ಬಿಸಿ ಬಿಸಿ ಸುದ್ದಿ

ತಮಿಳು ನಾಡಿಗೆ ನೀರು ಬಿಡದಂತೆ ಆಗ್ರಹಿಸಿ ಕರವೇ ಪ್ರತಿಭಟನೆ

ಶಹಾಬಾದ: ತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ಆಗ್ರಹಿಸಿ ಶುಕ್ರವಾರ ಕರ್ನಾಟಕ ರಕ್ಷಣಾ ವೇದಿಕೆಯ (ಪ್ರವೀಣಶೆಟ್ಟಿ ಬಣ) ಪದಾಧಿಕಾರಿಗಳು ನಗರದ ರಾಷ್ಟ್ರೀಯ ಹೆದ್ದಾರಿ ಹೊಂದಿಕೊಂಡಿರುವ ವಾಡಿ –ಚಿತ್ತಾಪೂರ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಿದರು.

ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು ಕಾವೇರಿ ಕನ್ನಡಿಗರ ಜೀವನಾಡಿ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಒಂದು ಹನಿ ನೀರು ಹರಿಸುವುದಿಲ್ಲ ಎಂದು ದಿಕ್ಕಾರ ಕೂಗಿದರು. ಕರ್ನಾಟಕ ಬಂದ್‍ಗೆ ಬೆಂಬಲಿಸಿ ಸೂಚಿಸಿ ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರ ಗಂಭೀರವಾಗಿ ಚರ್ಚಿಸಿ ತಮಿಳುನಾಡಿಗೆ ನೀರು ಬಿಡದಂತೆ ಕ್ರಮವಹಿಸಬೇಕೆಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕರವೇ ಅಧ್ಯಕ್ಷ ವಿಶ್ವರಾಜ ಫಿರೋಜಬಾದ, ಕಾವೇರಿ ವಿಚಾರವಾಗಿ ಸಂಸತ್ತಿನಲ್ಲಿ ಚರ್ಚಿಸದೆ ರಾಜ್ಯದ ಸಂಸದರು ಈ ವಿಷಯದಲ್ಲಿ ನಿರ್ಲಕ್ಷ ಧೋರಣೆ ಅನುಸರಿಸುತ್ತಿದ್ದಾರೆ. ಈ ದೋರಣೆಯಿಂದ ಈಗ ಮಳೆ ಇಲ್ಲದೆ ಪ್ರದೇಶವೆಂದು ಘೋಷಣೆ ಮಾಡಲಾಗಿರುತ್ತದೆ. ಕಾವೇರಿ ನೀರನ್ನು ಅವಲಂಬಿತರಾಗಿದ್ದಾರೆ. ರೈತರ ಪರಿಸ್ಥಿತಿ ಹೀಗೆ ಹೀನಾಯವಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ರಾಜ್ಯ ಸರ್ಕಾರ ಸೂಕ್ತ ಕ್ರಮವಹಿಸಬೇಕೆಂದು ಆಗ್ರಹಿಸಿದರು.

ಮುಖಂಡ ಮಲ್ಲೇಶಿ ಭಜಂತ್ರಿ ಮಾತನಾಡಿ, ಈ ವರ್ಷ ಬರಗಾಲ ಎದುರಾಗಿದೆ. ರೈತರು ಸಂಕಷ್ಟದಲ್ಲಿದ್ದಾರೆ. ವಾಡಿಕೆಯಂತೆ ಮಳೆಯಾಗಿಲ್ಲ. 192 ತಾಲೂಕುಗಳು ಬರಪಿಡಿತವಾಗಿವೆ. ಕಾವೇರಿ ಕಣಿವೆ ಭಾಗದಲ್ಲಿ ಪರಿಸ್ಥಿತಿ ತೀವ್ರ ಸ್ವರೂಪ ಪಡೆದಿದೆ.ಕೆಆರ್‍ಎಸ್ ಜಲಾಶಯದಲ್ಲಿ ನೀರಿನ ಪ್ರಮಾಣ ದಿನ ಕಳೆದಂತೆ ಕುಸಿಯುತ್ತಿದೆ. ಮುಂದಿನ ದಿನಗಳಲ್ಲಿ ಕುಡಿಯಲು ನೀರು ಅಭಾವವಾಗುವ ಸಾಧ್ಯತೆ ಇದೆ. ಇಂಥ ಸ್ಥಿತಿಯಲ್ಲಿ ತಮಿಳುನಾಡಿಗೆ ಸರ್ಕಾರ ನೀರು ಬಿಡಲು ಮುಂದಾಗಿರುವುದು ಸರಿಯಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರ ರಾಜ್ಯದ ರೈತರು ಹಾಗೂ ಸಾರ್ವಜನಿಕರ ಹಿತ ಕಾಯಬೇಕು. ಗಟ್ಟಿ ನಿರ್ಧಾರ ಕೈಗೊಳ್ಳಬೇಕು ಎಂದು ಎಚ್ಚರಿಸಿದರು.

ಪ್ರತಿಭಟನೆಯಿಂದ ಸುಮಾರು 2ಗಂಟೆಗಳ ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು.ಇದರಿಂದಕಲಬುರಗಿ-ಯಾದಗಿರಿ ತೆರಳುವ ನೂರಾರು ವಾಹನಗಳು ಹಾಗೂ ಸಾರ್ವಜನಿಕರು ರಸ್ತೆಯಲ್ಲಿ ನಿಂತು ಸಂಕಷ್ಟ ಅನುಭವಿಸಿದರು.

ಈ ಸಂದರ್ಭದಲ್ಲಿ ಕರವೇ ಉಪಾದ್ಯಕ್ಷರಾದ ಲಿಂಗರಾಜ ಕಮರವಾಡಿ, ನಗರ ಘಟಕ ಅಧ್ಯಕ್ಷ ಹಣಮಂತ ತಳವಾರ, ನಗರ ಘಟಕ ಉಪಾಧ್ಯಕ್ಷ ಕಾಶಿನಾಥ ಕೋಳಸಾ ಫೈಲ್, ವಿಕಲಚೇತನರ ಕ್ಷೇಮಾಭಿವೃದ್ಧಿ ಜಿಲ್ಲಾ ಅಧ್ಯಕ್ಷ ಮಲ್ಲೇಶಿ ಭಜಂತ್ರಿ, ವಿಕಲಚೇತನರ ಕ್ಷೇಮಾಭಿವೃದ್ಧಿ ತಾಲೂಕಾಧ್ಯಕ್ಷ ಚಂದ್ರಕಾಂತ ಪಾಟೀಲ, ಲಾಲ್ ಅಹ್ಮದ, ಸೈಯದ ಸಮದ್, ಶರಣು ತಳವಾg,À ದೇವರಾಜ ಮಾಲಗತ್ತಿ ,ಕಟ್ಟಡ ಕಾರ್ಮಿಕ ತಾಲೂಕ ಸಂಚಾಲಕ ನಾಗಪ್ಪ ರಾಯಚೂರಕರ್, ಭೀಮಾಶಂಕರ ಬಗೂಂಡಿ, ಬಸವರಾಜ ಸೇರಿದಂತೆ ಅನೇಕರು ಇದ್ದರು.

emedialine

Recent Posts

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

46 mins ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

48 mins ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

53 mins ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

57 mins ago

ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಬೇಡಿ

ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…

58 mins ago

ಸೇಡಂ: `ಅಮ್ಮ ಪ್ರಶಸ್ತಿ’ ಪ್ರದಾನ ಸಮಾರಂಭ ನಾಳೆ

ಸೇಡಂ (ಕಲಬುರಗಿ);  ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…

1 hour ago