ವಾಡಿ: ಚಿತ್ತಾಪುರ ತಾಲ್ಲೂಕಿನ ಹಲಕರ್ಟಿ ಗ್ರಾಮದಲ್ಲಿ ಬುಧವಾರ ವಿಶ್ವಗುರು ಜಗಜ್ಯೋತಿ ಬಸವೇಶ್ವರ ಭಾವಚಿತ್ರಕ್ಕೆ ಕಿಡಿಗೇಡಿಗಳು ಅಪಮಾನ ಮಾಡಿರುವುದು ಖಂಡನೀಯವಾಗಿದ್ದು ಅತ್ಯಂತ ಹೇಯ ಕೃತ್ಯವಾಗಿದ್ದು ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ವಾಡಿ ವಲಯ ಯುವ ಕಾಂಗ್ರೆಸ್ ಅಧ್ಯಕ್ಷ ಶರಣು ವಾರದ ಒತ್ತಾಯಿಸಿದ್ದಾರೆ.
ಘಟನೆ ಖಂಡಿಸಿ ಹೇಳಿಕೆ ನೀಡಿದ ಅವರು, 12ನೇ ಶತಮಾನದ ಮಹಾನ್ ಕ್ರಾಂತಿಯೋಗಿ ಜಗಜ್ಯೋತಿ ಬಸವೇಶ್ವರ ಅವರು ನಾಡು ಕಂಡ ಅಪ್ರತಿಮ ಚಿಂತಕರು ಹಾಗೂ ಸಮಾಜ ಸುಧಾರಕರಾಗಿದ್ದಾರೆ. ಸಮಾಜದಲ್ಲಿ ಅಶಾಂತಿ ಸೃಷ್ಟಿ ಮಾಡಲು ಕೆಲವು ಕಿಡಿಗೇಡಿಗಳು ಇಂತಹ ಕೃತ್ಯ ಮಾಡಿದ್ದು ಕಂಡು ಬರುತ್ತಿದೆ. ಬಸವೇಶ್ವರ ಮೂರ್ತಿಗಳಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಹಾಗೂ ವಿಕೃತಿ ಮೆರೆದ ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…