ಕಲಬುರಗಿ; ಬೆಂಗಳೂರು ನಗರದ ಅತ್ತಿಬೆಲೆ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ಜರುಗಿದ ಪಟಾಕಿ ಅವಘಡಗಳನ್ನು ತಪ್ಪಿಸುವ ಉದ್ದೇಶದಿಂದ ಮುಂಜಾಗ್ರತ ಕ್ರಮವಾಗಿ ಕಲಬುರಗಿ ಜಿಲ್ಲೆಯಲ್ಲಿ ಪಟಾಕಿ ಅಂಗಡಿಗಳ ಮಾಲೀಕರು ಅಂಗಡಿ ತೆರೆಯಲು ಸೂಕ್ತ ಪ್ರಾಧಿಕಾರದಿಂದ ಪರವಾನಿಗೆ ಪಡೆಯಬೇಕೆಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಸೂಚಿಸಿದ್ದಾರೆ.
ಈ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಮತ್ತು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು (ಕಾನೂನು ಮತು ಸುವ್ಯವಸ್ಥೆ) ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದು, ಸ್ಪೋಟಕ ನಿಯಮಗಳು-2008 ರಲ್ಲಿ ತಿಳಿಸಿರುವಂತೆ ಪಟಾಕಿ ಉತ್ಪಾದನೆ, ಸಂಗ್ರಹಣೆ, ಸಾಗಣಿಕೆ ಹಾಗೂ ಮಾರಾಟ ನಿಯಮಗಳನ್ನು ಎಲ್ಲರು ಚಾಚುತಪ್ಪದೆ ಪಾಲಿಸಬೇಕು. ಇದಲ್ಲದೆ ಅಂಗಡಿ, ಗೋದಾಮಿನಲ್ಲಿ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಅವರು ತಿಳಿಸಿದ್ದಾರೆ.
ಪಟಾಕಿ ಅಂಗಡಿಗಳಲ್ಲಿನ ಸುರಕ್ಷತಾ ಕ್ರಮ ತಪಾಸಣೆಗೆ ಕಲಬುರಗಿ ನಗರ ಮತ್ತು ಜಿಲ್ಲೆಯ 11 ತಾಲೂಕಿನಲ್ಲಿ ತಹಶೀಲ್ದಾರ ನೇತೃತ್ವದಲ್ಲಿ ಪೊಲೀಸ್, ಅಗ್ನಿಶಾಮಕ ಅಧಿಕಾರಿಗಳ ತಂಡ ರಚಿಸಿದ್ದು, ತಂಡವು ಅಂಗಡಿ-ಗೋದಾಮುಗಳಿಗೆ ಭೇಟಿ ನೀಡಿದಾಗ ಅಗತ್ಯ ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ಬಿ. ಫೌಜಿಯಾ ಅಂಗಡಿ ಮಾಲೀಕರಲ್ಲಿ ಮನವಿ ಮಾಡಿದ್ದಾರೆ.
ಕಾಯ್ದೆ ಉಲ್ಲಂಘಿಸಿದಲ್ಲಿ ಸ್ಫೋಟಕ ವಸ್ತು ಜಪ್ತಿ: ಸ್ಪೋಟಕ ನಿಯಮಗಳು-2008ರಲ್ಲಿ ಪಟಾಕಿ ಉತ್ಪಾದನೆ, ಸಂಗ್ರಹಣೆ, ಸಾಗಣಿಕೆ ಹಾಗೂ ಮಾರಾಟದ ಕುರಿತು ಸ್ಪಷ್ಟವಾಗಿ ತಿಳಿಸಲಾಗಿದೆ. ಇದನ್ನು ಉಲ್ಲಂಘಿಸಿದಲ್ಲಿ ಅಂತಹವರ ವಿರುದ್ಧ ಎಲ್ಲಾ ಪೊಲೀಸ್ ಅಧಿಕಾರಿಗಳು ಹಾಗೂ ಪಿ.ಎಸ್.ಐ ದರ್ಜೆಯ ಮೇಲ್ಪಟ್ಟ ಎಲ್ಲಾ ಅಧಿಕಾರಿಗಳು ಸ್ಫೋಟಕ ವಸ್ತು ವಶಪಡಿಸಿಕೊಳ್ಳಲು, ಬಂಧಿಸಲು ಹಾಗೂ ಸ್ಫೋಟಕ ವಸ್ತುಗಳನ್ನು ತೆಗೆದು ಹಾಕಲು ಅಧಿಕಾರ ಹೊಂದಿರುತ್ತಾರೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…