ಕಲಬುರಗಿ: ಕೋಮುವಾದ ಅಳಿಸಿ ಕರ್ನಾಟಕಕೇಂದ್ರೀಯ ವಿಶ್ವವಿದ್ಯಾಲಯ ಉಳಿಸಿ ಆಂದೋಲನ ಚಾಲನಾ ಸಮಿತಿ ಅ.11ರಂದು ನಡೆಯಲಿರುವ ಸಿಯುಕೆ ಮುತ್ತಿಗೆ ಹಾಗೂ ಬೃಹತ್ ಜಾಥಾಗೆ ಕರ್ನಾಟಕ ಹಿಂದುಳಿದ ಜಾತಿಗಳ ಒಕ್ಕೂಟ ಬೆಂಬಲ ನೀಡಲಿದೆ ಎಂದು ಜಿಲ್ಲಾಧ್ಯಕ್ಷ ಮಹಾಂತೇಶ ಕೌಲಗಿ ಹೇಳಿದರು.
ಅ.11ಕ್ಕೆ ಕಡಗಂಚಿಯಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಮೈದಾನದಿಂದಜಾಥಾ ನಡೆಯಲಿದೆ. ಈ ಜಾಥಾದಲ್ಲಿಜಿಲ್ಲೆಯ ವಿವಿಧ ಸಂಘಟನೆಗಳು ಪಾಲ್ಗೊಳ್ಳಲಿವೆ. ಅದರಂತೆ ನಮ್ಮ ಸಂಘಟನೆ ಮುಖಂಡರು ಪಾಲ್ಗೊಳ್ಳಲಿದ್ದೇವೆ ಎಂದುಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕರ್ನಾಟಕದ ಏಕೈಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿಕೋಮುವಾದದಖಣಿಆಗುತ್ತಿದೆ.ಅಲ್ಲಿನ ವಿದ್ಯಾರ್ಥಿಗಳಲ್ಲಿ ವಿಷ ಬೀಜ ಬಿತ್ತನೆ ಮಾಡಲಾಗುತ್ತದೆ.ಆದ್ದರಿಂದಅದನ್ನು ಹೋಗಲಾಡಿಸುವುದು ನಮ್ಮೆಲ್ಲರಕರ್ತವ್ಯವಾಗಿದೆ.ಅಲ್ಲಿನ ಕುಲಪತಿ ಪೆÇ್ರ.ಬಟ್ಟು ಸತ್ಯನಾರಾಯಣ ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ. ಇದರಿಂದಅಲ್ಲಿನ ಶೈಕ್ಷಣಿಕ ವಾತಾವರಣ ಹದಗೆಟ್ಟಿದೆ.ಕೆಲವು ಶಿಕ್ಷಕರು ಇದರಲ್ಲಿ ಭಾಗಿಯಾಗುತ್ತಿದ್ದಾರೆಎಂದುಅವರು ಆರೋಪಿಸಿದರು.
ಕ್ಯಾಂಪಸ್‍ನಲ್ಲಿ ಹೋಮ, ಹವನ ಸರಸ್ವತಿ ಪೂಜೆ, ಗಣಪತಿಉತ್ಸವ, ರಾಮನವಮಿ, ಗಾಯತ್ರಿಮಂತ್ರ ಪಠಣಆಚರಿಸಲಾಗುತ್ತಿದೆ. ಅವೈಜ್ಞಾನಿಕ ವಿಚಾರಧಾರೆಯ ವ್ಯಕ್ತಿಗಳನ್ನು ಸಂಪನ್ಮೂಲ ವ್ಯಕ್ತಿಗಳಾಗಿ ಕರೆಸಿ ಕಾರ್ಯಕ್ರಮ ನಡೆಸಲಾಗುತ್ತರುವುದು ನಮ್ಮ ಭಾಗದದುರಾದೃಷ್ಟವಾಗಿದೆ.ಆದ್ದರಿಂದ ಅ.11ರಂದು ನಡೆಯುವ ಹೋರಾಟಕ್ಕೆ ನಮ್ಮ ಬೆಂಬಲವಿದೆಎಂದು ಹೇಳಿದರು.
ಮುಖಂಡರಾದ ಮೆಹಬೂಬ್ ಶಹಾ ದರವೇಶಿ, ಪಿಡ್ಡಪ್ಪಜಾಲಗಾರ, ಸಂತೋಷ ಗೊಂದಳಿ, ಜಗತ್ ಸಿಂಗ್, ಚಂದು ಪವಾರಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…