ಕಲಬುರಗಿ: -ಕಲ್ಯಾಣ ಕರ್ಣಾಟಕ ಪ್ರದೇಶಾವೃದ್ಧಿ ಮಂಡಳಿಗೆ ಸರ್ಕಾರ ೫೦೦೦ ಕೋಟಿ ಅನುದಾನ ನೀಡುತ್ತಿದ್ದು, ಅದರಲ್ಲಿ ೧೦೦೦ ಕೋಟಿ ಶೈಕ್ಷಣಿಕ ಅಭಿವೃದ್ಧಿಗೆ ಮೀಸಲಿಟ್ಟಿದೆ ಎಂದು ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಹೇಳಿದರು.
ಕಲಬುರಗಿ ಸಾಂಸ್ಕೃತಿಕ ಪ್ರತಿಷ್ಠಾನ ನಗರದ ಸೇಂಟ್ ಮೇರಿ ಸಭಾ ಭವನದಲ್ಲಿ ಬುಧವಾರ ಶಿಕ್ಷಕರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಸಂಗೀತ ಸಂಭ್ರಮ ಹಾಗೂ ಜಿಲ್ಲಾ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಡಾ.ಸರ್ವಪಲ್ಲಿ ರಾಧಾ ಕೃಷ್ಣನ್, ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಅವರು ಶಿಕ್ಷಕರಾಗಿ ಸೇವೆ ಸಲ್ಲಿಸಿ ದೇಶದ ರಾಷ್ಟ್ರಪತಿಯಂತಹ ಉನ್ನತ ಸ್ಥಾನವನ್ನು ಅಲಂಕರಿಸಿದ್ದಾರೆ. ಜಿಲ್ಲೆಯ ಶಿಕ್ಷಕ-ಶಿಕ್ಷಯಿಯರು ಸಹ ಇಂತಹದೊಂದು ಸ್ಥಾನವನ್ನು ಅಲಂಕರಿಸುವಂತಾಗಲಿ ಎಂದರು.
ಡಾ.ಬಿ.ಆರ್.ಅಂಬೇಡ್ಕರ್ ಅವರು ಶಿಕ್ಷಣಕ್ಕೆ ಹೆಚ್ಚಿನ ಒತ್ತನ್ನು ನೀಡಿದ್ದರು. ಶಿಕ್ಷಣದಿಂದ ಮಾತ್ರ ದೇಶದ ಅಭಿವೃದ್ಧಿಯಾಗಲು ಸಾಧ್ಯವಿದ್ದು, ದೇಶಕ್ಕೆ ಉತ್ತಮ ನಾಗರಿಕರನ್ನು ಒದಗಿಸುವ ಬಹುದೊಡ್ಡ ಜವಾಬ್ದಾರಿ ಶಿಕ್ಕಕರ ಮೇಲಿದೆ ಎಂದರು.
ಬಿ.ಹೆಚ್.ನಿರಗುಡಿ ಅವರ ಸಮಾಜಮುಖಿ ಕೆಲಸಗಳನ್ನು ಶ್ಲಾಘಿಸಿದ ಅವರು ಮುಂಬರು ದಿನಗಳಲ್ಲಿ ನಿರುಗುಡಿ ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಆಯ್ಕೆಯಾಗಲು ಎಲ್ಲರು ಶ್ರಮಿಸಬೇಕಾಗಿದೆ ಎಂದರು.
ಪ್ರಶಸ್ತಿ ಪ್ರದಾನ ಮಾಡಿದ ವಿಧಾನ ಪರಿಷತ್ ಮಾಜಿ ಸದಸ್ಯ ಅಮರನಾಥ ಪಾಟೀಲ, ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸೋಮಶೇಖರ್ ಗೋನಾಯಕ್ ಅವರು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಬಿಸಿಯೂಟ ನಿರ್ವಹಣೆ ಕೆಲಸದಿಂದ ಶಿಕ್ಷಕರ ಮೇಲೆ ಹೆಚ್ಚಿನ ಹೊರೆ ಬೀಳುತ್ತಿದ್ದು, ಇದರಿಂದ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಅಡ್ಡಿಯಾಗುತ್ತಿದೆ. ಇದನ್ನು ತಪ್ಪಿಸಲು ಸರ್ಕಾರ ಅಗತ್ಯವಾದ ಕ್ರಮ ಕೈಗೊಳ್ಳಬೇಕಿದೆ ಎಂದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಶಿವಶರಣಪ್ಪ ಮೂಳೆಗಾಂವ ಅವರು ಮಾತನಾಡಿ, ಎಸ್ಎಸ್ಎಲ್ಸಿ ಮತ್ತು ಪಿಯುಸಿ ಫಲಿತಾಂಶದಲ್ಲಿ ಜಿಲ್ಲೆ ಹಿಂದುಳಿಯುತ್ತಿದ್ದು ಇದನ್ನು ಸರಿಪಡಿಸುವ ನಿಟ್ಟಿನಲ್ಲಿ ಶಿಕ್ಷಕರು ಹೆಚ್ಚಿನ ಮುತುವರ್ಜಿ ವಹಿಸಬೇಕಾಗಿದೆ. ಜೊತೆಗೆ ಮಕ್ಕಳನ್ನು ಉತ್ತಮ ನಾಗರಿಕರನ್ನಾಗಿಸುವ ಬಹುದೊಡ್ಡ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದರು.
ಶ್ರೀನಿವಾಸ ಸರಡಗಿ ಸಂಸ್ಥಾನ ಹಿರೇಮಠದ ಡಾ.ರೇವಣಸಿದ್ಧ ಶಿವಾಚಾರ್ಯರು ಸಮಾರಂಭದ ಸಾನಿಧ್ಯವಹಿಸಿದ್ದರು.
ಫಾದರ್ ಜೋಸೆಫ್ ಪ್ರವೀಣ್, ನೀಲಕಂಠರಾವ ಮೂಲಗೆ ವೇದಿಕೆ ಮೇಲಿದ್ದರು. ಪ್ರತಿಷ್ಠಾನದ ಅಧ್ಯಕ್ಷ ಬಿ.ಎಚ್.ನಿರಗುಡಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಿರಣ್ ಪಾಟೀಲ, ಬಾಬು ಜಾಧವ್, ಚಾಮರಾಜ ದೊಡ್ಡಮನಿ, ಅಂಬರೀಶ್ ವಾಲಿ ಅವರು ಸಂಗೀತ ಸಂಭ್ರಮ ಕಾರ್ಯಕ್ರಮ ನಡೆಸಿಕೊಟ್ಟರು.
ಜಿಲ್ಲೆಯ ಪ್ರಾಥಮಿಕ, ಪ್ರೌಢ, ಪದವಿ ಪೂರ್ವ ಮತ್ತು ಪದವಿ ವಿಭಾಗದ ಹಲವಾರು ಜನ ಶಿಕ್ಷಕರಿಗೆ ಜಿಲ್ಲಾ ಮಟ್ಟದ ಶ್ರೇಷ್ಠ ಶಿಕ್ಷಕ ಪದವಿ ಪ್ರದಾನ ಮಾಡಲಾಯಿತು.
ಡಾ.ಶರಣಬಸಪ್ಪ ವಡ್ಡನಕೇರಿ, ಅಂಬಾರಾಯ ಕೋಣೆ, ಶರಣಗೌಡ ಪಾಳಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…