ಕಲಬುರಗಿ: ಸದ್ಯ ನಗರ-ಪಟ್ಟಣಗಳಲ್ಲಿ ಆರ್ಯುವೇದಿಕ್ ಮೆಡಿಕಲ್‍ಗಳ ಸಂಖ್ಯೆ ಹೆಚ್ಚುತ್ತಿದ್ದು, ಆಯುರ್ವೇದಿಕ್ ಚಿಕಿತ್ಸೆ ವ್ಯವಸ್ಥೆಗೆ ಹೆಚ್ಚು ಮಹತ್ವ ಸಿಗುತ್ತಿದ್ದು, ಸಾರ್ವಜನಿಕರಲ್ಲಿ ಇದರ ಅರಿವು ಬರಬೇಕು ಎಂದು ಖ್ಯಾತ ಪ್ರಸೂತಿ ಹಾಗೂ ಸ್ತ್ರೀರೋಗ ತಜ್ಞೆ ಡಾ. ಇಂದಿರಾ ಶಕ್ತಿ ಹೇಳಿದರು.
ಸೇಡಂ ಪಟ್ಟಣದ ಶ್ರೀ ಕೊತ್ತಲ ಬಸವೇಶ್ವರ ದೇವಸ್ಥಾನ ಆವರಣದಲ್ಲಿ ಹಿಂಗುಲಾಂಬಿಕಾ ಶಿಕ್ಷಣ ಸಂಸ್ಥೆ, ಹಿಂಗುಲಾಂಬಿಕಾ ಆಯುರ್ವೇದ ಮಹಾವಿದ್ಯಾಲಯ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಹಾಗೂ ಶ್ರೀ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ ಆಶ್ರಯದಲ್ಲಿ ನಡೆದ ಉಚಿತ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ತಲೆನೋವು, ನೆಗಡಿ, ಶೀತ ಮತ್ತಿತರರ ಸಾಮಾನ್ಯ ಕಾಯಿಲೆಗಳನ್ನು ಮನೆ ಮದ್ದುಗಳಿಂದ ಉಪಚರಿಸಿಕೊಳ್ಳಬಹುದು. ಆಯುರ್ವೇದಿಕ್ ಚಿಕಿತ್ಸಾ ಪದ್ಧತಿಯಿಂದ ಅಡ್ಡಪರಿಣಾಮ ಬೀರುವುದು ತೀರಾ ವಿರಳ. ಈ ನಿಟ್ಟಿನಲ್ಲಿ ಆರೋಗ್ಯ ತಪಾಸಣಾ ಶಿಬಿರಗಳ ಪ್ರಯೋಜನ ಪಡೆದು ಸುಸ್ಥಿರ ಆರೋಗ್ಯ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಶ್ರೀ ಕೊತ್ತಲ ಬಸವೇಶ್ವರ ದೇವಾಲಯದ ಪೂಜ್ಯ ಸದಾಶಿವ ಸ್ವಾಮೀಜಿ ಸಾನ್ನಿಧ್ಯವಹಿಸಿದ್ದರು. ಟ್ರಸ್ಟ್ ಅಧ್ಯಕ್ಷ ಸುರೇಶ ಬುಲಬಲೆ, ಕಾರ್ಯದರ್ಶಿ ನರೇಶ ತಾಂದಳೆ, ಹಿಂಗುಲಾಂಬಿಕಾ ಆಯುರ್ವೇದಿಕ್ ಕಾಲೇಜಿನ ಪ್ರಾಂಶುಪಾಲ ಡಾ. ಅಲ್ಲಮಪ್ರಭು ಗುಡ್ಡ, ಆಸ್ಪತ್ರೆಯ ಅಧೀಕ್ಷಕಿ ಡಾ. ವಿಜಯಲಕ್ಷ್ಮೀ ಹರನನೂರಕರ್, ಡಾ. ರಾಮರಾವ್ ದೇಶಮುಖ, ಅರುಣ ಗಡಾಳೆ, ಆಸ್ಪತ್ರೆಯ ಮುಖ್ಯಸ್ಥೆ ಡಾ. ವಿಜಯಲಕ್ಷ್ಮೀ ಮತ್ತಿತರರಿದ್ದರು. ಸುಮಾರು 200ಕ್ಕೂ ಹೆಚ್ಚು ಜನರಿಗೆ ಆರೋಗ್ಯ ತಪಾಸಣೆ ನಡೆಸಲಾಯಿತು.