ಕಲಬುರಗಿ : ನಿಮ್ಮದೇ ಮತಕ್ಷೇತ್ರದ ಕಲಗುರ್ತಿ ಗ್ರಾಮದಲ್ಲಿ ನಡೆದ ಕೋಲಿ ಸಮಾಜದ ಯುವಕ ದೇವಾನಂದ ರಾಮಚಂದ್ರಪ್ಪ ಕೊರಬಾ ಸಾವಿಗೆ ಕಾರಣದದಾದವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲು ಆಗದಿದ್ದರೆ ನೀವು ರಾಜೀನಾಮೆ ಕೊಟ್ಟು ಮನೆಗೆ ಹೋಗಿ ಎಂದು ರಾಷ್ಟ್ರೀಯ ಸಮಾಜ ಪಕ್ಷದ (ಆರ್.ಎಸ್.ಪಿ) ರಾಷ್ಟ್ರೀಯ ಉಪಾಧ್ಯಕ್ಷರಾದ ಶಿವಲಿಂಗಪ್ಪ ಕಿನ್ನೂರು ಗುಡುಗಿದರು.
ನಗರದ ದೇವಾನಂದ ಕೊರಬಾ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಕಚೇರಿಯ ಎದುರು ನಡೆಸುತ್ತಿರುವ 11ನೇ ದಿನದ ನಿರಂತರ ಧರಣಿ ಸತ್ಯಾಗ್ರಹವನ್ನು ಉದ್ದೇಶ ಅವರು ಮಾತನಾಡಿದರು.
ಪೆÇಲೀಸರ ಕಿರುಕುಳದಿಂದ, ಕಲಗುರ್ತಿ ಗ್ರಾಮದ ನಾಲ್ಕಾರು ಮುಖಂಡರ ಕಿರುಕುಳದಿಂದ ದೇವಾನಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಾವಿಗೀಡಾದ ಯುವಕನ ಕುಟುಂಬಕ್ಕೆ ಪರಿಹಾರ ನೀಡಬೇಕು. ಪ್ರಕರಣಕ್ಕೆ ಪುನರ್ ಹೇಳಿಕೆ ನೀಡಿದ್ದನ್ನು ದಾಖಲಿಸಬೇಕು. ಮೃತ ದೇವಾನಂದನ ಕುಟುಂಬ ಹಾಗೂ ಸಾಕ್ಷಿದಾರರ ಕುಟುಂಬದವರಿಗೆ ರಕ್ಷಣೆ ನೀಡಬೇಕು. ಆರೋಪಿಗಳನ್ನು ಶೀಘ್ರದಲ್ಲಿ ಬಂಧಿಸಬೇಕು. ಪೆÇೀಲಿಸರಿಂದ ಹೋರಾಟವನ್ನು ಹತ್ತಿಕ್ಕುವ ಕೆಲಸ ನಡೆಯುತ್ತಿದೆ. ಪ್ರಕರಣದ ತನಿಖೆ ಪಾರದರ್ಶಕತೆಯಿಂದ ನಡೆಯಬೇಕೆಂದು ರಾಷ್ಟ್ರೀಯ ಸಮಾಜ ಪಕ್ಷದ (ಆರ್.ಎಸ್.ಪಿ) ಒತ್ತಾಯಿಸಿದರು.
ಈ ಧರಣಿ ಸತ್ಯಾಗ್ರದಲ್ಲಿ ರಾಷ್ಟ್ರೀಯ ಸಮಾಜ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಶರಣಬಸಪ್ಪ ದೊಡ್ಡಮನಿ ,ಎಸ್.ಎ.ಪೂಜಾರಿ, ಜಿಲ್ಲಾಧ್ಯಕ್ಷರಾದ ದೇವೇಂದ್ರಪ್ಪ ಕ್ಯಾಶಪಳ್ಳಿ, ಭೀಮಣ್ಣ ಕಟ್ಟಿಮನಿ, ಶ್ರೀಮಂತ ಮಾವನೂರ, ಮಹಾಂತಪ್ಪ ಜೇವರ್ಗಿ ಸೇರಿದಂತೆ ಇನ್ನಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…