ಕಲಬುರಗಿ: ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಕಲಗುರ್ತಿ ಗ್ರಾಮದ ದೇವಾನಂದ ಕೋರಬಾ ಕೊಲೆ ಪ್ರಕರಣದ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಜಿಲ್ಲಾ ಕೋಲಿ ಕಬ್ಬಲಿಗ ಸಮಾಜ ಸಮನ್ವಯ ಸಮಿತಿಯಿಂದ ಪ್ರತಿಭಟನೆ ನಡೆಸಿ, ನಿರಂತರ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಸಂಸದ ಡಾ. ಉಮೇಶ ಜಾಧವ ಅವರು ಆಗಮಿಸಿದರು.
ಅವರಿಗೆ ಮುಖಂಡರಾದ ಅವ್ವಣ್ಣ ಮ್ಯಾಕೆರಿ ಶರಣಪ್ಪ ತಳವಾರ ಅವರು ಸೇರಿದಂತೆ ಸಮಾಜದ ಹಲವಾರು ಮುಖಂಡರು ಮನವಿ ಸಲ್ಲಿಸಿದರು.