ಮಹಾತ್ಮ ಗಾಂಧೀಜಿ ಅವರ 154ನೇ ಜನ್ಮ ವರ್ಷಾಚರಣೆ: ಜಿಲ್ಲೆಯಾದ್ಯಂತ ಅರ್ಥಪೂರ್ಣ ಆಚರಣೆಗೆ ನಿರ್ಧಾರ

0
27

ಕಲಬುರಗಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 154ನೇ ಜಯಂತಿಯನ್ನು ಅಕ್ಟೋಬರ್ 2 ರಂದು ಕಲಬುರಗಿ ಜಿಲ್ಲೆಯಾದ್ಯಂತ ಅರ್ಥಪೂರ್ಣವಾಗಿ ಆಚರಿಸಲು ಇತ್ತೀಚೆಗೆ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ.

ಅಕ್ಟೋಬರ್ 2 ರಂದು ಬೆಳಿಗ್ಗೆ 9 ಗಂಟೆಗೆ ಕಲಬುರಗಿ ನಗರದ ಡಾ.ಎಸ್.ಎಂ‌.ಪಂಡಿತ್ ರಂಗಮಂದಿರದಲ್ಲಿ ಬಾಪು ಮತ್ತು
ಮಾಜಿ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮ ಅಧಿಕೃತವಾಗಿ ಉದ್ಘಾಟನೆಗೊಳ್ಳಲಿದೆ. ಸರ್ವಧರ್ಮಗಳ ಗುರುಗಳಿಂದ ಧಾರ್ಮಿಕ ಪಠಣ, ಭಾರತ ಸೇವಾ ದಳದಿಂದ ಸರ್ವಧರ್ಮೀಯ ಪ್ರಾರ್ಥನೆ, ಗಾಂಧಿ ಪ್ರಿಯ ಗೀತೆಗಳು ಹಾಗೂ ಸದ್ಭಾವನಾ ಗೀತೆಗಳ ಗಾಯನ ನಡೆಯಲಿದೆ. ಅಸ್ಪೃಶ್ಯತೆ ನಿವಾರಣೆ, ಅಹಿಂಸೆ , ಮಹಿಳಾ ಸಬಲೀಕರಣ, ಗ್ರಾಮೀಣ ನೈರ್ಮಲ್ಯ, ಮದ್ಯಪಾನ ವಿರೋಧಿ ನೀತಿ, ಖಾದಿ ಮತ್ತು ಸ್ವದೇಶಿ ವಸ್ತು ಬಳಕೆ ಮತ್ತಿತರ ವಿಷಯಗಳ ಕುರಿತು ತಜ್ಞರಿಂದ ವಿಶೇಷ ಉಪನ್ಯಾಸ ನಡೆಸಲು ಹಾಗೂ ವೇದಿಕೆ ಕಾರ್ಯಕ್ರಮ ಮುನ್ನ ಟೌನ್ ಹಾಲ್ ಬಳಿ ಇರುವ ಗಾಂಧಿ ಪ್ರತಿಮೆಗೆ ಗಣ್ಯರಿಂದ ಮಾಲಾರ್ಪಣೆ ಮಾಡಲು ಸಹ ಸಭೆ ನಿರ್ಧರಿಸಿತು.

Contact Your\'s Advertisement; 9902492681

ಶಿಷ್ಠಾಚಾರದಂತೆ ಜಿಲ್ಲಾ ಉಸ್ತುವಾರಿ ಸಚಿವರು, ಜನಪ್ರತಿನಿಧಿಗಳನ್ನು ಆಹ್ವಾನಿಸಲು ಮತ್ತು ಇದೇ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ “ಬಾಪು” ಅವರ ಜನ್ಮ‌ದಿನ ಹಿನ್ನೆಲೆಯಲ್ಲಿ ಶಾಲಾ-ಕಾಲೇಜು ಮಕ್ಕಳಿಗೆ ಆಯೋಜಿಸಿದ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ನಗದು ಬಹುಮಾನ, ಪ್ರಮಾಣ ಪತ್ರ ಸಹ ವಿತರಿಸಲು ಸಭೆ ಒಪ್ಪಿಗೆ ಸೂಚಿಸಿತು.

ಕಾರ್ಯಕ್ರಮಕ್ಕೆ ಶಾಲಾ ಮಕ್ಕಳನ್ನು ಕರೆತರುವಂತೆ, ರಂಗಮಂದಿರ ಮತ್ತು ಟೌನ್ ಹಾಲ್ ಬಳಿ ಸ್ವಚ್ಛತೆ ನಿರ್ವಹಣೆ ಕೈಗೊಳ್ಳುವಂತೆ ಹಾಗೂ ಸೂಕ್ತ ಪೊಲೀಸ್ ಬಂದೋಬಸ್ತ್ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು. ಟೌನ್ ಹಾಲ್ ಬಳಿ ಗಾಂಧಿ ಪ್ರತಿಮೆಗೆ ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಮಾಡುವಂತೆ ಪಾಲಿಕೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು. ಅಲ್ಲಸೆ ಕಾರ್ಯಕ್ರಮ ಸಂಪೂರ್ಣ ಉಸ್ತುವಾರಿ ನೋಡಿಕೊಳ್ಳಲು ಕನ್ನಡ ಮತ್ತು ಸಂಸ್ಲೃತಿ ಇಲಾಖೆ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಯಿತು.

*ಶ್ರಮದಾನ ಆಯೋಜನೆಗೆ ಸೂಚನೆ:*

ಗಾಂಧಿ ಜಯಂತಿ ಅಂಗವಾಗಿ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಲ್ಲಿ ಅ.1 ರಂದು ಶ್ರಮದಾನ, ಸ್ವಚ್ಛತಾ ಕಾರ್ಯಕ್ರಮ ಆಯೋಜಿಸುವಂತೆ ಸಭೆಯಲ್ಲಿದ್ದ ಎಲ್ಲಾ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿಗಳು ಸೂಚಿಸಿದರು.

ಸಭೆಯಲ್ಲಿ ಎ.ಸಿ.ಪಿ ಭೂತೆಗೌಡ ವಿ.ಎಸ್., ಜಿಲ್ಲಾ ಪಂಚಾಯತ್ ಪಿ.ಡಿ. ಜಗದೇವಪ್ಪ, ಕಲಬುರಗಿ ಮಹಾನಗರ ಪಾಲಿಕೆಯ ಇ.ಇ. ಕಾರ್ಯನಿರ್ವಾಹಕ ಅಭಿಯಂತ ಶಿವಣಗೌಡ ಪಾಟೀಲ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ, ಗುಲಬರ್ಗಾ ವಿ.ವಿ. ವಿದ್ಯಾರ್ಥಿ ಕಲ್ಯಾಣಾಧಿಕಾರಿ ಪ್ರೊ.ಕೆ‌.ಲಿಂಗಪ್ಪ, ಕಾಲೇಜು ಶಿಕ್ಷಣ ಇಲಾಖೆಯ ಡಾ.ಸಂಗಪ್ಪ ವಿ. ನಿಷ್ಟಿ, ಆಹಾರ ಇಲಾಖೆಯ ಡಿ.ಬಿ.ಪಾಟೀಲ, ತೋಟಗಾರಿಕೆ ಇಲಾಖೆಯ ಶಿವಕುಮಾರ, ಪದವಿ ಪೂರ್ವ ಶಿಕ್ಷಣ ಇಲಾಖೆಯ ವಿವೇಕಾನಂದ, ಶಾಲಾ ಶಿಕ್ಷಣ ಇಲಾಖೆಯ ಕರಬಸಯ್ಯ ಮಠ, ಖಾದಿ ಗ್ರಾಮೋದ್ಯೋಗ ಮಂಡಳಿಯ ಗುರುರಾಜ, ಜೆಸ್ಕಾಂ ಎ.ಇ.ಇ. ಸಾಯಬಣ್ಣಾ ಕಾಳೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾ ಸಹಾಯಕ ಡಿ.ಕೆ.ರಾಜರತ್ನ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here