ಚಿತ್ತಾಪುರ: ತಾಲೂಕಿನ ಕಲಗುರ್ತಿ ಗ್ರಾಮದ ಕೋಲಿ ಕಬ್ಬಲಿಗ ಸಮಾಜದ ಯುವಕ ದೇವಾನಂದ ಕೊರಬಾ ಸಾವಿಗೆ ಕಾರಣರಾದ ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪುಣ್ಯಕೋಟಿ ಆಶ್ರಮದ ಪೀಠಾಧಿಪತಿ ಡಾ.ವರಲಿಂಗೇಶ್ವರ ಮಹಾಸ್ವಾಮಿಗಳು ಒತ್ತಾಯಿಸಿದ್ದಾರೆ.
ಕಲಗುರ್ತಿ ಗ್ರಾಮದ ಮೃತ ದೇವಾನಂದ ಮನೆಗೆ ಮಂಗಳವಾರ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿ ದೈರ್ಯ ತುಂಬಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮದ ರಾಜಕೀಯ ಮುಖಂಡನ ಹೆದರಿಗೆ ಮತ್ತು ಬೇದರಿಕೆಗೆ ಹಾಗೂ ಪೊಲೀಸರ ಕಿರುಕುಳದಿಂದ ಬೇಸತ್ತು ದೇವಾನಂದ ಮಾನಸಿಕವಾಗಿ ನೋದು ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡು ಮೂರು ತಿಂಗಳು ಗತಿಸಿದೆ ಈ ಕುರಿತು ಮಾಡಬೂಳ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದ್ದರೂ ಸಹ ಇಲ್ಲಿವರೆಗೆ ಈ ಪ್ರಕರಣಕ್ಕೆ ಸಂಬAಧಿಸಿದ್ದAತೆ ಇಲ್ಲಿವರೆಗೆ ಪೊಲೀಸರು ಯಾರೊಬ್ಬರನ್ನು ಬಂಧಿಸದೇ ಇರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದೇವಾನಂದ ಸಾವಿಗೆ ಕಾರಣರಾದ ರಾಜಕೀಯ ಮುಖಂಡರು ಗ್ರಾಮದಲ್ಲಿ ಅಷ್ಟೇ ಅಲ್ಲ ಜಿಲ್ಲೆಯಲ್ಲಿ ಬಹಿರಂಗವಾಗಿ ಓಡಾಡುತ್ತಿದ್ದಾರೆ ಆದರೂ ಪೊಲೀಸರು ಅವರನ್ನು ಬಂಧಿಸುತ್ತಿಲ್ಲ, ಪೊಲೀಸರು ಎಲ್ಲರಿಗೂ ಸಮಾನವಾಗಿ ನೋಡಿಕೊಂಡು ಹೋಗಬೇಕು ಅದನ್ನು ಬಿಟ್ಟು ಯಾರೋ ರಾಜಕೀಯ ಮುಖಂಡರ ಕೈಗೊಂಬೆಯಾಗಿ ಕೆಲಸ ಮಾಡಬಾರದು ಎಂದು ಕಿವಿಮಾತು ಹೇಳಿದರು.
ದೇವಾನಂದ ಸಾವಿಗೆ ನ್ಯಾಯ ಒದಗಿಸಬೇಕು ಮತ್ತು ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಹಾಗೂ ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳನ್ನು ಅಮಾನತ್ತು ಮಾಡಬೇಕು ಎಂದು ಒತ್ತಾಯಿಸಿ ಈಗಾಗಲೇ ಕೋಲಿ ಸಮಾಜದ ನೇತೃತ್ವದಲ್ಲಿ ಜಿಲ್ಲಾ ಮಟ್ಟದಲ್ಲಿ ನಿರಂತರ ಹೋರಾಟ ನಡೆಯುತ್ತಿದೆ, ಬರುವ ದಿನಗಳಲ್ಲಿ ರಾಜ್ಯ ಮಟ್ಟದಲ್ಲಿ ಹೋರಾಟ ಮಾಡಲಾಗುವುದು ದೇವಾನಂದ ಸಾವಿಗೆ ನ್ಯಾಯ ಸಿಗುವರೆಗೂ ಹೋರಾಟ ನಡೆಯಲಿದೆ ಎಂದರು. ಈ ಹೋರಾಟಕ್ಕೆ ಕೋಲಿ ಸಮಾಜದವರು, ಸ್ವಾಮಿಜಿಗಳು ಸೇರಿದಂತೆ ಹಿಂದುಳಿದ ಒಕ್ಕೂಟದ ಎಲ್ಲ ಮಠಾಧೀಶರು ಬೆಂಬಲ ನೀಡಲಿದ್ದಾರೆ ಎಂದು ಮಾಹಿತಿ ನೀಡಿದರು.
ಈ ಪ್ರಕರಣವನ್ನು ಪೊಲೀಸ್ ಹಿರಿಯ ಅಧಿಕಾರಿಗಳು ಕೂಲಂಕುಶವಾಗಿ ತನಿಖೆ ನಡೆಸಿ ದೇವಾನಂದ ಕುಟುಂಬಸ್ಥರಿಗೆ ನ್ಯಾಯ ಒದಗಿಸಿ ಆರೋಪಿಗಳಿಗೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ರಾಮಚಂದ್ರ ಕೊರಬಾ, ಕಿರಣಕುಮಾರ ಕೊರಬಾ, ಕಾಜಪ್ಪ, ಇದ್ದರು.