ಸುರಪುರ: ತಾಲ್ಲೂಕು ಪಂಚಾಯತಿಗೆ ನೂತನ ಅಧ್ಯಕ್ಷರ ಆಯ್ಕೆಗಾಗಿ ಇಂದು ನಡೆದ ಪ್ರಕ್ರೀಯೆಯಲ್ಲಿ ತಾಲ್ಲುಕಿನ ಸೂಗುರು ತಾಲ್ಲೂಕು ಪಂಚಾಯತಿ ಕ್ಷೇತ್ರದ ಸದಸ್ಯರಾದ ಶಾರದಾ ಭೀಮಣ್ಣ ಬೇವಿನಾಳ ಅವರು ಅವಿರೋಧವಾಗಿ ಆಯ್ಕೆಯಾದರು.
ಹಿಂದಿನ ಅಧ್ಯಕ್ಷರಾಗಿದ್ದ ಅನುಸುಬಾಯಿ ತಿರುಪತಿಯವರು ವೈಯಕ್ತಿಕ ಕಾರಣದಿಂದ ರಾಜೀನಾಮೆ ಸಲ್ಲಿಸಿದ್ದರಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಜಿಲ್ಲಾಧಿಕಾರಿಗಳ ನಿರ್ದೇಶನದನ್ವಯ ಸಹಾಯಕ ಆಯುಕ್ತರ ಅಧ್ಯಕ್ಷತೆಯಲ್ಲಿ ಇಂದು ನಡೆದ ನೂತನ ಅಧ್ಯಕ್ಷರ ಆಯ್ಕೆ ಚುನಾವಣೆಗೆ ಕೇವಲ ಒಂದೆ ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಶಾರದಾ ಭೀಮಣ್ಣ ಬೇವಿನಾಳ ಅವರನ್ನು ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆಂದು ಸಹಾಯಕ ಆಯುಕ್ತರು ಘೋಷಿಸುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರ ಹರ್ಷ ಮುಗಿಲು ಮುಟ್ಟಿತ್ತು.
ಈ ಸಂದರ್ಭದಲ್ಲಿ ಹಾಜರಿದ್ದ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ರಾಜಾ ಹನುಮಪ್ಪ ನಾಯಕ(ತಾತಾ),ಶಾಸಕರ ಸಹೋದರ ಹಾಗು ಯುವ ಮುಖಂಡ ಹನುಮಂತ ನಾಯಕ(ಬಬ್ಲೂಗೌಡ),ಜಿ.ಪಂ ಸದಸ್ಯ ಮರಿಲಿಂಗಪ್ಪ ಕರ್ನಾಳ,ಬಸನಗೌಡ ಹಳ್ಳಿಕೊಟಿ,ದೊಡ್ಡ ಕೊತಲೆಪ್ಪ ಹಾವಿನ್,ನಗರಸಭೆ ಸದಸ್ಯರಾದ ವೇಣುಮಾಧವ ನಾಯಕ,ನರಸಿಂಹಕಾಂತ ಪಂಚಮಗಿರಿ,ವಿಷ್ಣು ಗುತ್ತೇದಾತರ,ಶಂಕರ ನಾಯಕ,ಸುರೇಶ ಸಜ್ಜನ,ಕಿಶೋರಚಂದ್ ಜೈನ್,ದೊಡ್ಡ ದೇಸಾಯಿ,ಬಲಭೀಮ ನಾಯಕ ಬೈರಿಮರಡಿ,ಭೀಮಣ್ಣ ಬೇವಿನಾಳ,ಶ್ರೀನಿವಾಸ ನಾಯಕ ದರಬಾರಿ,ಈಶ್ವರ ನಾಯಕ,ಅಬ್ದುಲ್ ಗಫೂರ ಖುರೇಶಿ,ರಾಜಾ ಜಯರಾಮ್ ನಾಯಕ ಸೇರಿದಂತೆ ಅನೇಕ ಜನ ತಾಲ್ಲೂಕು ಪಂಚಾಯತಿ ಸದಸ್ಯರು ನೂತನ ಅಧ್ಯಕ್ಷರಿಗೆ ಶುಭ ಕೋರಿದರು.ನಂತರ ಬಿಜೆಪಿ ಕಾರ್ಯಕರ್ತರು ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಪಟಾಕಿ ಸಿಡಿಸಿ ಗುಲಾಲು ಎರಚಿ ಸಂಭ್ರಮಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…