ಬಿಸಿ ಬಿಸಿ ಸುದ್ದಿ

ಕಾರಿಡಾರ್ ಸುತ್ತಾಡಿ ಕಸಗೂಡಿಸಿದ ಕಲಬುರಗಿ ಡಿ.ಸಿ ಬಿ.ಫೌಜಿಯಾ ತರನ್ನುಮ್

ಕಲಬುರಗಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 154ನೇ ಜಯಂತಿ ಹಿನ್ನೆಲೆಯಲ್ಲಿ ರವಿವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶ್ರಮದಾನ ನಡೆಯಿತು. ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಕೈಯಲ್ಲಿ ಪೊರಕೆ ಹಿಡಿದು ಕಾರಿಡಾರ್ ಸುತ್ತಾಡಿ ಕಸಗೂಡಿಸಿದರು.

ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಹಯೋಗದೊಂದಿಗೆ ನಡೆದ‌ ಸ್ವಚ್ಚತಾ ಕಾರ್ಯಕ್ರಮಕ್ಕೆ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಸೇರಿದಂತೆ ಅನೇಕ‌ ಜಿಲ್ಲಾ ಮಟ್ಟದ ಅಧಿಕಾರಿಗಳು ಡಿ.ಸಿ.ಗೆ ಸಾತ್ ನೀಡಿದರು. ಸುಮಾರು ಎರಡು ಗಂಟೆಗಳ ಕಾಲ ಶ್ರಮದಾನ ನಡೆಯಿತು. ಕಸಗೂಡಿಸದಲ್ಲದೆ ಅದನ್ನು ಬುಟ್ಟಿಯಲ್ಲಿ ತುಂಬಿ ಪಾಲಿಕೆ ಸ್ವಚ್ಛತಾ ವಾಹಿನಿಗೆ ಹಾಕಲಾಯಿತು.

ಕಚೇರಿ ಹೊರಾಂಗಣ, ಒಳಾಂಗಣ, ನೆಲ ಮಹಡಿ, ಮೊದಲನೇ ಮಹಡಿ, ತಮ್ಮ‌ ಕೊಠಡಿ ಸಭಾಂಗಣ ಹೀಗೆ ಎಲ್ಲಡೆ ಡಿ.ಸಿ.ಅವರು ಅಧಿಕಾರಿ, ಸಿಬ್ಬಂದಿ ಜೊತೆಗೂಡಿ ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾದರು. ಆಯಾ ಇಲಾಖೆಯವರು ತಮ್ಮ‌ ಕಚೇರಿ ಆವರಣ ಸ್ವಚ್ಚತೆ ಕಾಪಾಡಿಕೊಳ್ಳುವಂತೆ ಇದೇ ಸಂದರ್ಭದಲ್ಲಿ ಅವರು ಕರೆ ನೀಡಿದರು. ಮೇಲಿನ ಮಹಡಿಯವರು ಕೆಳಗಡೆ ಕಸ ಬಿಸಾಕಿದಲ್ಲಿ ಅಂತವರಿಗೆ ದಂಡ ವಿಧಿಸಿ, ಸಾಧ್ಯವಾದರೆ ಸಿ.ಸಿ.ಟಿ.ವಿ ಅಳವಡಿಸಿ ಎಂದರು.

ಮಿನಿ ವಿಧಾನಸೌಧ ಆವರಣದಲ್ಲಿನ ಆಹಾರ ಇಲಾಖೆ, ವಾರ್ತಾ ಇಲಾಖೆ, ಖಜಾನೆ, ಡಿ.ಯು.ಡಿ.ಸಿ ವಯಸ್ಕರ ಶಿಕ್ಷಣ ಸೇರಿದಂತೆ ಅನೇಕ ಇಲಾಖೆ ಅಧಿಕಾರಿಗಳು ತಮ್ಮ‌ ಕಚೇರಿ ಸ್ವಚ್ಚಗೊಳಿಸಿಕೊಂಡರು.

*ನೆಲ ಹಾಸು ತೊಳೆದರು:*

ಮಿನಿ ವಿಧಾನಸೌಧ ಆವರಣದಲ್ಲಿರುವ ಆಹಾರ ಇಲಾಖೆಯ ಅಧಿಕಾರಿ-ಸಿಬ್ಬಂದಿ ವರ್ಗದವರು ಸಹ ತಮ್ಮ ಕಚೇರಿ ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾದರು. ಕಚೇರಿಯ ಮ್ಯಾನೇಜರ್ ಅಲ್ಲಾಭಕ್ಷ, ಗೋಪಾಲ ಅವರು ನೀರು ಹಾಕಿ‌ ನೆಲ ಹಾಸು ತೊಳೆದರು. ಗುಟಕಾ, ಪಾನ್ ತಿಂದು ಉಗುಳಿದ ಕಲೆಗಳನ್ನು ನೀರು ಹಾಕಿ ಸ್ವಚ್ಛಗೊಳಿಸಲಾಯಿತು.

ವಿಶೇಷ‌ ಭೂಸ್ವಾಧೀನಾಧಿಕಾರಿ ಡಿ.ಎಂ‌.ಪಾಣಿ, ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ಹಕ್ಕುಗಳ ಇಲಾಖೆಯ ಉಪನಿರ್ದೇಶಕ ಶಾಂತಗೌಡ ವಿ. ಗುಣಕಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಿವಶರಣಪ್ಪ ಮೂಳೆಗಾಂವ, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಹೆಚ್.ಎಂ.ಹರನಾಳ, ಡಿ.ಸಿ. ಕಚೇರಿಯ ಸಾಮಾಜಿಕ‌ ಭದ್ರತಾ ವಿಭಾಗದ ಸಹಾಯಕ ನಿರ್ದೇಶಕ ಶಿವಶರಣಪ್ಪ ಧನ್ನಿ, ಚುನಾವಣಾ ತಹಶೀಲ್ದಾರ ಪಂಪಯ್ಯ, ಡಿ.ಯು.ಡಿ.ಸಿ ಎ.ಇ.ಇ. ಸೋಮು ರಾಠೋಡ, ಸೇರಿದಂತೆ ಜಿಲ್ಲಾಡಳಿತ‌ ಭವನದಲ್ಲಿರುವ ವಿವಿಧ ಇಲಾಖೆಯ ಸಿಬ್ಬಂದಿಗಳು, ಡಿ.ಸಿ.ಕಚೇರಿ ಸಿಬ್ಬಂದಿಗಳು ಸ್ವಚ್ಛತಾ ಕಾರ್ಯದಲ್ಲಿ ಕೈಜೋಡಿಸಿದ್ದರು.

ಕಲಬುರಗಿ ಮಹಾನಗರ ಪಾಲಿಕೆಯ ಆರೋಗ್ಯ ನಿರೀಕ್ಷಕ ಬಸವರಾಜ ಕಲಾಲ್, ಅರುಣ ಕುಮಾರ, ರಾಜಕುಮಾರ, ಮೇಲ್ವಿಚಾರಕ ಪ್ರಶಾಂತ ಮತ್ತು ಪಾಲಿಕೆ ಪೌರಕಾರ್ಮಿಕರು ಇದ್ದರು.

emedialine

Recent Posts

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 hour ago

ಬಡವರಿಗೆ ಹಣ್ಣು-ಹಂಪಲು ವಿತರಣೆ

ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ  ಜೈ ಕನ್ನಡಿಗರ…

1 hour ago

ಕಾರಾಗೃಹದ ಬಂದಿಗಳಿಗೆ ಮನಃ ಪರಿವರ್ತನೆಗೊಳ್ಳುವ ಚಲನ ಚಿತ್ರ ಸ್ಕ್ರೀನ್

ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…

1 hour ago

ಕನ್ನಡ ದೀಪೋತ್ಸವ: ವಿಜಯೀಭವ ಕೃತಿ ಜನಾರ್ಪಣೆ 24 ರಂದು

ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಯವರು ಮೂರು ವರ್ಷಗಳು ಪೂರೈಸಿರುವ…

1 hour ago

ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟದಿಂದ ವಿಭಾಗಿಯ ಮಟ್ಟಕ್ಕೆ ಆಯ್ಕೆ

ಕಲಬುರಗಿ: ವಿದ್ಯಾರ್ಥಿನಿಯರ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣ, ಶಿಕ್ಷಣವೆಂದರೆ ಕೇವಲ ಆನಲೈನ ಮಾಹಿತಿಯಲ್ಲ, ಪುಸ್ತಕದ ಜ್ಞಾನವೂ ಅಲ್ಲ, ವಿದ್ಯಾರ್ಥಿನಿಯರ ಬೌದ್ಧಿಕ, ಮಾನಸಿಕ,…

1 hour ago

ಅಭಿವೃದ್ಧಿ ಪರ ಚಿಂತನೆಯಳ್ಳ ಪ್ರಬುದ್ದ ರಾಜಕಾರಣಿ ಪ್ರಿಯಾಂಕ್ ಖರ್ಗೆ

ಶಹಾಬಾದ: ನಗರದ ಶಿವಯೋಗಿಸ್ವಾಮಿ ಪ್ರೌಢಶಾಲೆಯಲ್ಲಿ ಪ್ರಿಯಾಂಕ್ ಖರ್ಗೆ ಅಭಿಮಾನಿ ಬಳಗದ ವತಿಯಿಂದ ಶುಕ್ರವಾರ ಸಚಿವರಾದ ಪ್ರಿಯಾಂಕ್ ಖರ್ಗೆ ಅವರ ಜನ್ಮ…

1 hour ago