ಬಿಸಿ ಬಿಸಿ ಸುದ್ದಿ

ಭಂಕೂರ ಗ್ರಾಮ ಪಂಚಾಯತಿಗೆ ಒಲಿದ ಗಾಂಧಿ ಗ್ರಾಮದ ಪುರಸ್ಕಾರ

ಶಹಾಬಾದ: ಉದ್ಯೋಗ ಖಾತ್ರಿ ಯೋಜನೆ ಅನುμÁ್ಠನ, ತೆರಿಗೆ ವಸೂಲಿ,ಬೀದಿ ದೀಪಗಳ ನಿರ್ವಹಣೆ ಸೇರಿದಂತೆ ಗ್ರಾಮದಲ್ಲಿ ಸ್ವಚ್ಛತೆಯನ್ನು ಗಮನಿಸಿ ಪ್ರಸಕ್ತ ವರ್ಷ ತಾಲೂಕಿನ ಭಂಕೂರ ಗ್ರಾಪಂಗೆ 2022-23ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾದ ಹಿನ್ನೆಲೆಯಲ್ಲಿ ಬೆಂಗಳೂರಿನ ಬ್ಯಾಂಕ್ ವೈಟ್ ಹಾಲ್‍ನಲ್ಲಿ ಸರ್ಕಾರದ ವತಿಯಿಂದ ಹಮ್ಮಿಕೊಂಡ ಗಾಂಧಿ ಗ್ರಾಮ ಪುರಸ್ಕಾರ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತರಾಜ್ ಸಚಿವ ಪ್ರಿಯಾಂಕ ಖರ್ಗೆ ಅವರು ಭಂಕೂರ ಗ್ರಾಮ ಪಂಚಾಯಿತಿ ಅಧ್ಯಕ್ಷ ಶರಣಬಸಪ್ಪ ಧನ್ನಾ ಅವರಿಗೆ ಗಾಂಧಿ ಗ್ರಾಮ ಪುರಸ್ಕಾರ ಹಾಗೂ ಲ್ಯಾಪ್ ಟಾಪ್ ಮತ್ತು ಒಂದು ಮೊಬೈಲ್ ಹಾಗೂ 5ಲಕ್ಷ ರೂ. ನೀಡಿ ಗೌರವಿಸಿದರು.

ಗ್ರಾಮ ಪಂಚಾಯತಿಗಳು ಸ್ಥಳೀಯ ಮಟ್ಟದಲ್ಲಿ ಸ್ವಯಂ ಆಡಳಿತ ಸಂಸ್ಥೆಗಳಾಗಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕೆಂಬ ಸದುದ್ದೇಶದಿಂದ ರಾಜ್ಯದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಗ್ರಾಪಂಗಳನ್ನು ಪೆÇ್ರೀತ್ಸಾಹಿಸುವ ಉದ್ದೇಶದಿಂದ ಕಳೆದ 2013-14ನೇ ಸಾಲಿನಿಂದ ಪ್ರತಿ ತಾಲೂಕಿಗೆ ಒಂದರಂತೆ ಗ್ರಾಪಂಯನ್ನು ಗಾಂಧಿ ಪುರಸ್ಕಾರಕ್ಕೆ ಆಯ್ಕೆ ಮಾಡಿಕೊಂಡು ಬರಲಾಗುತ್ತಿದೆ.ಇದರಲ್ಲಿ ಪ್ರಸಕ್ತ ವರ್ಷ ತಾಲೂಕಿನ ಭಂಕೂರ ಗ್ರಾಪಂಗೆ 2022-23ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿತ್ತು.

ತಾಲೂಕಿಗೆ ಮರತೂರ,ತೊನಸನಹಳ್ಳಿ(ಎಸ್)ಹೊನಗುಂಟಾ ಹಾಗೂ ಭಂಕೂರ ಗ್ರಾಪಂಗಳು ಒಳಗೊಂಡಿವೆ. ಸರಕಾರ ನಿಗದಿಪಡಿಸಿದ ಗುರಿಯೊಂದಿಗೆ ಉದ್ಯೋಗ ಖಾತ್ರಿ ಕಾಮಗಾರಿಯಲ್ಲಿ ಅತ್ಯುತ್ತಮ ಪ್ರಗತಿ ಸಾಧಿಸಿದ ಭಂಕೂರ ಗ್ರಾಪಂಗೆ ಸಲ್ಲುತ್ತದೆ. ಉದ್ಯೋಗ ಖಾತ್ರಿ ಯೋಜನೆ ಅನುμÁ್ಠನ, ತೆರಿಗೆ ವಸೂಲಿ, ಚೆಕ್ ಡ್ಯಾಮ್ ಮತ್ತು ಕೃಷಿ ಹೊಂಡ ನಿರ್ಮಾಣ, ಕುಡಿಯುವ ನೀರಿನ ಪೂರೈಕೆ, ಬೀದಿ ದೀಪಗಳ ನಿರ್ವಹಣೆ, ಕೊಳವೆ ಬಾವಿ ಮರುಪೂರಣ ವ್ಯವಸ್ಥೆ, ಪ್ಲಾಸ್ಟಿಕ್ ನಿಷೇಧದ ಕುರಿತು ಜಾಗೃತಿ ಹೀಗೆ ಹತ್ತು ಹಲವು ಕಾಮಗಾರಿಗಳಲ್ಲಿ ಗ್ರಾಪಂಗಳ ಸಾಧನೆ ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ.

ಲ್ಯಾಪ್ ಟಾಪ್ ಮತ್ತು ಒಂದು ಮೊಬೈಲ್‍ನ್ನು ಗ್ರಂಥಾಲಯಕ್ಕೆ ನೀಡಲಾಗಿದ್ದು, ಗಾಂಧಿ ಗ್ರಾಮ ಪುರಸ್ಕಾರ ಹಾಗೂ 5ಲಕ್ಷ ರೂ. ಪಂಚಾಯತಿ ನೀಡಲಾಗಿದೆ.

ಪಂಚಾಯಿತಿ ಗಾಂಧಿ ಗ್ರಾಮ ಪುರಸ್ಕಾರ ನೀಡಿರುವುದು ಸಂತಸ ತಂದಿದೆ. ಇನ್ನು ಮುಂದೆಯಾದರೂ ಎಲ್ಲರ ಸಹಕಾರ ತತ್ವದಡಿ ಕೆಲಸ ಮಾಡಲಾಗುತ್ತದೆ.ಅಲ್ಲದೇ ಭಂಕೂರ ವೃತ್ತದಿಂದ ಗ್ರಾಮದವರೆಗಿನ ರಸ್ತೆ ಮಾಡುವುದು ಮೊದಲನೇ ಆದ್ಯತೆ ನೀಡಿ ಸುಗಮ, ಸಂಚಾರಕ್ಕೆ ಅನುಕೂಲ ಮಾಡಿಕೊಡಲು ಮುಂದಾಗಿದ್ದೆನೆ.ಈ ಪ್ರಶಸ್ತಿ ಇನ್ನಷ್ಟು ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಪ್ರೇರಣೆ ಆಗಿದೆ- -ಶರಣಬಸಪ್ಪ ಧನ್ನಾ ಅಧ್ಯಕ್ಷರು ಗ್ರಾಪಂ ಭಂಕೂರ.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

8 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

18 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

18 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

18 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago