ಕಲಬುರಗಿ: ಅಫಜಲಪೂರ ತಾಲೂಕಿನ ಗಾಣಗಾಪೂರ ಸುಕ್ಷೇತ್ರವು ಅಮರ್ಜಾ ಭೀಮಾ ನದಿಯ ಸಂಗಮ ಕ್ಷೇತ್ರವಾದ್ದರಿಂದ ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಿಂದಲೂ ಲಕ್ಷಾಂತರ ಭಕ್ತಾದಿಗಳು ಪುಣ್ಯಸ್ನಾನ ಮಾಡುತ್ತಾರೆ. ಆದರೆ, ಈ ಸಂಗಮ ಸ್ಥಳ ಮತ್ತು ನದಿ ತೀರವೂ ಸಂಪೂರ್ಣ ಕಲುಷಿತ ಗೊಂಡಿದೆ. ಇದರತ್ತ ಚಿತ್ತ ಹರಿಸಿ ಸ್ವಚ್ಛ ಗೊಳಿಸುವ ಕಾರ್ಯಕ್ಕೆ ಕೂಡಲೇ ಆದೇಶ ನೀಡಬೇಕೆಂದು ಕರವೇ(ಪ್ರವೀಣ ಶೆಟ್ಟಿ ಬಣ) ದ ಕ.ಕ.ಉಪಾಧ್ಯಕ್ಷ ಸಂತೋಷ ಚೌದ್ರಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.
ಸೋಮವಾರ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ ಅವರು, ದತ್ತನ ಪಾದುಕೆಗಳ ದರ್ಶನಕ್ಕೆ ಬಂದ ಭಕ್ತಾದಿಗಳಿಗೆ ಮಲ ಮೂತ್ರ ವಿಸರ್ಜನೆಗೆ ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೇ ಪರದಾಡುವಂತಾಗಿದೆ. ಬಾಯಾರಿಕೆಯಾದವರು ನೀರು ಖರೀದಿಸುವ ಪರಿಸ್ಥಿತಿ ಇದೆ.ಆದ್ದರಿಂದ ತಾವುಗಳು ವ್ಯವಸ್ಥೆಗೆ ಸ್ಪಂದಿಸಿ, ಆದಷ್ಟು ಬೇಗನೆ ನದಿ ತೀರದ ಸ್ವಚ್ಛತೆ, ಶೌಚಾಲಯ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಕ.ಕ.ಪ್ರಧಾನ ಕಾರ್ಯದರ್ಶಿ ಗೋಪಾಲ ನಾಟೀಕಾರ, ಜಿಲ್ಲಾಧ್ಯಕ್ಷ ಮಾನಸಿಂಗ ಚವ್ಹಾಣ, ಕ.ಕ.ಸಂಚಾಲಕ ಮನೋಹರ ಬಿರನೂರ, ತಾಲೂಕ ಅಧ್ಯಕ್ಷ ವಿಜಯಕುಮಾರ ಅಂಕಲಗಿ, ಎಮ್.ಡಿ.ಮೌಸಿನ, ಪ್ರದೀಪ ಬಾಚನಳ್ಳಿ ಸೇರಿದಂತೆ ಕಾರ್ಯಕರ್ತರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…