ಬಿಸಿ ಬಿಸಿ ಸುದ್ದಿ

ವೈಜ್ಞಾನಿಕ ಮನೋಭಾವನೆಜತೆ ಸಂಸ್ಕಾರ ಬೆಳೆಸಿ

ಕಲಬುರಗಿ: ಪ್ರಶಿಕ್ಷಣಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆ ಬೆಳೆಸುವುದರ ಜೊತೆಗೆ ಸಂಸ್ಕಾರವನ್ನು ಕಲಿಸುವುದು ಶಿಕ್ಷಕರ ಜವಾಬ್ದಾರಿ ಎಂದು ದೇವಿಂದ್ರ ವಿಶ್ವಕರ್ಮ ಹೇಳಿದರು.

ಅವರು ಜೇವರ್ಗಿ ನಗರದ ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ವಿವಿಧ ಸಹಪಠ್ಯ ಚಟುವಟಿಕೆಗಳ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿದ ಅವರು, ಸಹಪಠ್ಯ ಚಟುವಟಿಕೆಗಳಲ್ಲಿ ಹಲವು ವಿಧಗಳಿದ್ದು, ಸಹಪಠ್ಯ ಚಟುವಟಿಕೆಯಲ್ಲಿ ಕಲೆ, ಸಾಹಿತ್ಯ, ಜಾನಪದ ಕಲೆಗಳ ಅನಾವರಣದಿಂದ ವಿದ್ಯಾರ್ಥಿಗಳು ಸಾಂಸ್ಕøತಿಕವಾಗಿ ಮುಂದುವರೆಯುತ್ತಾರೆ.

ಸಹಪಠ್ಯ ಚಟುವಟಿಕೆಯಲ್ಲಿ ಕ್ರೀಡೆಯು ಬಹಳ ಮಹತ್ವದ್ದಾಗಿದ್ದು, ಮಕ್ಕಳ ದೈಹಿಕ ಮಾನಸಿಕ ಬೆಳೆವಣಿಗೆಗೆ ಕ್ರೀಡೆ ಸಹಕಾರಿಯಾಗಿದೆ. ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಮನಸ್ಸು ಮತ್ತು ದೇಹ ಸಧೃಢವಾಗಿರುತ್ತದೆ. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳು ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಪ್ರೇರೆಪಿಸುವುದು ಶಿಕ್ಷಕರ ಮತ್ತು ಪಾಲಕರ ಕರ್ತವ್ಯವಾಗಿದೆ. ಮಕ್ಕಳಲ್ಲಿ ಸ್ಪರ್ಧಾ ಮನೋಭವನೆ ಬೆಳೆಯಬೇಕಾದರೆ ಮೊದಲು ಶಿಕ್ಷಕರು ವಿವಿಧ ಸಹಪಠ್ಯಗಳಲ್ಲಿ ಭಾಗವಹಿಸಬೇಕು.

ಕಲೆ, ಸಂಸ್ಕøತಿ, ಕ್ರೀಡೆ, ಎನ್‍ಸಿಸಿ ಹಾಗೂ ಎನ್‍ಎಸ್‍ಎಸ್ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಸದಾ ತಮ್ಮನ್ನು ತಾವೇ ತೊಡಗಿಸಿಕೊಂಡಾಗ ಮಾತ್ರ ವಿದ್ಯಾರ್ಥಿ ಜೀವನ ಪರಿಪೂರ್ಣವಾಗುತ್ತದೆ. ಶಿಕ್ಷಕರ ಮಾತುಗಳನ್ನು ಪ್ರಶಿಕ್ಷಣಾರ್ಥಿಗಳು ತಪ್ಪದೇ ಪಾಲಿಸಬೇಕು. ಸಮಾಜ ಸುಧಾರಣೆಗೆ ಗುರು, ತಾಯಿ ಮತ್ತು ತಂದೆ ಪಾತ್ರ ಪ್ರಮುಖ. ಮನೆಯಲ್ಲಿ ಪಾಲಕರು, ಶಾಲೆಯಲ್ಲಿ ಗುರುಗಳು ಮಕ್ಕಳಿಗೆ ಉತ್ತಮ ಸಂಸ್ಕಾರವೆಂಬ ಬೀಜ ಬಿತ್ತಬೇಕು. ಮುಂದೆ ಹೆಮ್ಮರವಾಗಿ ಸಮಾಜಕ್ಕೆ ನೆರಳು ನೀಡುತ್ತದೆ. ಸಂಸ್ಕಾರಯುತ ಶಿಕ್ಷಣ ಇಂದು ಅಗತ್ಯವಾಗಿದೆ ಎಂದು ಶಿಕ್ಷಣತಜ್ಞ ದೇವಿಂದ್ರ ವಿಶ್ವಕರ್ಮ ಹೇಳಿದರು.

ಈ ಸಂದರ್ಭದಲ್ಲಿ ಪ್ರಶಿಕ್ಷಣಾರ್ಥಿಗಳಾದ ಐಶು ಎಮ್, ಶಿವಾನಿ, ಐಶ್ವರ್ಯ, ತಾಯಮ್ಮ, ಶರಣಮ್ಮ, ಮೆಹಜಬಿನ್, ರೇಷ್ಮಾ, ರೇಣುಕಾ, ಭಾಗ್ಯಶ್ರೀ ಪಾಟೀಲ್, ಭವಾನಿ ಮಾಲಿಪಾಟೀಲ್, ಅಂಬಿಕಾ, ಶಾಹೀನ್, ಸುಧಾ, ಸವಿತಾ ಎಮ್, ರಾಜಶ್ರೀ ಬಿರಾದಾರ, ಲಕ್ಷ್ಮೀ, ಮೋನಿಕಾ, ದಾನೇಶ್ವರಿ, ಬಸಮ್ಮಾ ಆರ್, ದಾನಮ್ಮ, ರೂಪಾ, ಪೂಜಾ ಎಸ್ ನಂದಿ, ಜ್ಯೋತಿ ಎಮ್, ಕುಶಾಲ್, ಸಕ್ಕರೆಪ್ಪ, ರಿಯಾಜ್, ಸುರೇಶ್, ಇಸ್ಮಾಯಿಲ್, ಶಿವರಾಜ್ ಮಹಾಂತೇಶ ಸೇರಿ ಮುಂತಾದವರು ಹಾಜರಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

12 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

22 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

22 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

22 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago