ವಿದ್ಯುತ್ ಸಮಸ್ಯೆಗೆ ಬೇಸತ್ತು ರಾಜ್ಯ ಹೆದ್ದಾರಿ ತಡೆದು ರೈತರ ಪ್ರತಿಭಟನೆ

0
42

ಸುರಪುರ: ತಾಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರ ವಿದ್ಯುತ್ ಸಮಸ್ಯೆಯಿಂದಾಗಿ ಬೆಳೆಗಳು ಹಾಳಾಗುತ್ತಿವೆ,ಆದರೆ ಜೆಸ್ಕಾಂ ಇಲಾಖೆ ಅಧಿಕಾರಿಗಳು ಸಮಸ್ಯೆ ನಿವಾರಿಸುತ್ತಿಲ್ಲ ಎಂದು ಆರೋಪಿಸಿ ನೂರಾರು ರೈತರು ನಗರದ ನಾಲ್ವಡಿ ರಾಜಾ ವೆಂಕಟಪ್ಪ ನಾಯಕ ವೃತ್ತದ ಬೀದರ್ ಬೆಂಗಳೂರು ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಮಲ್ಲಿಕಾರ್ಜುನ ಸತ್ಯಂಪೇಟೆ ಸೇರಿದಂತೆ ಅನೇಕ ರೈತರು ಮಾತನಾಡಿ, ಹಸನಾಪುರ ಜೆಸ್ಕಾಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಮುಖ್ಯ ವಿಭಾಗ ಕಚೇರಿಗೆ ಭೇಟಿ ನೀಡಿ ನಮ್ಮ ಸಮಸ್ಯೆ ಹೇಳಿದರೆ ಜೆಸ್ಕಾಂ ಅಧಿಕಾರಿಗಳು ನಿರ್ಲಕ್ಷ್ಯ ಮತ್ತು ಸ್ಪಂದಿಸಿಲ್ಲದ ಕಾರಣಗಳಿಂದ ರಸ್ತೆ ತಡೆ ಮಾಡುತ್ತಿದ್ದೇವೆ. ವಿದ್ಯುತ್ ಸರಿಯಾಗಿ ಸರಬರಾಜು ಮಾಡದ ಕಾರಣ ಕೃಷಿ ಪಂಪ್ಸೆಟ್‌ಗಳು ಬಂದಾಗಿವೆ, ಒಂದೆಡೆ ಕಾಲುವೆಗಳಿಗೆ ನೀರಿಲ್ಲ,ಹಳ್ಳದ ನೀರು ತೆಗೆದುಕೊಳ್ಳಲು ವಿದ್ಯುತ್ ಇಲ್ಲ, ಕೋಟ್ಯಾಂತರ ರೂಪಾಯಿ ಬೆಳೆಗಳು ಒಣಗುತ್ತಿವೆ ಅಧಿಕಾರಿಗಳು ಇದನ್ನು ಅರ್ಥ ಮಾಡಿಕೊಳ್ಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

Contact Your\'s Advertisement; 9902492681

ಭತ್ತ, ಹತ್ತಿ ,ಮೆಣಸಿನಕಾಯಿ ಬೆಳೆಗಳು ನೀರಿಲ್ಲದೆ ಒಣಗುತ್ತಿವೆ. ಬೆಳೆಗಳು ಕಾಳು ಕಟ್ಟುವ ಹಂತದಲ್ಲಿವೆ ಸರಿಯಾಗಿ ವಿದ್ಯುತ್ ಸರಬರಾಜು ಇಲ್ಲದೆ ಹಾಕಿದ ಬಂಡವಾಳ ವಾಪಸ್ ಬರುವುದಿಲ್ಲ ಎಂಬ ಆತಂಕ ರೈತರಿಗೆ ಕಾಡುತ್ತಿದ್ದು . ಆದರಿಂದ ಸರ್ಕಾರ ನೀಡಿರುವ ಭರವಸೆಯಂತೆ 7 ತಾಸು ಗುಣಮಟ್ಟದ ವಿದ್ಯುತ್ತು ನೀಡಲು ಸೂಕ್ತ ಕ್ರಮ ವಹಿಸಬೇಕೆಂದು ಪ್ರತಿಭಟನೆ ಮೂಲಕ ಸರ್ಕಾರಕ್ಕೆ ಒತ್ತಾಯಿಸುವುದಾಗಿ ಮಾತನಾಡಿದರು.

ರೈತ ಮುಖಂಡರಾದ ಮಲ್ಲಯ್ಯ ಕಮತಗಿ,ಶಿರುದ್ರ ಉಳ್ಳಿ, ಶಿವಾನಂದ ಕೆಂಭಾವಿ ಮಾತನಾಡಿದರು.ನಂತದ ತಹಶೀಲ್ದಾರ್ ವಿಜಯಕುಮಾರ್ ಕೆ ಸ್ಥಳಕ್ಕೆ ಆಗಮಿಸಿ ರೈತರ ಸಮಸ್ಯೆಗಳ ಆಲಿಸಿ ನಂತರ ಸ್ಥಳಕ್ಕೆ ಜೆಸ್ಕಾಂ ಅಧಿಕಾರಿಗಳ ಕರೆಯಿಸಿ ಸಮಸ್ಯೆ ಪರಿಹರಿಸುವ ಭರವಸೆ ನೀಡಿದ ನಂತರ ಪ್ರತಿಭಟನೆ ನಿಲ್ಲಿಸಿದರು.

ಎರಡು ತಾಸಿಗಿಂತ ಹೆಚ್ಚು ಕಾಲ ರಸ್ತೆ ತಡೆ ನಡೆಸಿದ್ದರಿಂದ ಎಲ್ಲಾ ರಸ್ತೆಗಳಲ್ಲಿ ವಾಹನಗಳು ಕಿಲೋಮೀಟರ್‌ಗಟ್ಟಲೆ ನಿಂತಿದ್ದರಿಂದ ವಾಹನ ಸವಾರರು ಪರದಾಡುವಂತಾಗಿತ್ತು ಹಾಗೂ ಪೊಲೀಸ್ ಇನ್ಸ್ಪೆಕ್ಟರ್ ಆನಂದ ವಾಘಮೊಡೆ ನೇತೃತ್ವದಲ್ಲಿ ಸೂಕ್ತ ಬಂದೋಬಸ್ತ್ ಮಾಡಲಾಗಿತ್ತು.

ಪ್ರತಿಭಟನೆಯಲ್ಲಿ ರೈತರ ಮುಖಂಡರಾದ, ಭೀಮನಗೌಡ ಯಮನೂರ್, ಶಾಂತಪ್ಪ ನಾಯ್ಕೋಡಿ, ಯಂಕಪ್ಪ ಗುತ್ತೇದಾರ್ ಹೈಯ್ಯಾಳಪ್ಪ ದೇವಳಗುಡ್ಡ ಹಣಮಂತರಾಯ ಬಡಿಗೇರ ವೀರೇಶ್ ಬೋನಾಳ ಗೌಡ ಶರಣ ಗೌಡ ಕಚಕನೂರ ಹಾಗೂ ಈ ಸಂದರ್ಭದಲ್ಲಿ ಗ್ರಾಮದ ನೂರಾರು ರೈತರು ಸತ್ಯಂಪೇಟ ಯಮನೂರು ರತ್ತಾಳ ದೇವಿಕೇರ ಕಚಕನೂರು ಶಖಾಪುರ ಹಾಗೂ ಇತರೆ ಗ್ರಾಮಗಳಿಂದ ಸುಮಾರು ನೂರಾರು ರೈತರು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here