ಕಲಬುರಗಿ: ಕೋಮುವಾದ ಅಳಿಸಿ ಕರ್ನಾಟಕ ಕೇಂದ್ರಿಯ ವಿಶ್ವವಿದ್ಯಾಲಯ ಉಳಿಸಿ ಆಂದೋಲನ ಸಮಿತಿಯ ವತಿಯಿಂದ ಕಡಗಂಚಿಯಿಂದ ವಿಶ್ವವಿದ್ಯಾಲಯದವರೆಗೆ ಬೃಹತ್ ಜಾಥಾ ಮಾಡುವ ಮೂಲಕ ವಿಶ್ವವಿದ್ಯಾಲಯ ಮುತ್ತಿಗೆ ಈ ಒಂದು ಹೋರಾಟಕ್ಕೆ ಬಹುಜನ ಸಮಾಜ ಪಕ್ಷ ಸಂಪೂರ್ಣವಾಗಿ ಬೆಂಬಲ ನೀಡುತ್ತದೆ ಎಂದು ಬಿಎಸ್ಪಿ ಜಿಲ್ಲಾಧ್ಯಕ್ಷರಾದ ಸುನೀಲ ಇಂಗನಕಲ್ಲ ಅವರು ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು,ಶರಣರ ನಾಡು ಸೂಫಿಸಂತರ ನಾಡು, ಸಮಾನತೆಯ ಕಲ್ಪನೆಯನ್ನು ಇಡೀ ನಾಡಿಗೆ ಪರಿಚಯಿಸಿದ ಕೀರ್ತಿ ಈ ಭಾಗಕ್ಕೆ ಇದೆ.ಇಂತಹ ನಾಡಿನಲ್ಲಿ ಕೇಂದ್ರಿಯ ವಿಶ್ವವಿದ್ಯಾಲಯ ಆಗಿರುವುದು ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಹೆಮ್ಮೆಯ ವಿಷಯವಾಗಿದೆ.ಸರ್ವಜನಾಂಗದ ಶಾಂತಿಯ ತೋಟವಾಗಬೇಕಿದ್ದ ಈ ವಿದ್ಯಾಲಯದಲ್ಲಿ ಸಮಾನತೆಯ ವಿರೋಧಿ ಆರ್.ಎಸ್.ಎಸ್. ನ ಕೇಂದ್ರ ಸ್ಥಾನವಾಗಿದೆ. ಕೋಮುವಾದ,ಸಂವಿಧಾನ ವಿರೋಧಿ ಚಟುವಟಿಕೆಗಳು ದಿನಾಲೂ ನಡೆಯುತ್ತಿವೆ,ಅಲ್ಲಿನ ಕೆಲವು ಉಪನ್ಯಾಸಕರು, ಮುಖ್ಯಸ್ಥರು,ಅಧಿಕಾರಿಗಳು ಆರ.ಎಸ್.ಎಸ್. ಏಜೆಂಟಗಳಾಗಿ ಸಂವಿಧಾನ ವಿರೋಧಿ,ದೇಶ ವಿರೋಧಿ ಚಟುವಟಿಕೆ ನಡೆಸುತ್ತಿರುವುದು ಅಪಾಯಕಾರಿ ಬೆಳವಣಿಗೆಯಾಗುತ್ತಿದೆ.
ಹಾಗಾಗಿ ಇದನ್ನು ಖಂಡಿಸಿ ದಿನಾಂಕ ಅ. 11ರಂದು ನಡೆಸುತ್ತಿರುವ ವಿಶ್ವವಿದ್ಯಾಲಯ ಮುತ್ತಿಗೆ ಬೃಹತ್ ಜಾಥಾಕ್ಕೆ ಬಹುಜನ ಸಮಾಜ ಪಕ್ಷ ಜಿಲ್ಲಾ ಸಮಿತಿಯು ಸಂಪೂರ್ಣವಾಗಿ ಭಾಗಿಯಾಗಿ ಬೆಂಬಲ ನೀಡುತ್ತಿದ್ದೇವೆ ಎಂದು ಅವರು ಪ್ರತಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…