ಬಿಸಿ ಬಿಸಿ ಸುದ್ದಿ

ವಾಟ್ಸಾಪ್‌ ಚಾನೆಲ್‌ ಶುರು ಮಾಡಿದ ಅಬಕಾರಿ ಸಚಿವ ಆರ್‌.ಬಿ.ತಿಮ್ಮಾಪುರ

ಬೆಂಗಳೂರು: ರಾಷ್ಟ್ರ ಹಾಗೂ ರಾಜ್ಯ ರಾಜಕಾರಣದಲ್ಲಿ ಇದೀಗ ವಾಟ್ಸಾಪ್‌ ಚಾನಲ್‌ಗಳದ್ದೇ ಸದ್ದು. ಪ್ರಧಾನಿ ನರೇಂದ್ರ ಮೋದಿ, ಸಿಎಂ ಸಿದ್ದರಾಮಯ್ಯ ಅವರು ಈಗಾಗಲೇ ತಮ್ಮ ವಾಟ್ಸಾಪ್‌ ಚಾನಲ್‌ಗಳನ್ನು ಶುರು ಮಾಡಿದ್ದಾರೆ. ಮಿಲಿಯನ್‌ಗಟ್ಟಲೆ ಫಾಲೋವರ್ಸ್‌ಗಳನ್ನೂ ಹೊಂದಿದ್ದಾರೆ. ಇದೀಗ ರಾಜ್ಯದ ಅಬಕಾರಿ ಸಚಿವ ಆರ್‌.ಬಿ.ತಿಮ್ಮಾಪುರ ಸಹ ತಮ್ಮದೇ ವಾಟ್ಸಾಪ್‌ ಚಾನಲ್‌ ಆರಂಭಿಸಿ, ಸಾರ್ವಜನಿಕರೊಂದಿಗೆ ನಿರಂತರ ಸಂಪರ್ಕದಲ್ಲಿರಲು ಮುಂದಾಗಿದ್ದಾರೆ.

ವಾಟ್ಸಾಪ್ ನೂತನವಾಗಿ ಪರಿಚಯಿಸಿರುವ ಈ ಚಾನೆಲ್ ಫೀಚರ್‌ನಲ್ಲಿ ಸಿಎಂ ಸಿದ್ದರಾಮಯ್ಯ ಕೂಡ ಖಾತೆ ತೆರೆದಿದ್ದಾರೆ. ಈ ಮೂಲಕ ಜನಸಾಮಾನ್ಯರಿಗೆ ಸುಲಭವಾಗಿ ಮಾಹಿತಿ ನೀಡಲು ಮುಂದಾಗಿದ್ದಾರೆ. 

ಕೆಲ ದಿನಗಳ ಹಿಂದೆಯಷ್ಟೇ ಪರಿಚಯಿಸಲ್ಪಟ್ಟ ಹೊಸ ಫೀಚರ್ ವಾಟ್ಸಾಪ್ ಚಾನೆಲ್‌ನಲ್ಲಿ ಈಗಾಗಲೇ ದೇಶದ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಸಹ ಖಾತೆ ತೆರೆದಿದ್ದು, ಸರ್ಕಾರ ಮತ್ತು ಮುಖ್ಯಮಂತ್ರಿಗಳಿಗೆ ಸಂಬಂಧಿಸಿದ ಮಾಹಿತಿಯನ್ನು ನೇರವಾಗಿ ಜನರ ಮೊಬೈಲ್‌ಗೆ ರವಾನಿಸುವ ಪ್ರಯತ್ನ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರಂತೆ ಆರ್‌.ಬಿ.ತಿಮ್ಮಾಪುರ ಅವರೂ ಚಾನೆಲ್ ಆರಂಭಿಸಿ, ತಮ್ಮ ಇಲಾಖೆಗೆ ಸಂಬಂಧಿಸಿದ ಮಾಹಿತಿ ಹಂಚಿಕೊಳ್ಳಲು ಉತ್ಸುಕರಾಗಿದ್ದಾರೆ.

ವಾಟ್ಸಾಪ್ ಚಾನೆಲ್ ಮೂಲಕ ನಿಮ್ಮ ಮೊಬೈಲ್‌ನಲ್ಲೇ ತಿಮ್ಮಾಪುರ ಅವರ ಕಾರ್ಯಗಳ ಕುರಿತು ಮಾಹಿತಿ ಪಡೆಯಲು ಮೊದಲು ನಿಮ್ಮ ವಾಟ್ಸಾಪ್ ಅನ್ನು ಅಪ್ಡೇಟ್ ಮಾಡಿಕೊಂಡು, ವಾಟ್ಸಾಪ್ ಚಾನೆಲ್ ಫೀಚರ್ ಬರುವಂತೆ ಮಾಡಿಕೊಳ್ಳಿ. ಬಳಿಕ https://whatsapp.com/channel/0029Va90uRhHrDZcz1QKLa2h ಈ ಲಿಂಕ್‌ ಕ್ಲಿಕ್ಕಿಸುವ ಮೂಲಕ ತಿಮ್ಮಾಪುರ ಅವರೊಂದಿಗೆ ಸಂಪರ್ಕದಲ್ಲಿರಬಹುದು. ಅಥವಾ RB Timmapur ಎಂದು ಸರ್ಚ್ ಮಾಡಿ ಚಾನೆಲ್ ಫಾಲೋ ಮಾಡುವ ಮೂಲಕವೂ ಮಾಹಿತಿ ಪಡೆಯಿರಿ.

emedia line

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

14 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

17 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

23 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

24 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

1 day ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago