ಶಹಾಬಾದ: ರಾಜ್ಯ ಸರ್ಕಾರ ಕಾಂತರಾಜ ಆಯೋಗದ ಜಾತಿ ಗಣತಿ ವರದಿಯನ್ನು ಅಂಗೀಕರಿಸಿ ಜಾರಿಗೆ ತರಬೇಕು ಮತ್ತು ಮುಸ್ಲಿಮರ ಮೀಸಲಾತಿ 2ಬಿ ಪ್ರಮಾಣವನ್ನು ಶೇ. 8ಕ್ಕೆ ಏರಿಸಬೇಕು ಎಂದು ಒತ್ತಾಯಿಸಿ ನಗರದ ನೆಹರು ವೃತ್ತದಲ್ಲಿ ಗುರುವಾರ ನಗರದಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‍ಡಿಪಿಐ) ವತಿಯಿಂದ ಪ್ರತಿಭಟನೆ ನಡೆಸಿ ತಹಸೀಲ್ದಾರ ಗುರುರಾಜ ಸಂಗಾವಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಎಸ್‍ಡಿಪಿಐ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೈಯದ್ ಸಲಿಂ ಇಲಾಹಿ ಮಾತನಾಡಿ, ರಾಜ್ಯ ಸರಕಾರವು ಈ ಹಿಂದೆ ನೇಮಿಸಿದ ಹಿಂದುಳಿದ ವರ್ಗಗಳ ಎಲ್ಲ ಆಯೋಗಗಳೂ ಮುಸ್ಲಿಮರು ತೀವ್ರ ಹಿಂದುಳಿದ ಸಮುದಾಯವೆಂದು ಗುರುತಿಸಿದೆ. ಕಾಂತರಾಜ ಅಧ್ಯಕ್ಷತೆಯ ಆಯೋಗವು ರಾಜ್ಯದಲ್ಲಿ ಮುಸ್ಲಿಮರ ಜನಸಂಖ್ಯೆಯು ಶೇಕಡಾ 16 ರಷ್ಟು ಇದೆ ಎಂದು ಗುರುತಿಸಿದೆ. ಈ ಜನಸಂಖ್ಯೆ ಮತ್ತು ಹಿಂದುಳಿದಿರುವಿಕೆಗೆ ಅನುಗುಣವಾಗಿ 2 ಬಿ ಪ್ರವರ್ಗದ ಮೀಸಲಾತಿಯನ್ನು ಶೇಕಡಾ 8 ಕ್ಕೆ ಹೆಚ್ಚಿಸಬೇಕಾದ ಅಗತ್ಯವಿದೆ, ಮುಸ್ಲಿಮರ ಹಿಂದುಳಿದಿರುವಿಕೆಯ ಸದ್ಯದ ಸ್ಥಿತಿಗತಿಯನ್ನು ತಿಳಿದುಕೊಳ್ಳಲು ಅಗತ್ಯ ಬಿದ್ದರೆ ಪ್ರತ್ಯೇಕ ಸಮೀಕ್ಷೆಯನ್ನು ನಡೆಸಬೇಕು ಎಂದು ಒತ್ತಾಯಿಸಿದರು.
ಎಸ್‍ಡಿಪಿಐ ನಗರ ಪ್ರಧಾನ ಕಾರ್ಯದರ್ಶಿ ಮಹ್ಮದ್ ಹಬೀಬ್ ಮಾತನಾಡಿ, ಸರ್ಕಾರ ಚುನಾವಣೆ ಸಂದರ್ಭದಲ್ಲಿ ಮತಕ್ಕಾಗಿ ಅಹಿಂದ ವರ್ಗಗಳಿಗೆ ಹೇಳಿತ್ತು ನಾವು ಅಧಿಕಾರಕ್ಕೆ ಬಂದರೆ ಕಾಂತರಾಜ್ ವರದಿಯನ್ನು ಜಾರಿಗೊಳಿಸುತ್ತೇವೆ ಮತ್ತು ಅದೇ ರೀತಿ ಮುಸ್ಲಿಮರಿಗೆ 2ಬಿ ಮೀಸಲಾತಿಯನ್ನು ಮರು ಸ್ಥಾಪಿಸುತ್ತೇವೆ ಎಂದು ಈ ಮಾತನ್ನು ಕಾಂಗ್ರೆಸ್ ಸರ್ಕಾರ ನೀಡದೆ ವಂಚಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಉಪಾಧ್ಯಕ್ಷ ದಾವೂದ್ ಹಳ್ಳಿ, ಭಂಕೂರ ಗ್ರಾ. ಪಂ ಸದಸ್ಯ ಸಾಜೀದ, ರಹೀಮ್ ಖಾನ್, ಶಬ್ಬೀರ್ ಪಟೇಲ್, ಸರ್ಫರಾಜ್, ಇಬ್ರಾಹಿಂ ಪಟೇಲ್,ಅಕ್ಬರ್ ಚಿಟ್ ಸೇರಿದಂತೆ ಮುಂತಾದವರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…