ಬಿಸಿ ಬಿಸಿ ಸುದ್ದಿ

ಸಚಿವ ತಂಗಡಿಗೆ ಅಭಿನಂದನೆ ಸಲ್ಲಿಸಿದ ಕೊನೇಕ

ಕಲಬುರಗಿ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿ ಈ ಬಾರಿ ಪ್ರಕಾಶಕರನ್ನೂ ಪರಿಗಣಿಸಿದ್ದಕ್ಕೆ ಕಲಬುರಗಿಯ ಶ್ರೀ ಸಿದ್ಧಲಿಂಗೇಶ್ವರ ಪ್ರಕಾಶನದ ರೂವಾರಿ ಬಸವರಾಜ ಕೊನೇಕ ಅವರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ ತಂಗಡಗಿ ಅವರನ್ನು ಅಭಿನಂದಿಸಿದ್ದಾರೆ.

ಸಚಿವ ತಂಗಡಗಿ ಅವರು, ಕರ್ನಾಟಕ ನಾಮಕರಣಕ್ಕೆ ಐವತ್ತು ವರ್ಷಗಳು ತುಂಬಿದ ಸುವರ್ಣ ಸಂಭ್ರಮಕ್ಕಾಗಿ ರಾಜ್ಯದ ನಾಲ್ಕೂ ವಿಭಾಗಗಳಲ್ಲಿ ಸಾಹಿತಿ, ಕಲಾವಿದರ ಸಭೆ ಆಯೋಜಿಸಿ, ಸಲಹೆಗಳನ್ನು ಸ್ವೀಕರಿಸಿದ್ದರು.

ಅದರಂತೆ ಕಲಬುರಗಿಯಲ್ಲಿ ಜರುಗಿದ ಸಭೆಯಲ್ಲಿ ರಾಜ್ಯೋತ್ಸವ ಪ್ರಶಸ್ತಿಗೆ ಪುಸ್ತಕ ಪ್ರಕಾಶಕರನ್ನೂ ಪರಿಗಣಿಸಬೇಕು ಎಂದು ಬಸವರಾಜ ಕೊನೇಕ ಒತ್ತಾಯಿಸಿದ್ದರು. ಅದಕ್ಕೆ ಸ್ಪಂದಿಸಿದ ಸಚಿವರು, ಬಳ್ಳಾರಿಯ ಲೋಹಿಯಾ ಪ್ರಕಾಶನದ ಚೆನ್ನ ಬಸವಣ್ಣನವರನ್ನು ಆಯ್ಕೆ ಸಮಿತಿ ಸದಸ್ಯರನ್ನಾಗಿಸಿದ್ದು ಸಂತೋಷ ತಂದಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕದ ಸಾಂಸ್ಕೃತಿಕ ಇತಿಹಾಸದಲ್ಲಿ ಸಚಿವರೊಬ್ಬರು ರಾಜ್ಯದ ಸಾಹಿತಿ ಕಲಾವಿದರ ಸಭೆ ಕರೆದು ಸಲಹೆಗಳನ್ನು ಸ್ವೀಕರಿಸಿದ್ದು ಇದೇ ಮೊದಲು. ಇದಕ್ಕೆ ಕಾರಣರಾದ ಸಚಿವ ತಂಗಡಗಿ ಯವರ ಈ ನಡೆ ಮಾದರಿಯಾಗಿದೆ ಎಂದು ಕೊನೇಕ ತಿಳಿಸಿದ್ದಾರೆ.

emedialine

Recent Posts

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

17 mins ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

11 hours ago

ಬಡವರಿಗೆ ಹಣ್ಣು-ಹಂಪಲು ವಿತರಣೆ

ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ  ಜೈ ಕನ್ನಡಿಗರ…

11 hours ago

ಕಾರಾಗೃಹದ ಬಂದಿಗಳಿಗೆ ಮನಃ ಪರಿವರ್ತನೆಗೊಳ್ಳುವ ಚಲನ ಚಿತ್ರ ಸ್ಕ್ರೀನ್

ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…

11 hours ago

ಕನ್ನಡ ದೀಪೋತ್ಸವ: ವಿಜಯೀಭವ ಕೃತಿ ಜನಾರ್ಪಣೆ 24 ರಂದು

ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಯವರು ಮೂರು ವರ್ಷಗಳು ಪೂರೈಸಿರುವ…

11 hours ago

ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟದಿಂದ ವಿಭಾಗಿಯ ಮಟ್ಟಕ್ಕೆ ಆಯ್ಕೆ

ಕಲಬುರಗಿ: ವಿದ್ಯಾರ್ಥಿನಿಯರ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣ, ಶಿಕ್ಷಣವೆಂದರೆ ಕೇವಲ ಆನಲೈನ ಮಾಹಿತಿಯಲ್ಲ, ಪುಸ್ತಕದ ಜ್ಞಾನವೂ ಅಲ್ಲ, ವಿದ್ಯಾರ್ಥಿನಿಯರ ಬೌದ್ಧಿಕ, ಮಾನಸಿಕ,…

11 hours ago