುತ್ತಿರುವ ಸಂತೋಷಕುಮಾರ ಪಾಟೀಲ್ ಅವರು ಕೊರೋನಾ ವೇಳೆಯಲ್ಲಿ ಅಮೋಘ ಸೇವೆ, ಹೋಂಗಾಡ್೯ ಸೇವೆ ಬಲಪಡಿಸಿರುವುದು ಜೊತೆಗೇ ಹೋಂಗಾಡ್೯ ಸಂಖ್ಯೆ ಹೆಚ್ಚಿಸಿರುವುದರಿಂದ ಸರ್ಕಾರ ಅವರ ಸೇವೆಯನ್ನು ಗುರುತಿಸಿ ಮುಖ್ಯಮಂತ್ರಿ ಗಳ ಚಿನ್ನದ ಪದಕ ಗೌರವ ನೀಡಿ ಗೌರವಿಸಿದೆ.
ಚಿನ್ನದ ಪದಕ ಪ್ರೇರಣೆ ಹೆಚ್ಚಿಸಿದೆ: ಗೃಹ ರಕ್ಷಕ ದಳದ ಸೇವೆ ಬಲಪಡಿಸಲು ಪ್ರಮಾಣಿಕ ಸೇವೆ ಹಾಗೂ ಸೇವಾ ಕಾರ್ಯ ವಿಸ್ತರಿಸಲು ಮುಖ್ಯಮಂತ್ರಿಗಳ ಚಿನ್ನದ ಪದಕ ಮತ್ತಷ್ಟು ಪ್ರೇರಣೆ ನೀಡಿದೆ ಎಂದು ಸಂತೋಷ ಕುಮಾರ ಪಾಟೀಲ್ ಹರ್ಷದಿಂದ ನುಡಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…