ವಾಡಿ: ಪಟ್ಟಣದ ಬಿಜೆಪಿ ಶಕ್ತಿ ಕೇಂದ್ರದ ಕಾರ್ಯಾಲಯದಲ್ಲಿ ಅಗಲಿದ ಬಿಜೆಪಿ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಅರುಣ ಜೇಟ್ಲಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಜೇಟ್ಲಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಮಾಜಿ ಶಾಸಕ ವಾಲ್ಮೀಕಿ ನಾಯಕ, ಸ್ವಾವಲಂಬಿ ಭಾರತದ ಕನಸು ಕಂಡಿದ್ದ ಅರೂಣ ಜೇಟ್ಲಿ ರಾಷ್ಟ್ರಾಭಿಮಾನಿಯಾಗಿದ್ದರು. ಕೇಂದ್ರ ಹಣಕಾಸು ಹಾಗೂ ರಕ್ಷಣಾ ಸಚಿವರಾಗಿ ದೇಶದ ಆರ್ಥಿಕ ಸಮಸ್ಯೆಗಳನ್ನು ಸಮರ್ಥವಾಗಿ ನಿವಾರಿಸಿದ್ದಾರೆ. ನೋಟ್ ಬ್ಯಾನ್ ನಂತರ ಉಂಟಾದ ಹಣದುಬ್ಬರವನ್ನು ಸರಿಪಡಿಸುವಲ್ಲಿ ಶ್ರಮಿಸಿದ್ದಾರೆ. ಅವರ ಅಗಲಿಕೆಯಿಂದ ದೇಶದ ರಾಜಕಾರಣಕ್ಕೆ ತುಂಬಲಾರದ ನಷ್ಟ ಉಚಿಟಾಗಿದೆ ಎಂದು ವಿವರಿಸಿದರು.
ಶಕ್ತಿಕೇಂದ್ರದ ಅಧ್ಯಕ್ಷ ಬಸವರಾಜ ಪಂಚಾಳ, ಪ್ರಧಾನ ಕಾರ್ಯದರ್ಶಿ ವೀರಣ್ಣ ಯಾರಿ, ಎಸ್.ಸಿ ಮೋರ್ಚಾ ತಾಲೂಕು ಅಧ್ಯಕ್ಷ ರಾಜು ಮುಕ್ಕಣ್ಣ ಮಾತನಾಡಿದರು. ಪುರಸಭೆ ಸದಸ್ಯ ಭೀಮಶಾ ಜಿರೊಳ್ಳಿ, ಮಹಿಳಾ ಮೋರ್ಚಾ ಜಿಲ್ಲಾ ಉಪಾಧ್ಯಕ್ಷೆ ನಿವೇದಿತಾ ದಹಿಹಂಡೆ, ಮುಖಂಡರಾದ ಯಂಕಮ್ಮ ಗೌಡಗಾಂವ, ಅನ್ನಪೂರ್ಣ ದೊಡ್ಡಮನಿ, ರಾಮಚಂದ್ರ ರೆಡ್ಡಿ, ಗಿರಿಮಲ್ಲಪ್ಪ ಕಟ್ಟಿಮನಿ, ಕಿಶನ ಜಾಧವ, ಸುಭಾಷ ವರ್ಮಾ, ಅಂಬಾದಾಸ ಜಾಧವ, ಶಿವಶಂಕರ ಕಾಶೆಟ್ಟಿ, ಕುಮಾರ ಚವ್ಹಾಣ, ರಾಹುಲ ಸಿಂಧಗಿ, ರಾಜಶೇಖರ ಇಂಡಿ, ಈರಣ್ಣ ಚಂದನಕೇರಿ, ಮೌನೇಶ ಕದ್ದರಗಿ ಪಾಲ್ಗೊಂಡಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…