ಕಲಬುರಗಿ: ಕೋವಿಡ್ ಸಂದರ್ಭದಲ್ಲಿ ಪ್ರಾಣದ ಹಂಗು ತೊರೆದು ಕರ್ತವ್ಯ ನಿರ್ವಹಿಸಿದ ಬಸ್ ಚಾಲಕ ನಿರ್ವಾಹಕರು, ಆಟೊ, ಚಾಲಕರನ್ನು ಕಲ್ಯಾಣ ಕರ್ನಾಟಕ ಸೇನೆಯ ಕಲಬುರಗಿ ಜಿಲ್ಲಾ ಮಹಿಳಾ ಘಟಕದಿಂದ ಸನ್ಮಾನಿಸಲಾಯಿತು.
ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಅಂಗವಾಗಿ ನಗರದ ಕನ್ನಡ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ 25 ಚಾಲಕ ನಿರ್ವಾಹಕರು ಹಾಗೂ 25 ಆಟೊ ಚಾಲಕರಿಗೆ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಸಾನ್ನಿಧ್ಯ ವಹಿಸಿದ್ದ ಜೈ ಭಾರತ ಮಾತಾ ಸೇವಾ ಸಮಿತಿ ನವದೆಹಲಿಯ ಕಲ್ಯಾಣ ರಾಷ್ಟ್ರೀಯ ಸಂಸ್ಥಾಪಕ ಅಧ್ಯಕ್ಷ ಹವಾ ಮಲ್ಲಿನಾಥ ಮಹಾರಾಜ ಅವರು ಸರ್ದಾರ್ ವಲ್ಲಭಭಾಯಿ ಪಟೇಲ್ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.
ಕಾಂಗ್ರೆಸ್ ದಕ್ಷಿಣ ಮುಖಂಡ ನೀಲಕಂಠರಾವ್ ಮೂಲಗೆ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ಕಲ್ಯಾಣ ಕರ್ನಾಟಕ ಸೇನಯ ಸಂಸ್ಥಾಪಕ ಅಧ್ಯಕ್ಷ ದತ್ತು ಹೈಯಾಳಕ ಅಧ್ಯಕ್ಷತೆ ವಹಿಸಿದ್ದರು.
ಕರ್ನಾಟಕ ಸೇನೆಯ ಗೌರವಾಧ್ಯಕ್ಷೆ ರೇಣುಕಾ ಹೈಯ್ಯಾಳಕರ್, ಕಲ್ಯಾಣ ಕರ್ನಾಟಕ ಸೇನೆಯ ಮಹಿಳಾ ಘಟಕದ ಅಧ್ಯಕ್ಷೆ ಗೋರಂಪಳ್ಳಿ, ನೀಲಮ್ಮಾ ಕಮಲಾಪೂರಕರ್, ಲಲಿತಾ ನೀಲೂರಕರ್, ಪಂಚಶೀಲಾ ಸುತಾರ ವೇದಿಕೆಯಲ್ಲಿದ್ದರು. ಎಂ.ಎನ್.ಸುಗಂಧಿ ರಾಜಾಪುರ ನಿರೂಪಿಸಿದರು.