ಆಳಂದ; ಶಾಸಕ ಬಿ ಆರ್ ಪಾಟೀಲ ಪ್ರಧಾನಿ ನರೇಂದ್ರ ಮೋದಿ ಮತ್ತು ಹಿಂದೂಗಳ ಬಗ್ಗೆ ನೀಡಿರುವ ಹೇಳಿಕೆ ಅವರ ದಿವಾಳಿತನವನ್ನು ಎತ್ತಿ ತೋರಿಸುತ್ತದೆ ಎಂದು ಜಿ.ಪಂ ಮಾಜಿ ಉಪಾಧ್ಯಕ್ಷ ಹರ್ಷಾನಂದ ಗುತ್ತೇದಾರ ಅಭಿಪ್ರಾಯಟ್ಟಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಇತ್ತೀಚಿಗೆ ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನ ಸಂದರ್ಭದಲ್ಲಿ ಆಳಂದ ಶಾಸಕ ಬಿ ಆರ್ ಪಾಟೀಲ ಪ್ರಧಾನಿ ಮೋದಿಯವರ ಕಾರ್ಯಕ್ಷಮತೆ ಬಗ್ಗೆ ಮಾತನಾಡುತ್ತಾ ಫುಲ್ವಾಮಾ ದಾಳಿಯ ಬಗ್ಗೆ ಅನುಮಾನ ವ್ಯಕ್ತಪಡಿಸಿ ಪ್ರಧಾನಿಯವರ ಮೇಲೆ ಸುಳ್ಳು ಆಪಾದನೆಗಳನ್ನು ಮಾಡುತ್ತಾ ಆಧಾರರಹಿತವಾಗಿ ಟೀಕೆ ಮಾಡಿದ್ದಾರೆ ಇದನ್ನು ಖಂಡಿಸುವುದಾಗಿ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರನ್ನು ಈಡೀ ಜಗತ್ತೇ ಒಪ್ಪಿಕೊಂಡಿದೆ ಮತ್ತು ಅವರ ನಾಯಕತ್ವದ ಮೇಲೆ ವಿಶ್ವಾಸವಿರಿಸಿದೆ ಆದರೆ ತಾವು ಮಾತ್ರ ಒಂದು ವರ್ಗವನ್ನು ಒಲೈಸಿಕೊಳ್ಳುವುದಕ್ಕಾಗಿ ನಿರಂತರವಾಗಿ ಹಿಂದೂಗಳ ಅವಹೇಳನ ಮಾಡುವ ಕಾರ್ಯ ಮಾಡುತ್ತೀದ್ದೀರಿ ಇದು ತುಷ್ಠೀಕರಣದ ರಾಜಕಾರಣವಲ್ಲದೇ ಮತ್ತೇನು ಎಂದು ಪ್ರಶ್ನಿಸಿದ್ದಾರೆ.
ಶಾಸಕ ಬಿ ಆರ್ ಪಾಟೀಲ ಸಚಿವರ ಮೇಲಿನ ದ್ವೇಷವನ್ನು, ಕಾಂಗ್ರೆಸ್ ಪಕ್ಷದ ಆಂತರಿಕ ಕಚ್ಚಾಟವನ್ನು ಮರೆಮಾಚುವ ದುರುದ್ದೇಶದಿಂದ ಫುಲ್ವಾಮಾ ದಾಳಿಯನ್ನು ಸತ್ಯಪಾಲ ಮಲ್ಲಿಕರ ಹೇಳಿಕೆಯನ್ನು ಉಲ್ಲೇಖಿಸಿ ಹೇಳಿದ್ದಾರೆ ಆದರಿಂದ ಇಬ್ಬರ ಮೇಲೂ ದೇಶದ್ರೋಹದ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ.
ಬಿಜೆಪಿಯನ್ನು ದ್ವೇಷಿಸುವ ಭರದಲ್ಲಿ ದೇಶದ ಭದ್ರತೆ ಮತ್ತು ಸುರಕ್ಷತೆಯನ್ನು ಅಪಮಾನಗೊಳಿಸಿ ಸೈನಿಕರಿಗೆ ದೇಶವಾಸಿಗಳಿಗೆ ಅವಮಾನ ಮಾಡಿದ್ದಾರೆ ಅಲ್ಲದೇ ಅವರು ನೀಡಿರುವ ಹೇಳಿಕೆಯು ಭಯೋತ್ಪಾದನೆಗೆ, ಭಯೋತ್ಪಾದಕರಿಗೆ ಪ್ರಚೋದನೆ ನೀಡಿರುವಂತಿದೆ ಕೂಡಲೇ ಸೈನಿಕರ ಮತ್ತು ದೇಶದ ಜನರ ಬಳಿ ಬಹಿರಂಗ ಕ್ಷಮೆ ಕೋರಬೇಕು. ಕೇವಲ ಅಧಿಕಾರದ ಆಸೆಯಿಂದ ಷಡ್ಯಂತ್ರದಿಂದ ವಿರೋಧಿ ಒಕ್ಕೂಟದವರು ದಾಳಿ ನಡೆದೇ ಇಲ್ಲವೆಂದು ಜನರಲ್ಲಿ ತಪ್ಪು ಮಾಹಿತಿ ನೀಡುತ್ತಿದ್ದಾರೆ. ದಾಳಿಯ ಬಗ್ಗೆ ಸ್ವತ: ಪಾಕಿಸ್ತಾನವೇ ಒಪ್ಪಿಕೊಂಡಿದೆ. ಈ ಕುರಿತು ದೇಶವಾಸಿಗಳ ಕ್ಷಮೆ ಕೇಳಬೇಕು ಇಲ್ಲದಿದ್ದರೇ ಅವರ ವಿರುದ್ಧ ಜನಾಂದೋಲನ ರೂಪಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಶಾಸಕ ಬಿ ಆರ್ ಪಾಟೀಲ ತಮ್ಮ ಕೀಳುಮಟ್ಟದ ರಾಜಕಾರಣಕ್ಕಾಗಿ ದೇಶವನ್ನು, ಪ್ರಧಾನಿಗಳನ್ನು, ಸೈನಿಕರ ಸಾಮಥ್ರ್ಯವನ್ನು ಅವಮಾನಿಸಿ ತುಷ್ಠೀಕರಣ ರಾಜಕಾರಣ ಮಾಡುತ್ತಿದ್ದಾರೆ. ಇದು ಅವರ ನೈತಿಕ ಅಧಪತನವನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ.
ಜನ ನಿಮಗೆ ಐದು ವರ್ಷಗಳವರೆಗೆ ಜನಾದೇಶ ನೀಡಿದ್ದಾರೆ ಈ ಅವಧಿಯಲ್ಲಿ ಜನೋಪಯೋಗಿ ಕಾರ್ಯಗಳನ್ನು ಮಾಡಿ ಅದನ್ನು ಬಿಟ್ಟು ಹೀಗೆ ದೇಶವನ್ನು ಹೀಗೆಳೆಯುವ ಕೆಲಸ ಮಾಡಬೇಡಿ. ತಾವು ಗೆದ್ದಾಗಿನಿಂದ ಜನ ಎಲ್ಲವನ್ನು ಅವಲೋಕಿಸುತ್ತಿದ್ದಾರೆ ಎಂದು ತೀರುಗೆಟು ನೀಡಿದ್ದಾರೆ.
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…
ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…
ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಯವರು ಮೂರು ವರ್ಷಗಳು ಪೂರೈಸಿರುವ…
ಕಲಬುರಗಿ: ವಿದ್ಯಾರ್ಥಿನಿಯರ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣ, ಶಿಕ್ಷಣವೆಂದರೆ ಕೇವಲ ಆನಲೈನ ಮಾಹಿತಿಯಲ್ಲ, ಪುಸ್ತಕದ ಜ್ಞಾನವೂ ಅಲ್ಲ, ವಿದ್ಯಾರ್ಥಿನಿಯರ ಬೌದ್ಧಿಕ, ಮಾನಸಿಕ,…
ಶಹಾಬಾದ: ನಗರದ ಶಿವಯೋಗಿಸ್ವಾಮಿ ಪ್ರೌಢಶಾಲೆಯಲ್ಲಿ ಪ್ರಿಯಾಂಕ್ ಖರ್ಗೆ ಅಭಿಮಾನಿ ಬಳಗದ ವತಿಯಿಂದ ಶುಕ್ರವಾರ ಸಚಿವರಾದ ಪ್ರಿಯಾಂಕ್ ಖರ್ಗೆ ಅವರ ಜನ್ಮ…